LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿಗೆ ಸುಲಭ ಗೆಲುವು

ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ vs ಡಿಸಿ ವಿರುದ್ಧದ ರೋಚಕ ಪಂದ್ಯ, ಆರ್‌ಸಿಬಿ ಅಭಿಮಾನಿಗಳ ಪಾಲಿಗೆ ಅಕ್ಷರಶಃ ಹಬ್ಬದೂಟ ಮಾಡಿಸಿದೆ. ಅತಿಥೇಯ ಡಿಸಿ ನೀಡಿದ್ದ 75 ರನ್‌ಗಳ ಸಾಧಾರಣ ಗುರಿಯನ್ನು, ಆರ್‌ಸಿಬಿ ಕೇವಲ 6.3 ಓವರ್‌ನಲ್ಲೇ ತಲುಪಿದೆ.
ಆರ್‌ಸಿಬಿ 6.3 ಓವರ್‌ನಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 77 ರನ್ ಬಾರಿಸಿ ಜಯ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಅವರು ಐಪಿಎಲ್‌ನಲ್ಲಿ 9,000 ರನ್ ಬಾರಿಸಿದ ಮೊದಲ ಆಟಗಾರ ಎಂಬ ಕೀರ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಒಟ್ಟು 275 ಪಂದ್ಯಗಳಿAದ 9,012 ರನ್ ಗಳಿಸಿರುವ ವಿರಾಟ್ ಕೊಹ್ಲಿ, ತಮ್ಮ ರನ್ ಮಷಿನ್ ಎಂಬ ಬಿರುದಿಗೆ ತಕ್ಕ ಪ್ರದರ್ಶನ ನೀಡಿದ್ದಾರೆ. ಐಪಿಎಲ್‌ನಲ್ಲಿ ಒಟ್ಟು 8 ಸೆಂಚುರಿಗಳನ್ನು ಬಾರಿಸಿರುವ 66 ಅರ್ಧಶತಕಗಳನ್ನು ಬಾರಿಸಿದ್ದಾರೆ. 113 ರನ್ ಅವರ ಇದುವರೆಗಿನ
ಅತ್ಯಧಿಕ ಸ್ಕೋರ್ ಆಗಿದೆ.
ಡಿಸಿ ನೀಡಿದ್ದ 76 ರನ್‌ಗಳ ಸುಲಭ ಗುರಿ ಬೆನ್ನಟ್ಟಿದ ಆರ್‌ಸಿಬಿ, ಆರಂಭದಲ್ಲಿ ಜೋಸೆಫ್ ಬೆಥೆಲ್ (20) ಅವರ ವಿಕೆಟ್ ಕಳೆದುಕೊಂಡರೂ, ದೇವದತ್ ಪಡಿಕ್ಕಲ್ (34) ಮತ್ತು ವಿರಾಟ್ ಕೊಹಲಿ (23) ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಡಿಸಿ ಪರವಾಗಿ ಕೇವಲ ಕೈಲ್ ಜಮೈಸನ್ ಒಂದು ವಿಕೆಟ್ ಪಡೆದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟ್ ಮಾಡಿದ ಡಿಸಿ, 16.3 ಓವರ್‌ನಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 75 ರನ್ ಗಳಿಸಿತು. ಪಂದ್ಯದ ಆರಂಭದ ಕೇವಲ 3.5 ಓವರ್‌ನಲ್ಲೇ ಡಿಸಿ 9 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು. ಡಿಸಿ ಪವರ್‌ಪ್ಲೇನಲ್ಲಿ ಅರಿ ಕಡಿಮೆ ರನ್‌ಗೆ ಅತಿಹೆಚ್ಚು ವಿಕೆಟ್ ಕಳೆದುಕೊಂಡ ತಂಡ ಎಂಬ ಅಪಖ್ಯಾತಿಗೆ ಗುರಿಯಾಗಿದೆ.
ಆರ್‌ಸಿಬಿ ಬೌಲಿಂಗ್ ದಾಳಿಗೆ ಅಕ್ಷರಶಃ ತತ್ತರಿಸಿದ ಡಿಸಿಯ ಬ್ಯಾಟ್ಸಮನ್‌ಗಳು ಮೈದಾನಕ್ಕೆ ಬಂದಷ್ಟೇ ವೇಗವಾಗಿ ಪೆವಿಲಿಯನ್‌ಗೆ ಮರಳುತ್ತಿದ್ದರು. ಒಂದು ಹಂತದಲ್ಲಿ ಅವರು ಆರ್‌ಸಿಬಿಯ ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತ 49 ರನ್ ಆಲೌಟ್ ಕುಖ್ಯಾತಿಯನ್ನು ಮುರಿಯುತ್ತಾರೆ ಎಂದು ಅನಿಸಿದ್ದು ಸುಳ್ಳಲ್ಲ.
ಆದರೆ ಅಭಿಷೇಕ್ ಪೋರೆಲ್ (30) ಮತ್ತು ಡೇವಿಡ್ ಮಿಲ್ಲರ್ (19) ಅವರ 34 ರನ್‌ಗಳ ಜೊತೆಯಾಟ ಡಿಸಿ ತಂಡವನ್ನು 75 ರನ್‌ಗಳವರೆಗೆ ಕೊಂಡೊಯ್ದಿತು. ಆದಾಗ್ಯೂ, ಈ ಫಲಿತಾಂಶವು ತಂಡವೊAದರ ಅತ್ಯಂತ ಕಳಪೆ ಪ್ರದರ್ಶನ ಎಂಬ ಕುಖ್ಯಾತಿಯನ್ನು ಗಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು