LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಬಗ್ಗೆ ಜಾಗೃತಿ ಜಾಥಾ

ರಾಮನಗರ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ರಾಮನಗರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿದ್ಯುತ್ ಅವಘಡ, ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಬುಧವಾರ ನಗರದ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸಿದರು.

ರಾಮನಗರ ವಿಭಾಗ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜು ಮಾತನಾಡಿ, ವಿದ್ಯುತ್ ಸುರಕ್ಷತೆ ಬಗ್ಗೆ ಸರಿಯಾದ ಅರಿವಿಲ್ಲದೆ ಸಾರ್ವಜನಿಕವಾಗಿ ಅನೇಕ ವಿದ್ಯುತ್ ಅಫಘಾತ, ಅವಘಡಗಳನ್ನು ಕಾಣುತ್ತಿದ್ದೇವೆ. ಇದಕ್ಕೆ ಸಾರ್ವಜನಿಕರಲ್ಲಿ ಸರಿಯಾದ ಮಾಹಿತಿ ಕೊರತೆ ಇರುವುದು.

ಆ ಕಾರಣದಿಂದ ಜನರಿಗೆ ಸರಿಯಾದ ಮಾಹಿತಿ ವಿದ್ಯುತ್ ಅಫಘಾತ ತಡೆಗಟ್ಟುವಿಕೆ, ಅಫಘಾತ ಆದ ಸಂಧರ್ಭದಲ್ಲಿ ಅನುಸರಣೆ ಮಾಡಬೇಕಿರುವ ಕ್ರಮ ವಹಿಸಬೇಕಾದ ಜಾಗೃತಿ ಸಾರ್ವಜನಿಕರು ಪ್ರತೀ ಕ್ಷಣ ಇರಬೇಕಾದ ಎಚ್ಚರ ಮುಂತಾದ ಹಲವಾರು ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಥಾದ ಮೂಲಕ ಸಾರ್ವಜನಿಕರು, ಗ್ರಾಹಕರಲ್ಲಿಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ, ಚರ್ಚಾಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯುತ್ ಅಪಘಾತಗಳು, ಅವಘಡಗಳ ಬಗ್ಗೆ ತಿಳಿಹೇಳುವ ಕೆಲಸ ಬೆಸ್ಕಾಂ ಮಾಡಲಾಗುತ್ತಿದೆ. ಅಲ್ಲದೇ, ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳು ನಡೆಸುವ ಗ್ರಾಮಸಭೆಗಳ ಮೂಲಕ ಸಾರ್ವಜನಿಕರಿಗೆಜಾಗೃತಿ ಮಾಹಿತಿ ನೀಡುವ ಕೆಲಸ ಮಾಡಲಾಗುತ್ತದೆ ಎಂದರು.
ಚಾಮುಂಡೇಶ್ವರಿ ದೇವಾಲ ಯದ ಆವರಣದಿಂದ ಹೊರಟ ಜಾಥಎಂ.ಜಿ.ರಸ್ತೆ, ಹಳೇ ಬಸ್ ನಿಲ್ದಾಣ, ಮುಖ್ಯರಸ್ತೆಗಳಲ್ಲಿ ಸಂಚರಿಸಿತು. ಧ್ವನಿವರ್ಧಕದಲ್ಲಿ ತಿಳುವಳಿಕೆ ಮತ್ತು ಮಾಹಿತಿ ಪತ್ರ ಹಿಡಿದುಜನಪದ ಡೊಳ್ಳು ಮುಖಾಂತರ ಮೆರವಣಿಗೆಯಲ್ಲಿ ಸಾಗಿದರು.

ಜಾಥಾದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರಾಮನಗರ ವಿಭಾಗ ಕೃಷ್ಣಮೂರ್ತಿ, ಚನ್ನಪಟ್ಟಣ ಚಿದಾನಂದ್, ಬೇವೂರು ಪುಟ್ಟಸ್ವಾಮಿ, ಚಂದನ, ಸಹಾಯಕ ಅಭಿಯಂತರರಾದ ಪ್ರಭಾಕರ್, ಹರ್ಷ, ಪ್ರಸಾದ್, ಕೃಷ್ಣಪ್ರಸಾದ್, ಕಿರಿಯಅಭಿಯಂತರ ಶೀಲಾ, ಚಂದ್ರಶೇಖರ್, ದಿಲೀಪ್, ಸಂದೇಶ್, ಪ್ರಕಾಶ್ ಮುಂತಾದವರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು