LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಶತಮಾನ ಕಂಡ ಸರ್ಕಾರಿ ಶಾಲೆಗಳು ಪಾರಂಪರಿಕ ಶಾಲೆಗಳಾಗಿ ಪರಿವರ್ತನೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ.

ಚಾಮರಾಜನಗರ: ರಾಜ್ಯದಲ್ಲಿ 3139 ಶತಮಾನಕಂಡ ಸರ್ಕಾರಿ ಶಾಲೆಗಳಿದ್ದು ಈ ಪೈಕಿ ಪ್ರಥಮ ಹಂತದಲ್ಲಿ 31 ಶಾಲೆಗಳನ್ನು ಪಾರಂಪಾರಿಕ ಶಾಲೆಗಳನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದರು.
ನಗರದ ಧೀನಬಂಧು ಸಂಸ್ಥೆಯಲ್ಲಿAದು 2019-20ರಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಪರಿವರ್ತನೆಗೊಂಡ ಶಾಲೆಗಳ ಈಗಿನ 6 ಮತ್ತು 7ನೇ ತರಗತಿಗೆ ತಲುಪಿರುವ ವಿದ್ಯಾರ್ಥಿಗಳ ಇಂಗ್ಲೀಷ್ ಭಾಷಾ ಪ್ರಾವಿಣ್ಯತೆಯ ಅಧ್ಯಯನ ಸಂಬAಧ ವರದಿ ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಶತಮಾನ ಕಂಡ ಶಾಲೆಗಳಲ್ಲಿ ಮೊದಲಿಗೆ 31 ಶಾಲೆಗಳನ್ನು ಪಾರಂಪರಿಕ ಶಾಲೆಗಳನ್ನಾಗಿ ಪರಿವರ್ತಿಸುವ ಉದ್ದೇಶವಿದೆ. ಪ್ರತಿ ಜಿಲ್ಲೆಗಳಲ್ಲೂ ಪಾರಂಪರಿಕ ಶಾಲೆಗಳನ್ನು ಪರಿವರ್ತಿಸುವ ಗುರಿ ಹೊಂದಿದ್ದು, ರಾಷ್ಟç ನಾಯಕರು ಭೇಟಿ ನೀಡಿದ ಖ್ಯಾತ ಕವಿಗಳು, ಎಂಜಿನಿಯರ್ ಗಳು, ವಿಜ್ಞಾನಿಗಳು ವ್ಯಾಸಂಗ ಮಾಡಿದ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಪಾರಂಪಾರಿಕ ಶಾಲೆಗಳನ್ನಾಗಿ ಪರಿವರ್ತಿಸಿ ಹಂತ ಹಂತವಾಗಿ ಉಳಿದ ಶಾಲೆಗಳನ್ನೂ ವಿಸ್ತರಿಸಲು ಯೋಜಿಸಿದೆ ಎಂದರು.
ಕನ್ನಡ ಅಭಿವೃದ್ದಿ ಪ್ರಾಧಿಕಾರವು ರಾಜ್ಯ ಶಿಕ್ಷಣ ನೀತಿಯಲ್ಲಿ ಶಿಫಾರಸ್ಸು ಕುರಿತ ವರದಿಯನ್ನು ಸಲ್ಲಿಸಿದೆ. 1500 ಪುಟಗಳ ಎರಡು ವರದಿ ಸರ್ಕಾರದ ಮುಂದಿದೆ. ಮಾತೃ ಭಾಷೆ ಶಿಕ್ಷಣದ ಮಹತ್ವ ಕುರಿತು ವಿವರಿಸಲಾಗಿದೆ. ಭಾಷಾ ಕಲಿಕೆ ಕ್ಷೇತ್ರವು ಪ್ರತಿ ವರ್ಷ ನವೀಕರಣವಾಗಬೇಕಿದೆ. ಶಿಕ್ಷಕರಿಗೆ ತರಬೇತಿ ಕೂಡ ಆಗಬೇಕಿದೆ ಎಂದು ಅಧ್ಯಕ್ಷರು ತಿಳಿಸಿದರು.
ಕನ್ನಡ ಪಠ್ಯ ಕ್ರಮ ಪರಿಷ್ಕರಣೆ ಆಗಬೇಕಿದೆ. ಕನ್ನಡ ಭಾಷೆಯ ಬಗ್ಗೆ ಆರಂಭದಲ್ಲಿಯೇ ಹೇಳಿಕೊಡಬೇಕು. ಸರ್ವನಾಮಗಳ ಬಗ್ಗೆ ಸರಿಯಾಗಿ ತಿಳಿಸಿಕೊಡಬೇಕು. ತರಬೇತಿ ಕಾರ್ಯಕ್ರಮಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಗೆ ಈ ಬಗ್ಗೆ ತಿಳಿಸಲಾಗಿದೆ ಎಂದರು.
ರಾಜ್ಯದ 26 ಜಿಲ್ಲೆಗಳಿಗೆ ಭೇಟಿ ಕೊಟ್ಟಿ ದ್ದೇವೆ. ಕನ್ನಡ ಅನುಷ್ಠಾನದ ಬಗ್ಗೆ ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಿದ್ದೇವೆ. 19700 ಸರ್ಕಾರಿ ಶಾಲೆಗಳಿಗೆ ಖಾತಾ ಪತ್ರ ಇರಲಿಲ್ಲ. ಈ ಬಗ್ಗೆ ಕ್ರಮವಹಿಸಲು ನಿರ್ದೇಶನ ನೀಡಿದ ಬಳಿಕ ಇಂದು ಈ ಸಂಖ್ಯೆ 400ಕ್ಕೆ ಇಳಿದಿದೆ ಎಂದು ಹೇಳಿದರು.
ಇಂಗ್ಲೀಷ್ ಮಾಧ್ಯಮಕ್ಕೆ ಪರಿವರ್ತನೆ ಗೊಂಡ ಶಾಲೆಗಳ ಈಗಿನ 6 ಮತ್ತು 7ನೇ ತರಗತಿಗೆ ತಲುಪಿರುವ ವಿದ್ಯಾರ್ಥಿಗಳ ಇಂಗ್ಲೀಷ್ ಭಾಷಾ ಪ್ರಾವಿಣ್ಯತೆಯ ಅಧ್ಯಯನ ಕುರಿತು ಜಿಲ್ಲಾ ಸ್ವಯಂ ಸೇವೆಗಳ ಒಕ್ಕೂಟ ಧೀನಬಂಧು ಸಂಸ್ಥೆ ಸಲ್ಲಿಸಿರುವ ವರದಿ ಸೂಕ್ಷ್ಮ ಅಧ್ಯಯನದಿಂದ ಕೂಡಿದೆ. ಇದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದೆಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ತಿಳಿಸಿದರು.
ಆರಂಭದಲ್ಲಿ ಮಾತನಾಡಿದ ಧೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಜಿ.ಎಸ್. ಜಯದೇವ ಅವರು ಏಳು ವರ್ಷಗಳ ಕಾಲ ಅಧ್ಯಯನ ಮಾಡಿ ವರದಿ ಸಿದ್ದಪಡಿಸಲಾಗಿದೆ. ಮಕ್ಕಳಿಗೆ ಭಾವನೆಗಳನ್ನು ಸುಲಲಿತವಾಗಿ ಹೇಳಿಕೊಳ್ಳುವ ಅವಕಾಶ ದೊರಕಬೇಕು. ಭಾವನಾತ್ಮಕವಾಗಿ ಕನ್ನಡದಲ್ಲಿ ಅಭಿವ್ಯಕ್ತಿಗೆ ಅವಕಾಶವಾಗಲಿದೆ ಎಂಬುದನ್ನು ಪೋಷಕರು ಗಮನಿಸಬೇಕಿದೆ ಎಂದರು.
ಸಭೆಯಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ. ಸಂತೋಷ ಹಾನಗಲ್ಲ, ಹಿರಿಯ ಸಾಹಿತಿಗಳಾದ ಡಾ. ಹನೂರು ಕೃಷ್ಣಮೂರ್ತಿ, ಓ.ಎಲ್. ನಾಗಭೂಷಣ ಸ್ವಾಮಿ, ಜಿ.ಪಿ. ಬಸವರಾಜು, ಕೆ. ವೆಂಕಟರಾಜು, ಶಿವಸ್ವಾಮಿ, ಅಜೀಂ ಪ್ರೇಮ್ ಜಿ ಫೌಂಡೇಶನ್‌ನ ರಾಮಕೃಷ್ಣ, ಇತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು