LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವಿಕೆ 29 ಚಿತ್ರಕ್ಕೆ ಚಾಲನೆ

ದುನಿಯಾ ವಿಜಯ್ ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ "ವಿ ಕೆ 29" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ನಡೆಯಿತು. ಶಾಸಕ ಗೋಪಾಲಯ್ಯ ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. "ಡೇರ್ ಡೆವಿಲ್ ಮುಸ್ತಫಾ" ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ. ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ. ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ "ಚೋಮನ ದುಡಿ"ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ "ಚೋಮನ ದುಡಿ" ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು.

ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಚಿತಾರಾಮ್ ಈ ಚಿತ್ರದ ನಾಯಕಿ. ದುನಿಯಾ ವಿಜಯ್ ಪುತ್ರಿ ಮೋನಿಕಾ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಶಿಶಿರ್ ಕೂಡ ಮುಖ್ಯಪಾತ್ರದಲ್ಲಿದ್ದಾರೆ. ಸ್ವಾಮಿ ಗೌಡ ಛಾಯಾಗ್ರಹಣ ಹಾಗೂ ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.

ಈ ಚಿತ್ರದ ವಿಶೇಷವೆಂದರೆ ತಂದೆ - ಮಗ ನಿರ್ಮಿಸುತ್ತಿದ್ದಾರೆ. ತಂದೆ - ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯ, ಮುಂಬೈನ ಅನುಪಮ್ ಖೇರ್ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ.

ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು ಸ್ಕ್ರಿಪ್ಟ್ ನಲ್ಲೂ ಅರ್ಧಭಾಗ ಕೊಡಬಹುದು ಎಂದು ತಿಳಿಸಿದ ದುನಿಯಾ ವಿಜಯ್, ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕ ದುನಿಯಾ ವಿಜಯ್.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು