LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಹಿಳೆಯರ ಆರ್ಥಿಕ ಸಬಲೀಕರಣ ಬಹುಮುಖ್ಯ: ಕೆ.ಎಚ್.ಮುನಿಯಪ್ಪ

ದೇವನಹಳ್ಳಿ: ಮಹಿಳೆಯರು ಆರ್ಥಿಕವಾಗಿ ಇತರರ ಮೇಲೆ ಅವಲಂಬಿತರಾಗದೇ ಸ್ವತಂತ್ರವಾಗಿ ಜೀವನದಲ್ಲಿ ಮುಂದೆ ಬರಲು ಇಂತಹ
ಸ್ತ್ರೀ ಸ್ವಾವಲಂಬಿ ಯೋಜನೆಗಳನ್ನು ಜಾರಿಗೆ ತಂದಿದೆ. ಸಂಘಸಂಸ್ಥೆಗಳು ಸಾಲದ ಮರುಪಾವತಿಯಲ್ಲಿ ಮಹಿಳೆಯರೇ ಮುಂದು, ಅವರು ದಾಖಲೆ ಮಾಡಿದ್ದಾರೆ ಎಂದು ಆಹಾರನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವ.ಕೆ.ಹೆಚ್.ಮುನಿಯಪ್ಪ ಹೇಳಿದರು.

ದೇವನಹಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ “370 ಸ್ವಸಹಾಯಸಂಘಗಳಿಗೆ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಚೆಕ್ ವಿತರಣೆ ಮತ್ತು ಡಿಜಿಟಲ್ ಗ್ರಂಥಾಲಯಗಳಿಗೆ ಕಂಪ್ಯೂಟರ್ ವಿತರಣೆ ಕಾರ್ಯಕ್ರಮ “ಆಹಾರ ನಾಗರೀಕ ಸರಬರಾಜು ಇಲಾಖೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಉಸ್ತುವಾರಿ ಸಚಿವ.ಕೆ.ಹೆಚ್.ಮುನಿಯಪ್ಪ ದೀಪಬೆಳಗುವುದರ ಮೂಲಕ ಉದ್ಘಾಟಿಸಿದರು.

ಡಾ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ನಾನು ಸಹ ಸಂಸದನಾಗಿದ್ದ ಸಂದರ್ಭದಲ್ಲಿ ಸೋನಿಯಾಗಾಂಧಿಯವರ ಆಶಯದಂತೆ ಮಹಿಳೆಯರ ಸಬಲೀಕರಣಕ್ಕಾಗಿ ತಂದಂತಹ ಆರ್ಥಿಕ ಅಭಿವೃದ್ಧಿಯ ಯೋಜನೆಯ ಇದಾಗಿದ್ದು ಎನ್‍ಎಲ್‍ಆರ್ ಎಂ ಯೋಜನೆಯಡಿಯಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸಧೃಡವಾಗಿಸಲು ಹಾಗೂ ನಾಯಕತ್ವದ ಗುಣಗಳನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಸ್ವಸಹಾಯ ಸಂಘಗಳ ಮುಖಾಂತರ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳು ಸದಸ್ಯತ್ವ ಪಡೆದು ಡಿಜಿಟಲ್ ಗ್ರಂಥಾಲಯ ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸದಲ್ಲಿ ಉನ್ನತಿ ಸಾಧಿಸಿ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ ಸ್ತ್ರೀ ಸಾಮರ್ಥ್ಯ ಹೆಚ್ಚಿಸಲು ಸ್ವಸಹಾಯ ಸಂಘ ಗುಂಪುಗಳಿಗೆ ಚೆಕ್ ವಿತರಣೆ ಮತ್ತು ತಾಲೂಕಿನ ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯಗಳಿಗೆ ಕಂಪ್ಯೂಟರ್ ವಿತರಣೆ ಮಾಡಿ ನಂತರ ಸ್ವಸಹಾಯ ಸಂಘದ ಬಿಜಿಎಂ ಮಹಿಳೆರಿಗೆ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ಇಒ ಶ್ರೀನಾಥ್ ಗೌಡ, ಜಿಲ್ಲಾ ಯೋಜನಾಧಿಕಾರಿ ವಿಠಲ್ ಕಾವಳೆ, ಜಿಪಂ ಮಾಜಿ ಅಧ್ಯಕ್ಷ ಚನ್ನಹಳ್ಳಿ ರಾಜಣ್ಣ, ಕೆಪಿಸಿಸಿ ಸದಸ್ಯರಾದ ವಿ.ಶಾಂತ್ ಕುಮಾರ್, ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಸಿ.ಜಗ
ನ್ನಾಥ್, ಎಸ್ ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಸನ್ನಕುಮಾರ್, ವಿಜಯಪುರ ಬಲಾಕ್ ಕಾಂಗ್ರೇಸ್ ಅಧ್ಯಕ್ಷರಾಮಚಂದ್ರಪ್ಪ, ಬಿದಲೂರು ಗ್ರಾ. ಪಂ ಅಧ್ಯಕ್ಷ ಎಸ್.ಪಿ.ಮುನಿರಾಜು, ಜಾಲಿಗೆ ಗ್ರಾಪಂ ಅಧ್ಯಕ್ಷ ಆನಂದ್ ಕುಮಾರ್, ಪುರಸಭಾ ಸದಸ್ಯರಾದ ವೇಣುಗೋಪಾಲ್ ಮತ್ತು ರಘು ಮುಖಂಡರಾದ ಶಂಕರಪ್ಪ, ಲಕ್ಷ್ಮಣಗೌಡ, ಎಸ್ .ಆರ್ ರವಿಕುಮಾರ್ ಸೇರಿದಂತೆ ತಾಲೂಕಿ ಗ್ರಾಮ ಪಂಚಾಯತಿಯ ಪಿಡಿಒಗಳು ಮತ್ತು ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು