ನವದೆಹಲಿ: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದೆ. ಜಾರಕಿಹೊಳಿ ಅವರ ಕುಟುಂಬಕ್ಕೆ ಸೇರಿದ 21 ಸ್ಥಳಗಳಲ್ಲಿ ಇಡಿ ಶೋಧಕಾರ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪ್ರಕಟಣೆ ಮೂಲಕ ಹಂಚಿಕೊಂಡಿದ್ದು, ಲೋಕೋಪಯೋಗಿ ಇಲಾಖೆಯಲ್ಲೂ ಅವ್ಯವಹಾರ ನಡೆದಿರೋದನ್ನ ಬಹಿರಂಗಪಡಿಸಿದೆ.ಈ ಮಾಹಿತಿಯನ್ನ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ , ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ.ಜಾರಿ ನಿರ್ದೇಶನಾಲಯ ಇದನ್ನ ದೊಡ್ಡ ಸಾಧನೆಯಂತೆ ಬಿಂಬಿಸುತ್ತಿದೆ. ಆದರೆ ಯಾವುದೇ ದೋಷಾರೋಪ ಪಟ್ಟಿ ಇಲ್ಲ, ವಿಚಾರಣೆಯೂ ಇಲ್ಲ. ಸಾರ್ವಜನಿಕವಾಗಿ ಕೇವಲ ಚಾರಿತ್ರ್ಯ ಹರಣ ನಡೆಯುತ್ತಿದೆ. ಬೇರೆ ಯಾವುದೇ ದೇಶದಲ್ಲಿ ಹೀಗೆ ನಡೆಯುವುದಿಲ್ಲ. ದಯವಿಟ್ಟು ನೀವೇ ಸ್ವತಃ ಯೋಚಿಸಿ? ಎಂದು ಬರೆದುಕೊಂಡಿದ್ದಾರೆ. ಮಲ್ಯ ಅವರ ಎಕ್ಸ್ ಪೋಸ್ಟ್ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.