LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಹಯಗ್ರೀವ" ಚಿತ್ರಕ್ಕೆ ಚಾಲನೆ

ಸಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ "ಹಯಗ್ರೀವ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಹಲವಾರು ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು.

ಮುಹೂರ್ತ ಸಮಾರಂಭದ ನಂತರ ಮೈಸೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.
"ಹಯಗ್ರೀವ", ನಮ್ಮ ಕೆವಿಸಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ ಮಂಜುನಾಥ್, ನಾನು ಯೂಟ್ಯೂಬ್‍ನಲ್ಲಿ ದಿ ಬೆಲ್ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ ನಿರ್ದೇಶಕ ರಘುಕುಮಾರ್ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ.

ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದರು.

ನಿರ್ಮಾಪಕರು ಫೋನ್ ಮಾಡಿ ಸಿನಿಮಾ ಮಾಡಿಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ, ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್ ಇದೆ. ಲವ್, ಸೆಂಟಿಮೆಂಟ್, ಸಸ್ಪೆನ್ಸ್ ಸೇರಿದಂತೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು "ಹಯಗ್ರೀವ" ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ "ಹಯಗ್ರೀವ" ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ. ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.

ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ?ಳುತ್ತಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ. ಕಾರ್ತಿಕ್, ಛಾಯಾಗ್ರಹಣ ಹಾಗೂ ಉಮೇಶ್ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್ ರಾಜ್ ಹಾಗೂ ಚೇತನ್ ಸಿದ್ ಬರೆದಿದ್ದಾರೆ ಎಂದು ನಿರ್ದೇಶಕ ರಘುಕುಮಾರ್ ಓ ಆರ್ ತಿಳಿಸಿದರು.

ಇದು ನನ್ನ ಐದನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಒಳ್ಳೆಯ ತಂಡ ಮತ್ತು ಒಳ್ಳೆಯ ಶೀರ್ಷಿಕೆ ಸಿಕ್ಕಿದೆ. ಬಹಳ ದಿನಗಳಿಂದ ಪ್ಲಾನ್ ಮಾಡಿ, ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿಯಾಗುವಂತಹ ಕಥೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು