LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026

ಎಸ್‌ಐಆರ್ ಪಟ್ಟಿಯಲ್ಲಿ ಹೆಸರಿಲ್ಲ ಎಂದು ಭಯ ಬೇಡ: ಡಿಸಿ ಡಾ. ಅನುರಾಧ



ಬೆಂ.ಗ್ರಾ ಜಿಲ್ಲೆ ದೇವನಹಳ್ಳಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬAಧಿಸಿದAತೆ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಎಂದು ಮತದಾರರು ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ ತಿಳಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‌ಐಆರ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ ಮತದಾರರ ಹೆಸರು ಎಸ್‌ಐಆರ್ ಪಟ್ಟಿಯಲ್ಲಿ ಇಲ್ಲ ಎಂದು ಆತಂಕ ಪಡುವ ಅಗತ್ಯವಿಲ್ಲ, ಆಗಸ್ಟ್ 08 ವರೆಗೆ ಎಸ್‌ಐಆರ್ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 17 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಆಗಸ್ಟ್ 17 ರಿಂದ ಸೆಪ್ಟೆಂಬರ್ 16 ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಸೂಕ್ತ ದಾಖಲೆಗಳನ್ನು ನೀಡಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 19 ರಂದು ಪ್ರಕಟಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, 9,12,913 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಅಗಸ್ಟ್ 04 2026 ವರೆಗೆ ಒಟ್ಟು 7,94,061 ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ. ಶೇ. 86.98 ರಷ್ಟು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಗೈರು, ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು 1,18,608 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 66,587 ಶಾಶ್ವತ ವಲಸೆ ಹಾಗೂ 25,039 ಮರಣ ಹೊಂದಿದ ಪ್ರಕರಣಗಳು, 12,038 ದ್ವಿಪ್ರತಿಗಳು, 14,139 ಗೈರು ಹಾಗೂ ಇತರೆ 805 ಸೇರಿವೆ.
181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 1,91,648 ನಮೂನೆಗಳು ಗಣಕೀಕೃತಗೊಂಡಿವೆ. 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ 1,91,536 ನಮೂನೆಗಳು ಗಣಕೀಕೃತಗೊಂಡಿವೆ. 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 2,17,119 ನಮೂನೆಗಳು ಗಣಕೀಕೃತಗೊಂಡಿವೆ. 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 1,93,758 ನಮೂನೆಗಳು ಗಣಕೀಕೃತಗೊಂಡಿವೆ.ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿದ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು, ಮತದಾರರು ತಮ್ಮ ಅವಶ್ಯಕ ಮಾಹಿತಿಗಳನ್ನು ಭರಣಾ ಮಾಡಿದ ಏಣಿಕೆ, ಗಣತಿ ನಮೂನೆಗಳನ್ನು (ಇಟಿumeಡಿಚಿಣioಟಿ ಈoಡಿms) ಃಐಔರವರಿಗೆ ನೀಡಿ ಸಹಕರಿಸಬೇಕೆಂದು ತಿಳಿಸಿದರು. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST