LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಾಲಿ ಈಗ ಡ್ಯಾಡಿ

ಸ್ಯಾಂಡಲ್‌ವುಡ್‌ನ ನಟ ರಾಕ್ಷಸ ಡಾಲಿ ಧನಂಜಯ್ ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಧನಂಜಯ್ ಪತ್ನಿ ಡಾ.ಧನ್ಯತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂಭ್ರಮದ ಸುದ್ದಿಯನ್ನು ಡಾಲಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈಗ ತಾನೇ ಜನಿಸಿದ ತಮ್ಮ ಪುತ್ರನ ಕೈ ಫೋಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆನೇ ಧನಂಜಯ್ ತಂದೆಯಾಗುತ್ತಿರುವ ವಿಷಯವನ್ನು ಹಂಚಿಕೊAಡಿದ್ದರು. ಜೊತೆಗೆ ಪತ್ನಿ ಡಾ.ಧನ್ಯತಾ ಅವರೊಂದಿಗಿನ ಮೆಟರ್ನಿಟಿ ಫೋಟೋಶೂಟ್ ಮಾಡಿಸಿ, ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದರು. ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಶುಭಾಶಯಗಳನ್ನು ತಿಳಿಸಿದ್ದರು. ಈಗ ಗಂಡು ಮಗುವಿಗೆ ಜನ್ಮ ನೀಡಿದ್ದು, ಆ ಸಂತಸವನ್ನು ಅವರೊಂದಿಗೆ ಶೇರ್ ಮಾಡಿಕೊಂಡಿದ್ದಾರೆ.
ಡಾಲಿ ಧನಂಜಯ್ ಹಾಗೂ ಡಾ.ಧನ್ಯತಾ 2025 ಫೆಬ್ರವರಿ ತಿಂಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೈಸೂರಿನಲ್ಲಿ ಈ ಜೋಡಿ ಅದ್ಧೂರಿಯಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದರು. ಅದಾದ ಒಂದು ವರ್ಷಕ್ಕೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ವರ್ಷ ಜನವರಿ ತಿಂಗಳಲ್ಲಿ ತಂದೆಯಾಗುತ್ತಿರುವ ಸುದ್ದಿಯನ್ನು ನೀಡಿದ್ದರು. ಈಗ ಡಾಲಿ ಧನಂಜಯ್ ತಮ್ಮ ಪುತ್ರನ ಕೈನ ಫೋಟೋವನ್ನ ಶೇರ್ ಮಾಡಿ As the son rose so did our Greatest joy,our Baby boy. ನಿಮ್ಮ ಪ್ರೀತಿ ಆಶೀರ್ವಾದವಿರಲಿ" ಎಂದು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಡಾಲಿ ಧನಂಜಯ್ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದAತೆ ಚಿತ್ರರಂಗದ ಗಣ್ಯರು ಸೇರಿದಂತೆ ಅವರ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು