LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸೋಮವಾರದೊಳಗೆ ರಾಜ್ಯಕ್ಕೆ ಬರ ಪರಿಹಾರ

ಬೆಂಗಳೂರು: ಮುಂದಿನ ಸೋಮವಾರದೊಳಗೆ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ವೆಂಕಟರಮಣಿ, ಸುಪ್ರೀಂಕೋಟ್‍ಗೆ ತಿಳಿಸಿದ್ದಾರೆ;ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ಸೂಚಿಸುವಂತೆ ರಾಜ್ಯ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ನ್ಯಾಯಮೂರ್ತಿ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ರಾಜ್ಯದ ಪರ ವಕೀಲರು ಲಭ್ಯವಿಲ್ಲದ ಕಾರಣ ವಿಚಾರಣೆಯನ್ನು ಮುಂದೂಡಲು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿ ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೋರಲಾಗಿದೆ ಎಂದು ತಿಳಿಸಿದರು.
ವಿಚಾರಣೆಯನ್ನು ಈ ತಿಂಗಳ 29ಕ್ಕೆ ಮುಂದೂಡಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST