LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಸ್ತೆಬದಿ ವಾಹನಗಳ ತೆರವಿಗೆ ಚಾಲನೆ

ಬೆಂಗಳೂರು: ಸುದೀರ್ಘ ಕಾಲ ವಾರುಸುದಾರರಿಲ್ಲದೆ ರಸ್ತೆ ಬದಿ ವಾಹನಗಳನ್ನು ನಿಲ್ಲಿಸಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಅವುಗಳನ್ನು ತೆರವು ಮಾಡುವ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಇಂದು ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೇಶ್ವರಂನ ವಾರಾಹಿ ದೇವಸ್ಥಾನದ ಬಳಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಸ್ತೆ ಮತ್ತು ಫುಟ್‌ಬಾತ್ ಯಾರ ಆಸ್ತಿಯೂ ಅಲ್ಲ. ಇದು ಸಾರ್ವಜನಿಕ ಆಸ್ತಿ. ಈ ಜಾಗದಲ್ಲಿ ಸಾರ್ವಜನಿಕರು ಓಡಾಡಲು ಅಡ್ಡಿಪಡಿಸಲು ಯಾರೂ ಮುಂದಾಗಬಾರದು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ದೃಷ್ಟಿಯಿಂದ ಸುದೀರ್ಘಕಾಲ ನಿಲ್ಲಿಸಿದ್ದ ವಾಹನಗಳನ್ನು ತೆರವು ಮಾಡಲಾಗುತ್ತಿದೆ. ಕಳೆದವಾರವಷ್ಟೆ ಇಂತಹ ವಾಹನಗಳಿಗೆ ನೋಟೀಸ್ ಅಂಟಿಸಿ ಸೂಚನೆ ನೀಡಲಾಗಿತ್ತು.ಏಳು ದಿನಗಳಾದರೂ ತೆರವು ಮಾಡದ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ. ಅವುಗಳನ್ನು ಒಂದೆಡೆ ನಿನ್ಲಿ÷್ಲಸಿ ಇನ್ನು 15 ದಿನಗಳ ಕಾಲ ಸಮಯವಾಕಾಶ ನೀಡಲಾಗುವುದು. ಆಗಲು ಸಹ ಅವುಗಳನ್ನು ವಾರುಸುದಾರರು ಬಿಡಿಸಿಕೊಂಡು ಹೋಗದೇ ಇದ್ದಲ್ಲಿ ಅಂತಹ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುವುದು ಎಂದು ಹೇಳಿದ್ದಾರೆ. ಅಸ್ತ್ರ ತಂತ್ರಾಂಶದ ಮೂಲಕ ಈಗಾಗಲೇ ವಾಹನಗಳನ್ನು ಸುದೀರ್ಘ ಕಾಲ ನಿಲ್ಲಿಸಿರುವುದು ಪತ್ತೆ ಹಚ್ಚಲಾಗಿದೆ. ಅಂತಹ ವಾಹನಗಳನ್ನು ಮಾಲೀಕರು ತೆಗೆದುಕೊಂಡು ಹೋಗಬೇಕು. ಇಲ್ಲವಾದರೆ ನಿಯಾಮಾನುಸಾರ ಅವುಗಳನ್ನು ಅಲ್ಲಿಂದ ತೆರವುಗೊಳಿಸಲಾಗುವುದು. ಬೆಂಗಳೂರಿನಲ್ಲಿರುವ ಹಲವು ಸಮಸ್ಯೆಗಳನ್ನು ಹಂತ ಹಂತವಾಗಿ ನಿವಾರಿಸಲು ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.ಶಾಸಕ ದಿನೇಶ್‌ಗುಂಡೂರಾವ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ರಾವ್ ಸೇರಿದಂತೆ ಸಂಚಾರಿ ಪೊಲೀಸ್ ಅಧಿಖಾರಿಗಳು ಜಿಬಿಎ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು. ಜಿಬಿಎ ಮತ್ತು ಸಂಚಾರಿ ಪೊಲೀಸರು ಜಂಟಿಯಾಗಿ ಹಳೆ ವಾಹನಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು