LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿರೋಧಿಗಳನ್ನು ಹಗುರ ಪರಿಗಣನೆ ಬೇಡ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿವಿಮಾತು ಹೇಳಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯದ ನೂತನ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯಲ್ಲೂ ಕೂಡ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಸಾಧನೆ ಮಾಡಲು ನಮ್ಮ ಎದುರಾಳಿಗಳನ್ನು ನಾವು ಹಗುರವಾಗಿ ಪರಿಗಣಿಸಬಾರದು.

ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.ಸ್ವಾತಂತ್ರ್ಯ ಬಂದ ಬಳಿಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕೂಡ ಮನೆ ಬಾಗಿಲಿಗೆ ಸೌಲಭ್ಯಗಳನ್ನು ಬಿಜೆಪಿಯ ಕೇಂದ್ರ ಸರಕಾರ ತಲುಪಿಸಿದೆ. ಇತರ ಯಾವ ಸರಕಾರಗಳೂ ಇಂಥ ಕೆಲಸ ಮಾಡಿರಲಿಲ್ಲ. ರಾಜ್ಯದ ಕಾರ್ಯಕರ್ತರ ಮೂಲಕ ಕೇಂದ್ರ ಸರಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸಬೇಕಿದೆ.

ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ವಿಧಾನಪರಿಷತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಕ್ಕೆ ಅಡಿ ಇಡಬೇಕು ಎಂದು ಸೂಚಿಸಿದರು.
ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ನಮಗೆಲ್ಲರಿಗೂ ರಾಜ್ಯ ಪದಾಧಿಕಾರಿಗಳಾಗಿ ಕೆಲಸ ಮಾಡುವ ಜವಾಬ್ದಾರಿ ಲಭಿಸಿದೆ. ನಾವೆಲ್ಲರೂ ಹೊಣೆಯರಿತು ಕರ್ತವ್ಯ ನಿರ್ವಹಿಸಬೇಕು.

ನಮಗೆ ಹೊಣೆಗಾರಿಕೆ ಯಾವ ಕಾಲಘಟ್ಟದಲ್ಲಿ ಲಭಿಸಿದೆ ಎಂಬುದು ಅತ್ಯಂತ ಪ್ರಮುಖವಾದುದು. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಆಗಬೇಕೆಂಬ ಕಳೆದ ಹಲವಾರು ದಶಕಗಳ ಎಲ್ಲ ಹಿಂದೂ ಕಾರ್ಯಕರ್ತರ ಕನಸು, ಹೋರಾಟ ಇದೀಗ ನನಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಜೀ ಅವರ ಅಮೃತಹಸ್ತದಿಂದ ಅದು ಲೋಕಾರ್ಪಣೆ ಆಗಲಿದೆ ಎಂದರು. ಅದೇ ಕಾಲಘಟ್ಟದಲ್ಲಿ ನಮಗೂ ಜವಾಬ್ದಾರಿ ಲಭಿಸಿದೆ ಎಂದು ವಿಶ್ಲೇಷಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ರಾಜ್ಯ ದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ನಮ್ಮ ಎದುರಿಗಿದೆ.ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು; ಅದಕ್ಕಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ ಎಂದು ಅವರು ತಿಳಿಸಿದರು. ಕರ್ನಾಟಕವು ಕೇವಲ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ; ಅದೊಂದು ಸುಭದ್ರ ಕೋಟೆಯಾಗಿದೆ ಎಂಬ ಸಂದೇಶವನ್ನು ನಾವು ನೀಡಬೇಕಿದೆ ಎಂದು ನುಡಿದರು.

ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ನೂತನ ಪಧಾದಿಕಾರಿಗಳ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪಿ. ರಾಜೀವ್, ಪ್ರೀತಮ್ ಗೌಡ, ನಂದೀಶ್ ರೆಡ್ಡಿ ಮತ್ತು ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು