LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಶಿಕ್ಷಣದಿಂದ ಮಾತ್ರ ಅಸಮಾನತೆ ನಿವಾರಣೆ ಸಾಧ್ಯ: ಡಾ.ಈರಣ್ಣ

ಹೊಸಕೋಟೆ: ಶಿಕ್ಷಣದಿಂದ ಮಾತ್ರ ಸಮುದಾಯದಲ್ಲಿ ಅಸಮಾನತೆ ನಿವಾರಿಸಲು ಸಾಧ್ಯವಾಗಲಿದೆ ಎಂದು ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ: ಈರಣ್ಣ ಹೇಳಿದರು. ಅವರು ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಡಾ: ಬಿ.ಅರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಗತ್ತಿನಲ್ಲಿ ಇಂದು ಅಂಬೇಡ್ಕರ್‍ರವರ ಜಯಂತಿಯನ್ನು ಆಚರಿಸಲು ಮುಖ್ಯ ಕಾರಣ ಶೋಷಿತ ಜನರ, ಮಹಿಳೆಯರ, ರೈತ ಕಾರ್ಮಿಕರ ಪರವಾಗಿ ತಮ್ಮನ್ನ ತೊಡಗಿಸಿಕೊಂಡಿದ್ದು ಮಾತ್ರವಲ್ಲ ಜಗತ್ತಿನಲ್ಲಿ ಅಧ್ಬುತವಾದ ಸಂವಿಧಾನವನ್ನು ರಚಿಸುವಲ್ಲಿ ಅವರು ದಿನದ 18 ಗಂಟೆಗಳ ಓದುವ ಮತ್ತು ಬರೆಯುವ ಶ್ರಮದಿಂದ ಇಂದಿನ ಸಮುದಾಯ ಸಮಾನತೆಯ ಆಶಯದಲ್ಲಿ ಬದುಕಲು ಮತ್ತು ಶೋಷಣೆ ವಿರುದ್ಧ ಹೋರಾಡಲು ಶಿಕ್ಷಣ ಒಂದೇ ಪ್ರಮುಖ ಅಸ್ತ್ರವಾಗಿದೆ ತಿಳಿಸಿದರು.
ಸಮಾಜಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕರಾದ ಡಾ: ದೊಡ್ಡಹನುಮಯ್ಯ ಮಾತನಾಡಿ ಡಾ: ಜಗಜೀವನರಾಮ್‍ರವರು ಭಾರತದ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡವರು.

ಸ್ವಾತಂತ್ರ್ಯಪೂರ್ವದಿಂದಲೂ ಶಾಸಕಾಂಗದ ಸದಸ್ಯರಾಗಿ, ಸ್ವಾತಂತ್ರ್ಯ ನಂತರ ಕೇಂದ್ರ ಕಾರ್ಮಿಕ, ಕೃಷಿ ಸಚಿವರಾಗಿ ಗಣನೀಯ ಪ್ರಮಾಣದ ಸೇವೆ ಸಲ್ಲಿಸಿ ದೇಶದ ಹಸಿರುಕ್ರಾಂತಿಯ ನೇತರರಾಗಿ ಕೃಷಿ ಕ್ಷೇತ್ರದಲ್ಲಿ ದೇಶವು ಸ್ವಾವಲಂಬಿಯಾಗಲು ಶ್ರಮಿಸಿದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಆಹಾರ ಪದಾರ್ಥಗಳನ್ನು ಬೆಳೆಯಲು ವೈಜ್ಞಾನಿಕ ಮತ್ತು ತಾಂತ್ರಿಕ ಮಹತ್ವವನ್ನು ನೀಡಿದ್ದಾರೆ.

ಮಹಾತ್ಮ ಗಾಂಧೀಜಿ ಮತ್ತು ಅಂಬೇಡ್ಕರ್‍ರವರ ಭಿನ್ನಾಭಿಪ್ರಾಯಗಳನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಿನ್ಸಿಪಾಲ್ ಡಾ: ಮುನಿನಾರಾಯಣಪ್ಪ ಮಾತನಾಡಿ ಅಂಬೇಡ್ಕರ್‍ರವರು ಜಗತ್ತಿನಲ್ಲಿ ಪ್ರಮುಖವಾಗಿ ಶಿಕ್ಷಣ, ಸಂಘಟನೆ ಮತ್ತು ಹೋರಾಟದಮಹತ್ವವನ್ನು ಸಾರಿದವರು. ಶಿಕ್ಷಣ ಕ್ಷೇತ್ರದಲ್ಲಿಅತಿ ಹೆಚ್ಚು ಪದವಿಗಳನ್ನು ಪಡೆದ ಭಾರತೀಯರಲ್ಲಿ ಇವರೇ ಮೊದಲಿಗರಾಗಿದ್ದಾರೆ.

ಅವರುಅನುಸರಿಸಿದ ಸರಳತೆ ಮತ್ತು ಸಮಾತನೆ,ಜಾತ್ಯಾತೀತತೆಯನ್ನು ನಾವು ಅನುಸರಿಸ ಬೇಕಾದ್ದು ಅಗತ್ಯವಾಗಿದೆ ಎಂದರು.ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಾದ ಎಂಕಾಂ ವಿಆಭಾಗದ ನೀಲಕಂಠ, ಎಂಎಸ್‍ಸಿ ವಿಭಾಗದ ವಾಣಿ, ಎಂಎ ವಿಭಾಗದ ಆದರ್ಶ ರವರುಗಳನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಡಾ: ಚಂದ್ರಕಾಂತ, ಡಾ: ಚಲುವರಾಜು, ಡಾ: ಅಶ್ವಥನಾರಾಯಣ್, ಡಾ: ಅರ್ಜುನ್‍ಗೌಡ, ಎನ್.ಶ್ರೀನಿವಾಸಚಾರ್, ಡಾ: ಕಾವಲಯ್ಯ, ಡಾ: ವಿಶ್ವೇಶ್ವರಯ್ಯ, ಡಾ:ರಾಮಕೃಷ್ಣ ಮುಂತಾದವರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು