LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Shimoga

ಎಲ್ಲರೊಳಗೊಂದಾಗು ಮಂಕುತಿಮ್ಮ ಎಫ್‍ಐಆರ್‍ಗಳಿಗೆ ಹೆದರಲ್ಲ: ಈಶ್ವರಪ್ಪ | ನೀವೇ ಕೊಂದು ಬಿಡಿ: ಡಿ.ಕೆ.ಸುರೇಶ್

ಶಿವಮೊಗ್ಗ/ಬೆಂಗಳೂರು: ನನ್ನ ವಿರುದ್ಧ ನೂರು ಎಫ್‍ಐಆರ್ ಹಾಕಿದರೂ ನಾನು ಹೆದರಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದರೆ, ಅವರು ಇವರು ನನ್ನನ್ನು ಯಾಕೆ ಕೊಲ್ಲಬೇಕು. ನೀವೇ ಕೊಂದು ನಿಮ್ಮ ಆಸೆ ಈಡೇರಿಸಿಕೊಳ್ಳಿ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳುವ ಮೂಲಕ ಸವಾಲು ಪ್ರತಿ ಸವಾಲು ಎಂಬಂತೆ ಮಾತುಗಳನ್ನಾಡಿದ್ದಾರೆ.

ಶಿವಮೊಗ್ಗದಲ್ಲಿ ಈಶ್ವರಪ್ಪ ಮಾತನಾಡಿ, ಇಂತಹ ನೂರು ಎಫ್‍ಐಆರ್ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ಸರ್ಕಾರ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ರಾಷ್ಟ್ರದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದಿದ್ದಾರೆ.

ಸಂಸದ ಡಿ.ಕೆ.ಸುರೇಶ್ ಅವರಿಗೆ ಮೊದಲು ನೋಟಿಸ್ ಕೊಡಲಿ. ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ನಾನು ಎಲ್ಲೂ ಸಂಸದ ಡಿಕೆ ಸುರೇಶ್ ಅವರಿಗೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿಲ್ಲ. ನನಗೆ ನೋಟಿಸ್ ಬದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್‍ಚಿಟ್ ಸಿಗುವ ವಿಶ್ವಾಸ ಇದೆ ಎಂದರು.

ಮತ್ತೊಂದೆಡೆ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ನಾನು ಕನ್ನಡ ನಾಡಿನ ಪರ ಮಾತನಾಡಿದ್ದಕ್ಕೆ ರಾಷ್ಟ್ರದ ದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ನನ್ನನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಬಿಜೆಪಿಯ ಈಶ್ವರಪ್ಪ ಹೇಳಿದ್ದಾರೆ ಅವರುಇವರು ಏಕೆ ಕೊಲ್ಲಬೇಕು ಈಶ್ವರಪ್ಪನವರೇ ನಾನೆ ನಿಮ್ಮ ಬಂದು ನಿಲ್ಲುತ್ತಾನೆ. ನೀವೇ ಕೊಂದುಬಿಡಿ ಈಶ್ವರಪ್ಪ ನವರೇ ಎಂದು ಹೇಳಿದ್ದಾರೆ.

ಇದಕ್ಕೆ ಸಮಯ ಸ್ಥಳ ನಾನೆ ನಿಗಧಿ ಮಾಡುತ್ತೇನೆ ಎಂದಿರುವ ಡಿ.ಕೆ. ಸುರೇಶ್ ನನ್ನನ್ನು ಕೊಂದು ನಿಮ್ಮ ಆಸೆ ಈಡೇರಿಸಿಕೊಳ್ಳಿ ಎಂದಿದ್ದಾರೆ.ಹೇಗಿದ್ದರೂ ಮಹಾತ್ಮಗಾಂಧಿಯನ್ನು ಕೊಂದ ಕೀರ್ತಿ ಬಿಜೆಪಿ ಪಕ್ಷಕ್ಕಿದೆ. ಎಂದು ಹೇಳುವ ಮೂಲಕ ಈಶ್ವರಪ್ಪ ಹೇಳಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈಗಾಗಲೇ ಈಶ್ವರಪ್ಪ ಅವರ ಹೇಳಿಕೆ ಸಂಬಂಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಲಿದ್ದು, ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿಗೆ ಸಂಬಂಧಪಟ್ಟಂತೆ ದಾವಣಗೆರೆ ಪೊಲೀಸರು ಶಿವಮೊಗ್ಗ ಈಶ್ವರಪ್ಪ ನಿವಾಸಕ್ಕೆ ಬಂದು ಅವರಿಗೆ ನೊಟೀಸ್ ಜಾರಿಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು