ಚೆನ್ನೈ: ನಟಿ ತ್ರಿಷಾ ಕೃಷ್ಣನ್ ಕುರಿತು ನೀಡಿದ ಹೇಳಿಕೆ ಸಂಬಂಧ ತಂಜಾವೂರಿನಲ್ಲಿ ಪೊಲೀಸರ ವಿಚಾರಣೆಯನ್ನು ಎದುರಿಸಿದ ಬಳಿಕ ಮಂಗಳವಾರ ತಡರಾತ್ರಿ ಬಿಡುಗಡೆಗೊಂಡ ಡಿಎಂಕೆ ಹಿರಿಯ ನಾಯಕ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಬಿಡುಗಡೆಯಾದ ತಕ್ಷಣವೇ ಟಿವಿಕೆ ಸರ್ಕಾರ ಮತ್ತು ಮುಖ್ಯಮಂತ್ರಿ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪೊಲೀಸ್ ಠಾಣೆಯಿಂದ ಹೊರಬಂದ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಬಲಿಗರು ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿದ ಅವರು, ತಮ್ಮ ಬಂಧನವನ್ನು `ಸರ್ಕಸ್ ಕ್ಯಾಂಪ್' ಎಂದು ವ್ಯಂಗ್ಯವಾಡಿ, ಮುಖ್ಯಮಂತ್ರಿ ವಿಜಯ್ ಅವರನ್ನು `ಡಮ್ಮಿ ಮುಖ್ಯಮಂತ್ರಿ' ಎಂದು ಟೀಕಿಸಿದರು.ರಾಜ್ಯದ ರೈತರ ನೈಜ ಸಮಸ್ಯೆಗಳನ್ನು ಈಡೇರಿಸಲು ಸಾಧ್ಯವಾಗದ ಸರ್ಕಾರ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಈ ಬಂಧನದ ನಾಟಕವಾಡಿದೆ.