LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ: ಡಾ.ಶಿವಶಂಕರ್

ದೊಡ್ಡಬಳ್ಳಾಪುರ/ ಬೆಂಗಳೂರು ಗ್ರಾಮಾಂತರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿ ಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಮೊದಲನೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರತಿ ಕ್ವಿಂಟಾಲ್ ರಾಗಿಗೆ 3846 ರೂಪಾಯಿ ಬೆಂಬಲ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿದೆ.

ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಂಬಂಧಿಸಿದಂತೆ ಸಂಗ್ರಹಣಾ ಏಜೆನ್ಸಿಗಳು ಪ್ರತಿತಾಲ್ಲೂಕು ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿಕೇಂದ್ರಗಳನ್ನು ತೆರೆಯಬೇಕು, ರಾಗಿ ಖರೀದಿಗೆಸಂಬಂಧಿಸಿದಂತೆ ನೋಂದಣಿ ಕಾರ್ಯಕ್ಕೆನಿಗದಿತ ಸ್ಥಳಗಳನ್ನು ಗುರ್ತಿಸಿ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು.

ನೋಂದಣಿಗೆ ಯಾವುದೇ ಸಮಸ್ಯೆ ಆಗದಂತೆ ಕಂಪ್ಯೂಟರ್ ಗಳು, ಇಂಟರ್ನೆಟ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿಬ್ಬಂದಿ ನಿಯೋಜಿಸಿ. ರೈತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಹೇಳಿದರು. ರೈತರಿಂದ ಖರೀದಿಸಿದ ಧಾನ್ಯಗಳನ್ನು ಕ್ರೋಢೀಕರಿಸಿ ಶೇಖರಿಸಲು ಗೋದಾಮಗಳ ಗುಣಮಟ್ಟ ಪರಿಶೀಲಿಸಿ ಎಂದರು.

2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ರೈತರು ನೋಂದಾಯಿಸಿಕೊಂಡು, ಐಡಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ಕಾರ್ಯದರ್ಶಿ ಜಿ. ಗಿರಿಜಾದೇವಿ, ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಆರ್ ರಮೇಶ್, ದೊಡ್ಡಬಳ್ಳಾಪುರ ಎ.ಪಿ.ಎಂ.ಸಿ ಕಾರ್ಯದರ್ಶಿ ಅಂಜುಂ, ಆಹಾರ ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕಿ ಶೋಭ ಹೆಚ್.ಟಿ, ತಾಲ್ಲೂಕು ಆಹಾರ ಶಿರಸ್ತೇದಾರರು ಹಾಗೂ ನಿರೀಕ್ಷಕರು , ಸಿಬ್ಬಂದಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು