LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿದ್ಯುತ್ ದರ ಇಳಿಕೆ ಇಂದಿನಿಂದ ಜಾರಿ

ಬೆಂಗಳೂರು: ಗೃಹ ಬಳಕೆಯಲ್ಲಿ 100 ಯುನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‍ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ.

2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದಿನಿಂದಲೆ ಜಾರಿಯಾಗಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್ ದರ ನಿಗದಿ ಮಾಡಿದೆ.ಮೊದಲು 100ಕ್ಕಿಂತ ಹೆಚ್ಚು ಯುನಿಟ್ ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‍ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್‍ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ.

ಇನ್ನು 100 ಯುನಿಟ್‍ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್‍ಗೆ 4.75 ರೂ. ಪಾವತಿಸುತ್ತಿದ್ದಾರೆ.ಆದರೆ ಸರ್ಕಾರ 200 ಯುನಿಟ್ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‍ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್‍ನಲ್ಲಿ ಬರುವ ಬಿಲ್‍ನಲ್ಲಿ ಬರುವುದಿಲ್ಲ. ಮೇ ತಿಂಗಳಿನಲ್ಲಿ ಬರುವ ಬಿಲ್‍ನಲ್ಲಿ ಈ ದರ ಅನ್ವಯವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST