LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಸ್ವಯಂ ಪ್ರೇರಿತರವಾಗಿ ರಕ್ತದಾನ ಮಾಡಿ


ಚಿಕ್ಕಬಳ್ಳಾಪುರ: ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಚಿಕ್ಕಬಳ್ಳಾಪುರ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯ 12 ಕಡೆ ರಕ್ತದಾನ ಶಿಬಿರಗಳು ನಡೆದವು.ಸ್ವಯಂ ಪ್ರೇರಿತರವಾಗಿ ರಕ್ತದಾನ ಮಾಡಿದವರಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಪ್ರಮಾಣ ಪತ್ರ ವಿತರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಅವರು ಸ್ವತಃ ರಕ್ತದಾನ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು  ಕಲ್ಯಾಣಾಧಿಕಾರಿ ಡಾ.ಚೇತನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ರಕ್ತದಾನವು ಜೀವ ಉಳಿಸುವ ಮಹತ್ಕಾರ್ಯ, ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು: ಜಿಲ್ಲಾಧಿಕಾರಿ ಜಿ.ಪ್ರಭು ರಕ್ತದಾನವು ಅತ್ಯಂತ ಶ್ರೇಷ್ಟವಾದ ಮಾನವೀಯ ಸೇವೆಯಾಗಿದ್ದು, ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ ಅಪಘಾತದಲ್ಲಿ ಗಾಯಗೊಂಡವರು, ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಶಸ್ತ್ರಚಿಕಿತ್ಸೆಗೆ ಒಳಗಾಗುವವರು ಹಾಗೂ ಹೆರಿಗೆ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುವ ತಾಯಂದಿರ ಜೀವ ಉಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಸಮಾಜದ ಆರೋಗ್ಯ ರಕ್ಷಣೆಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಿಳಿಸಿದರು.
ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಚಿಕ್ಕಬಳ್ಳಾಪುರ ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಆಸ್ಪತ್ರೆಗಳಲ್ಲಿ ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿರುತ್ತದೆ. ವಿಶೇ?Àವಾಗಿ ಅಪಘಾತಗಳು, ಹೆರಿಗೆ, ಕ್ಯಾನ್ಸರ್, ರಕ್ತಹೀನತೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುವ ರೋಗಿಗಳಿಗೆ ರಕ್ತದ ಅಗತ್ಯವಿರುತ್ತದೆ. ಇಂತಹ ಸಂದರ್ಭಗಳಲ್ಲಿ ರಕ್ತದಾನಿಗಳೇ ಜೀವ ಉಳಿಸುವ ಆಶಾಕಿರಣವಾಗುತ್ತಾರೆ. ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯಕ್ಕೆ ಹಾನಿಯಾಗುವುದಿಲ್ಲ. ವೈದ್ಯಕೀಯ ತಪಾಸಣೆಯ ನಂತರ ಅರ್ಹ ಆರೋಗ್ಯವಂತ ವ್ಯಕ್ತಿಗಳು ನಿಯಮಿತವಾಗಿ ರಕ್ತದಾನ ಮಾಡಬಹುದು. ರಕ್ತದಾನದ ಕುರಿತು ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.ಜಿಲ್ಲೆಯಾದ್ಯಂತ ಒಟ್ಟು 11 ಕಡೆಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದ್ದು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ದಾನಿಗಳಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾದರು. ರಕ್ತದಾನವು ಕೇವಲ ದಾನವಲ್ಲ, ಅದು ಮತ್ತೊಬ್ಬರ ಜೀವ ಉಳಿಸುವ ಅಮೂಲ್ಯ ಕೊಡುಗೆ ಎಂಬ ಸಂದೇಶವನ್ನು ಸಾರಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚೇತನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ರಕ್ತದಾನಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST