LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Tumakuru

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ಡಿ.ಟಿ.ಶ್ರೀನಿವಾಸ್

ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಭಾನುವಾರ ಕುಟುಂಬ ಸಮೇತರಾಗಿಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಶ್ರೀಮಠದ ಸಿದ್ಧಲಿಂಗಸ್ವಾಮೀಜಿಗಳ ದರ್ಶನ ಮಾಡಿ ಆಶಿೀರ್ವಾದ ಪಡೆದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಡಿ.ಟಿ.ಶ್ರೀನಿವಾಸ್,ತುಮಕೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ಮೊದಲು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದಿದ್ದೆ, ಈಗ ಚುನಾವಣೆ ಸಮೀಪದಲ್ಲಿ ಶ್ರೀಗಳು ನನಗೆ ಗೆಲುವಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ ಎಂದರು.ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ತಮಗೆ ಅರಿವಿದೆ.

ಈ ಎಲ್ಲಾ ಸಮಸ್ಯೆಗಳ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸುವುದಾಗಿ ಹೇಳಿದ ಅವರು, ಆಗ್ನೇಯ ಶಿಕ್ಷಕರ ಕ್ಷೇತ್ರದೆಲ್ಲೆಡೆ ಪ್ರವಾಸ ಮಾಡಿ, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದೇನೆ, ಎಲ್ಲೆಡೆ ಉತ್ತಮ ಬೆಂಬಲ ಸಿಕ್ಕಿದೆ, ಈ ಚುನಾವಣೆಯಲ್ಲಿ ತಮ್ಮ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಟಿ.ಶ್ರೀನಿವಾಸ್ ಅವರ ಪತ್ನಿ, ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್
ಪರವಾದ ಒಲವು ಕಂಡುಬಂದಿದೆ. ತಮ್ಮ ಪತಿ ಶ್ರೀನಿವಾಸ್ ಅವರು ಈ ಬಾರಿ ಜಯಗಳಿಸುತ್ತಾರೆ ಎಂದರು. ತಾವು ಬಿಜೆಪಿಯಿಂದ ಶಾಸಕಿಯಾಗಿದ್ದಾಗ ತಮ್ಮ ತಿ ಶ್ರೀನಿವಾಸ್ ಪಕ್ಷೇತ್ರರಾಗಿ ಸ್ಪರ್ಧೆ ಮಾಡಿದ್ದಾಗ ತಾವು ಪತಿಯನ್ನು ಬೆಂಬಲಿಸದೆ, ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿ ಪಕ್ಷನಿಷ್ಠೆ ತೋರಿಸಿದ್ದೆ ಎಂದು ತಮ್ಮನ್ನು ಟೀಕಿಸಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದು, ಬೇರೆ ಪಕ್ಷ ಸೇರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪರಾಧವಲ್ಲ. ಆ ಪಕ್ಷದಲ್ಲಿದ್ದಾಗ ಪಕ್ಷಕ್ಕೆ ದ್ರೋಹ ಮಾಡದೆ ಶಾಸಕಿಯಾಗಿ ಪ್ರಮಾಣಿಕ ಕೆಲಸ ಮಾಡಿದ್ದೆ. ಈಗ ಕಾಂಗ್ರೆಸ್ ಸೇರಿ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ ಹಾಲಪ್ಪ ಮಾತನಾಡಿ, ಶಿಕ್ಷಣ ಕ್ಷೇತ್ರವನ್ನು ಚೆನ್ನಾಗಿ ಬಲ್ಲವರಾದ, ಸಮರ್ಥ, ದಕ್ಷ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರಿಗೆ ಕಾಂಗ್ರೆಸ್ ಪಕ್ಷ ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಟ್ಟಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಪಕ್ಷೇತ್ರರಾಗಿ ಸ್ಪರ್ಧಿಸಿದ್ದ ಶ್ರೀನಿವಾಸ್ ಅವರು ಗೆಲುವಿನ ಸಮೀಪ ಬಂದು ಪರಾಭವಗೊಂಡಿದ್ದರು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಬಲದೊಂದಿಗೆ ಪಕ್ಷದ ಬಲವೂ ಸೇರಿ ಶ್ರೀನಿವಾಸ್ ಅವರು ಗೆಲುವು ಪಡೆಯುವುದು ಶತಸಿದ್ಧ ಎಂದರು.

ಈ ಕ್ಷೇತ್ರದಲ್ಲಿ ಮೂರು ಬಾರಿ ಆಯ್ಕೆಯಾಗಿದ್ದ ಬಿಜೆಪಿ ಅಭ್ಯರ್ಥಿ ಸದಾ ಬೆಂಗಳೂರಿನಲ್ಲೇ ಇರುತ್ತಾರೆ. ಕ್ಷೇತ್ರದಲ್ಲಿ ಕಾಣುವುದೇಯಿಲ್ಲ. ಶಿಕ್ಷಕರ ಸಮಸ್ಯೆ
ಕೇಳುತ್ತಿಲ್ಲ, ಶಾಲೆ, ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಅವರ ತೊಂದರೆ ಏನು ಎಂಬುದನ್ನು ವಿಚಾರಿಸಿಲ್ಲ, ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್, ಕಾರ್ಮಿಕ ಘಟಕದ ಲೋಕೇಶ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಕವಿತಾ, ಮುಖಂಡರಾದ ಗಿರೀಶ್, ಪಿ.ಶಿವಾಜಿ, ನಾರಾಯಣ್, ಎನ್.ಮಹೇಶ್, ರಾಜೇಶ್ ದೊಡ್ಮನೆ, ಬ್ರಹ್ಮಾನಂದರೆಡ್ಡಿ, ಸುನಿಲ್, ನಾಗಮಣಿ, ಮಹಾಲಕ್ಷ್ಮಮ್ಮ ಮೊದಲಾದವರು ಈ ವೇಳೆ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು