LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಿಲ್ಡರ್‍ಗಳಿಗೆ ಇ.ಡಿ. ಬಿಸಿ

ಬೆಂಗಳೂರು: ಬೆಂಗಳೂರು ಹಾಗೂ ಮೈಸೂರಿನ ಹಲವು ಕಡೆ ಬಿಲ್ಡರ್‍ಗಳಿಗೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶಾಕ್ ನೀಡಿ ಮುಂಜಾನೆಯೇ 11 ಕಡೆಗಳಲ್ಲಿ ಬಿಲ್ಡರ್‍ಗಳ ಮನೆ ಹಾಗೂ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದರು. ಪ್ರತಿಷ್ಠಿತ ಬಿಲ್ಡರ್‍ಗಳ ಮನೆ ಹಾಗೂ ಕಚೇರಿಗಳು ದಾಳಿಗೆ ಒಳಗಾದವು. ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದರು.

ದಾಳಿಗೆ ಒಳಗಾದ ಹಲವು ಬಿಲ್ಡರ್‍ಗಳ ಹೆಸರು ಸೈಟ್ ಕೊಡಿಸುವುದಾಗಿ ಹೇಳಿ ವಂಚನೆ, ಆಸ್ತಿಪತ್ರ ಅವ್ಯವಹಾರ, ರಿಯಲ್ ಎಸ್ಟೇಟ್ ಆಸ್ತಿಗಳ ಮೌಲ್ಯದಲ್ಲಿ ಅಕ್ರಮ, ತೆರಿಗೆ ನೋಂದಣಿಯಲ್ಲಿ ಕಳ್ಳತನ, ಹೀಗೆ ಹಲವು ಅವ್ಯವಹಾರಗಳಲ್ಲಿ ಕೇಳಿಬಂದಿದೆ ಎನ್ನಲಾಗಿದೆ. ಈ ಬಗ್ಗೆ ನೊಂದವರು ಹಾಗೂ ಬಿಲ್ಡರ್‍ಗಳ ಸಮೀಪವರ್ತಿಗಳು ದೂರು ನೀಡಿದ್ದು, ದೊರೆತುಬಂದ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಕೆಲವು ತಿಂಗಳ ಹಿಂದೆ ಅಕ್ರಮ ಹಣ ಲೇವಾದೇವಿ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರಿನಲ್ಲಿ ಎಂಟು ಕಡೆ ದಾಳಿ ನಡೆಸಿ 11.5 ಕೋಟಿ ರೂ. ವಶಪಡಿಸಿಕೊಂಡಿದ್ದರು. ಹಣ ಲೇವಾದೇವಿ ಮತ್ತು ಅಕ್ರಮ ವಹಿವಾಟಿಗೆ ಸಂಬಂಧಿಸಿ ಕೆಲವೊಂದು ಮಾಹಿತಿಯನ್ನು ಪಡೆದುಕೊಂಡಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು