LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಭಾವುಕ ಸಂದೇಶವೊAದನ್ನ ಹಂಚಿಕೊAಡಿದ್ದಾರೆ.
ಸಿಎಂ ಹುದ್ದೆಗೆ ಸಿದ್ದರಾಮಯ್ಯ ಅವರು ನೀಡಿದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೆ ಎಕ್ಸ್ ಪೋಸ್ಟ್ನಲ್ಲಿ ಸುದೀರ್ಘ ಸಂದೇಶ ಹಂಚಿಕೊಂಡಿರುವ ಅವರು, ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗುವ ವಿಶೇಷ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ.
ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.
ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜ ಕಾರಣದ ಧೀಮಂತ ನಾಯಕ. ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು