LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ದುಂಡಶೆಟ್ಟಿ ಲಕ್ಷ್ಮಮ್ಮ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ

ಕೆ.ಆರ್.ಪೇಟೆ: ಪಟ್ಟಣದಲ್ಲಿ ೨೮ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ದುಂಡಶೆಟ್ಟಿ ಲಕ್ಷ್ಮಮ್ಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ.
ತಾಯಿ ಮತ್ತು ಮಕ್ಕಳ ಆಕಾಲಿಕ ಮರಣವನ್ನು ತಪ್ಪಿಸಲು ರಾಜ್ಯ ಸರ್ಕಾರವು ವಿಶೇಷವಾದ ಕಾರ್ಯಕ್ರಮವನ್ನು ರೂಪಿಸಿದೆ ತಾಲೂಕು ಕೇಂದ್ರಗಳಲ್ಲಿ ಹೈಟೆಕ್ ಆಸ್ಪತ್ರೆಗಳನ್ನು ಆರಂಭಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಉಚಿತವಾಗಿ ಗುಣಮಟ್ಟದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ರಾಜ್ಯದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹೇಳಿದರು.
ಅವರು ಕೃಷ್ಣರಾಜಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ದುಂಡಶೆಟ್ಟಿ ಲಕ್ಷ÷್ಮಮ್ಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೀಡಿದ ಆತ್ಮೀಯ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು.    ಗ್ರಾಮೀಣ ಪ್ರದೇಶದ ಜನರು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂ ಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಪ್ರದೇಶದಲ್ಲಿಯೇ ಸರ್ಕಾರದ ವತಿಯಿಂದ ಹೈಟೆಕ್ ಆಸ್ಪತ್ರೆಗಳನ್ನು ನಿರ್ಮಿಸಿ ತಜ್ಞ ವೈದ್ಯರನ್ನು ನೇಮಕ ಮಾಡಿ ಗುಣಮಟ್ಟದ ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುತ್ತಿದೆ.
ಗ್ರಾಮೀಣ ಪ್ರದೇಶದ ಜನರು ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಲು ಆರೋಗ್ಯ ಆರೋಗ್ಯ ರಕ್ಷಾ ಕಾರ್ಡ್ ಅಥವಾ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ ಸಾಕು , ಮಹಿಳೆಯರಿಗೆ ಮತ್ತು ಮಕ್ಕಳಿಗೆ ಎಲ್ಲ ರೀತಿಯ ವೈದ್ಯಕೀಯ ಚಿಕಿತ್ಸೆಗಳು ಉಚಿತವಾಗಿ ನಿಮ್ಮ ಮನೆಯ ಬಾಗಿಲಿನಲ್ಲಿಯೇ ದೊರೆಯಲಿವೆ ಎಂದು ತಿಳಿಸಿದರು.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಅಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ರಾಜ್ಯದ ಸಚಿವರಾಗಿದ್ದ ನಾರಾಯಣಗೌಡ ಅವರ ಹೋರಾಟದ ಫಲವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕೆ.ಆರ್. ಪೇಟೆಗೆ ಮಂಜೂರಾಗಿ ಬಂತು ಇಂದು ಅಧಿಕಾರದಲ್ಲಿರುವ ನಾವು ಮುಂದುವರಿದ ಭಾಗವಾಗಿ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ಆಸ್ಪತ್ರೆಗೆ ಅಗತ್ಯವಾಗಿ ಬೇಕಾದ ವೈದ್ಯಕೀಯ ಸಲಕರಣೆಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಸಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ್ದೇವೆ ಎಂದು ಸಚಿವ ಎನ್.ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹೆಚ್.ಟಿ. ಮಂಜು ಮಾತನಾಡಿ, ಕೆ.ಆರ್ ಪೇಟೆ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬರಬೇಕಾಗಿದ್ದ ವೈದ್ಯಕೀಯ ಸಲಕರಣೆಗಳು ಹಾಗೂ ಉಪಕರಣಗಳು ಪಕ್ಕದ ಕೆ ಆರ್ ನಗರ ತಾಲೂಕು ಆಸ್ಪತ್ರೆಗೆ ಹೋಗಿವೆ ಆದ್ದರಿಂದ ನಮ್ಮ ನೂತನ ಆಸ್ಪತ್ರೆಗೆ ಹೊಸದಾಗಿಯೇ ವೈದ್ಯಕೀಯ ಉಪಕರಣಗಳನ್ನು ನೀಡಬೇಕು ಎಂದು ನಾನು ರಾಜ್ಯದ ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಿ ಒತ್ತಾಯಿಸಿದ್ದು ಅವರು ಹೊಸದಾಗಿಯೇ ವೈದ್ಯಕೀಯ ಪರಿಕರಗಳನ್ನು ಒದಗಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ ಈ ಆಸ್ಪತ್ರೆ ಕೆ.ಆರ್ ಪೇಟೆ ನಿರ್ಮಾಣವಾಗಲು ಮಾಜಿ ಸಚಿವರಾದ ನಾರಾಯಣಗೌಡರ ಪರಿಶ್ರಮವೇ ಕಾರಣ ಅವರು ತಾಲೂಕಿನ ಅಭಿವೃದ್ಧಿಗೆ ಪೂರಕವಾಗಿ ನೀಡುವ ಸಲಹೆ ಸಹಕಾರವನ್ನು ಪಡೆಯಲು ನಾನು ಸದಾ ಸಿದ್ದರಾಗಿದ್ದೇನೆ ಎಂದು ಮಂಜು ಸ್ಪಷ್ಟಪಡಿಸಿದರು. ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಸ್.ಸಿ.ಮಂಜುಳಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ. ಮೋಹನ್, ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್, ಮೈಸೂರು ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ.ಮಲ್ಲಿಕಾ, ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಜೆ.ಅಜಿತ್ ತಹಶೀಲ್ದಾರ್ ಡಾ.ಅಶೋಕ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಗ್ಯಾರಂಟಿ ಕಾರ್ಯಕ್ರಮಗಳ ತಾಲೂಕು ಅಧ್ಯಕ್ಷ ಎ.ಬಿ.ಕುಮಾರ್, ಕೆಯುಐಡಿಎಫ್ಸಿ ಮಾಜಿ ಅಧ್ಯಕ್ಷ ಮತ್ತಿಘಟ್ಟ ಕೃಷ್ಣಮೂರ್ತಿ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಮೈಸೂರು ಲ್ಯಾಂಪ್ ಸಂಸ್ಥೆ ಮಾಜಿ ಅಧ್ಯಕ್ಷ ಬಿ.ಎಲ್. ದೇವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೊಡಗಹಳ್ಳಿ ಮಂಜೇಗೌಡ, ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷೆ ಆದಿಹಳ್ಳಿ ಮೀನಾಕ್ಷಿ, ಮಹಿಳಾ ಕಾಂಗ್ರೆಸ್ ಮುಖಂಡರಾದ ಅಕ್ಕಿಹೆಬ್ಬಾಳು ವಿನುತಾ, ಲೋಲಾಕ್ಷಿ, ಶಿವಮ್ಮ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿAಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಜಗದೀಶ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಬಿ.ಶ್ರೀನಿವಾಸ್, ಮುಖಂಡರಾದ ಡಿ.ಪ್ರೇಮ್ ಕುಮಾರ್, ಬಸ್ತಿರಂಗಪ್ಪ ನಂಜುAಡಸ್ವಾಮಿ, ಕೆ.ಆರ್. ಬನ್ನಾರಿ, ಬಳ್ಳೇಕೆರೆ ವಿಜಯಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಸ್ವಾಗತಿಸಿದರೆ ಹಿರಿಯ ಆರೋಗ್ಯ ಅಧಿಕಾರಿ ಶೀಳನೆರೆ ಸತೀಶ್ ವಂದಿಸಿದರು, ಧರ್ಮೇಂದ್ರ ಕಾರ್ಯಕ್ರಮ ನಿರೂಪಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು