LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"೨೩ ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ವಶ"

ಬೆಂಗಳೂರು : ೨೩ ಕೋಟಿ ೭೬ ಲಕ್ಷ ರೂಪಾಯಿ ಮೌಲ್ಯದ ೧೧ ಕೆಜಿ ಎಮ್ ಡಿ ಎಮ್ ಎ ಕ್ರಿಸ್ಟಲ್ ಹಾಗೂ ೧೦೪೦ ಎಕ್ಸ್ ಟಿ ಸಿ ಪೀಲ್ಸ್ ಗಳು, ೨ ಕೆ.ಜಿ ೨೩೫ ಗ್ರಾಂ ಡ್ರಗ್ಸ್ ತಯಾರಿಕೆಯ ಕಚ್ಚಾ ಸಾಮಗ್ರಿ ಹಾಗೂ ಇತರೆ ವಸ್ತುಗಳನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹದ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುತ್ತಾರೆ. ನೈಜೀರಿಯಾ ದೇಶದ ಹಿಜಕಿ ನಿಜ್ಗೋ ೪೨, ಈತನನ್ನು ಯಲಹಂಕ ಬಳಿ ಇರುವ ಮನೆ ಒಂದರಲ್ಲಿ ಬಂಧಿಸಿರುವ ೨೩ ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ಗಳನ್ನು ವಶಪಡಿಸಿಕೊಂಡಿರುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈತನು ೨೦೧೭ರಲ್ಲಿ ಬಿಸಿನೆಸ್ ವೀಸಾ ಪಡೆದು ಶ್ರೀಲಂಕಾದ ಮೂಲಕ ಭಾರತಕ್ಕೆ ಬಂದಿದ್ದು, ಅವಧಿಯು ಮುಗಿದ ನಂತರವೂ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ವಾಸವಾಗಿದ್ದುಕೊಂಡು ಜೀವನ ನಿರ್ವಹಣೆಗಾಗಿ ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿಕೊಂಡಿದ್ದನು.ಈತನ ವಿರುದ್ಧ ೨೦೧೯ನೇ ಸಾಲಿನಲ್ಲಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಪ್ರಕರಣ ದಾಖಲಾಗಿದ್ದು, ಈತನು ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ನಂತರ ಮತ್ತೆ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿಕೊಂಡು ಮತ್ತೆ ೨೦೨೦ ನೇ ಸಾಲಿನಲ್ಲಿ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯಿದೆ ಮತ್ತು ವಿದೇಶಿಯರ ಕಾಯ್ದೆ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಬಂದಿತನಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು ಎಂದು ಆಯುಕ್ತರು ವಿವರಿಸಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು