LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kalabuargi

ಜಮೀನು ಕಸಿದುಕೊಳ್ಳುವ ಭ್ರಮೆ ಬೇಡ ಸಿಎಂ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕಲ್ಬುರ್ಗಿ: ಬಿಡದಿಯ ರೈತರನ್ನು ಬೀದಿಗೆ ತಂದು ಜಮೀನು ಕಸಿದುಕೊಳ್ಳುವ ಭ್ರಮೆಯಲ್ಲಿ ಮುಖ್ಯಮಂತ್ರಿಗಳು ಇದ್ದಲ್ಲಿ ಆ ಭ್ರಮೆಯಿಂದ ಹೊರಕ್ಕೆ ಬರಬೇಕೆಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.ಇಂದು ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಕರ್ತವ್ಯ ಅವರ ಮೇಲಿದೆ. ದಬ್ಬಾಳಿಕೆ ಮಾಡಲು ನೀವು ರಾಜ್ಯದ ಮುಖ್ಯಮಂತ್ರಿಗಳಾಗಿಲ್ಲ. ಈಗಲೂ ಕಾಲ ಮಿಂಚಿಲ್ಲ; ಜನರು ಈಗಾಗಲೇ ಬಿಡದಿ ವಿಚಾರದಲ್ಲಿ ಬೀದಿಗೆ ಇಳಿದಿದ್ದಾರೆ. ಟೌನ್‌ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಳ್ಳಿ ಎಂದು ಆಗ್ರಹಿಸಿದರು.ಇಲ್ಲಿ ಬಂದು ಫೋಟೊ ಹೊಡೆಸಿಕೊಂಡು ಶಿವಪೂಜೆ ಮಾಡಿದ್ದು, ಆ ಕಪಟ ನಾಟಕವನ್ನು ಬದಿಗಿಟ್ಟು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಬಗ್ಗೆ ತಲೆ ಕೆಡಿಸಿಕೊಳ್ಳಿ; ರೈತರ ಬಗ್ಗೆ ತಲೆ ಕೆಡಿಸಿಕೊಳ್ಳಿ. ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ರೈತರ ವಿಚಾರ ಆದ್ಯತೆ ಆಗಬೇಕೇ ವಿನಾ, ಟೌನ್‌ಶಿಪ್‌ಗಳಲ್ಲ; ಟೌನ್‌ಶಿಪ್ ಅಗತ್ಯವೇ? ಖಂಡಿತ ಅಗತ್ಯವಿದೆ. ಆದರೆ, ರೈತರ ಜಮೀನು ಕಸಿದುಕೊಂಡು ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ನಿಜವಾಗಿಯೂ ನಿಮಗೆ ಅಭಿವೃದ್ಧಿಯ ಕಾಳಜಿ ಇದ್ದರೆ, ಬೆಂಗಳೂರಿನ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿ ಎಂಬ ಭ್ರಮೆಯಿಂದ ಕಾಂಗ್ರೆಸ್ ಸರಕಾರ ಹೊರಕ್ಕೆ ಬರಲಿ; ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಹರಿಸಲಿ ಎಂದು ಒತ್ತಾಯಿಸಿದರು.ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಬಿಡದಿ ಟೌನ್‌ಶಿಪ್ ಜೊತೆಗೆ ಕನಕಪುರದಲ್ಲಿ ವಿಮಾನ ನಿಲ್ದಾಣ ಮಾಡಲು ಹೊರಟಿದ್ದಾರಲ್ಲವೇ? ಇವೆರಡೂ ಒಟ್ಟೊಟ್ಟಿಗೆ ಸೇರಿಕೊಂಡಿದೆ. ಡಿ.ಕೆ.ಶಿವಕುಮಾರ್ ಅವರ ಸಾವಿರಾರು ಎಕರೆ ಜಮೀನು ಅಲ್ಲಿದೆ ಎಂದು ಜನಸಾಮಾನ್ಯರೂ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ಆಸಕ್ತಿ ಇರಬೇಕೇ ವಿನಾ, ರಿಯಲ್ ಎಸ್ಟೇಟ್ ಬಗ್ಗೆ ಅಲ್ಲ. ರಿಯಲ್ ಎಸ್ಟೇಟ್ ವಿಷಯ ಮರೆತು ರೈತರ ಬಗ್ಗೆ ಆಲೋಚಿಸಿದರೆ ಬಿಡದಿಯಲ್ಲಿ ರೈತರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಆಗುತ್ತಿರಲಿಲ್ಲ ಎಂದು ತಿಳಿಸಿದರು.
ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಮುಖ್ಯಮಂತ್ರಿಗಳ ಆದ್ಯತೆ ಏನೆಂದು ಇದರಲ್ಲೇ ಗೊತ್ತಾಗುತ್ತದೆ. ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ತಕ್ಷಣ ಬಿಡದಿ ಟೌನ್‌ಶಿಪ್, ಕನಕಪುರದಲ್ಲಿ ವಿಮಾನನಿಲ್ದಾಣದ ನೆನಪಾಗಿದೆ. ಇದರ ಬಗ್ಗೆ ನಾವು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಿದ್ದೇನೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು