LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆ

ಜಿಲ್ಲೆಯಾದ್ಯಂತ ವಿಶೇಷ ಶಿಬಿರಗಳ ಆಯೋಜನೆ

ಬೆಂ.ಗ್ರಾ, ಜಿಲ್ಲೆ ದೇವನಹಳ್ಳಿ: ಪ್ರತಿಯೊಬ್ಬ ನಾಗರಿಕನಿಗೆ ಹಣಕಾಸು ಸೇವೆಗಳ ಸುಲಭವಾಗಿ ಹಾಗೂ ಸಾರ್ವಜನಿಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನದ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ವಾಸಂತಿ ಅಮರ್ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನಕ್ಕೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಅಭಿಯಾನ ಆಯೋಜಿಸಲಾಗಿದೆ. ಈ ವಿಶೇಷ ಅಭಿಯಾನವು ಈಗಾಗಲೇ ಅಕ್ಟೋಬರ್ 21 ರಿಂದ ಪ್ರಾರಂಭವಾಗಿದ್ದು, ಡಿಸೆಂಬರ್ 31 ರವರೆಗೆ ನಡೆಯಲಿದೆ.ಶಿಬಿರದಲ್ಲಿ ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಅಟಲ್ ಪಿಂಚಣಿ ಯೋಜನೆಗೆ ಹೊಸ ನೋಂದಣಿ ಮತ್ತು ಆಧಾರ್ ಜೋಡಣೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅರ್ಜಿಗಳ ಸಂಗ್ರಹಣೆ ನಡೆಯಲಿದೆ.ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಈ ವಿಶೇಷ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿವಿಧ ಹಣಕಾಸು ಸೇವೆಗಳು ಹಾಗೂ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಂಜುನಾಥ್ ನಾಯಕ್, ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನಕ್ಕೆ ಚಾಲನೆಆದಿವಾಸಿಗಳ ಕಲ್ಯಾಣಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮಕ್ರಷರ್ ಮಂಜೂರಾತಿ ರದ್ದುಪಡಿಸಲು ಒತ್ತಾಯಹಾಲಿ ಚಾಂಪಿಯನ್ಸ್ ಆರ್‌ಸಿಬಿ ಹಿಂದಿಕ್ಕಿದ ಮುಂಬೈ- ಈಗ ವಿಶ್ವದ ಶ್ರೀಮಂತ ಫ್ರಾಂಚೈಸಿ!ಮೆಸ್ಸಿಯನ್ನು ಹಿಂದಿಕ್ಕಿ B.O.A.T ಪ್ರಶಸ್ತಿ ಗೆದ್ದ ಕ್ರಿಸ್ಟಿಯಾನೊ ರೊನಾಲ್ಡೊಕನ್ನಡ ರಾಜ್ಯೋತ್ಸವ-ನಮ್ಮ ಹೆಮ್ಮೆಯ ಹಬ್ಬ -ಡಾ. ಶಾಲಿನಿ ರಜನೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳುMR ಜಾಕ್ ಚಿತ್ರದ `ಆರಂಭ ವಸಂತ ಆರಂಭ' ಹಾಡು ಬಿಡುಗಡೆಇಂದಿನಿಂದ ನವೆಂಬರ್ 1ರವರೆಗೆ ಮೂರು ದಿನಗಳ ಕಾಲ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್  ಸಂಭ್ರಮ!ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಭರ್ಜರಿ ಗೆಲುವು: ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ