LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಚಿತ್ರಕಲೆ, ಶಿಲ್ಪಕಲೆೆ, ರಂಗಭೂಮಿ ವಿವಿಧ ಕಲೆಗಳಲ್ಲಿ ನಿರತರಾಗಿರುವ ಕಲಾವಿದರಿಗೆ ಪ್ರೋತ್ಸಾಹ ಕರ್ನಾಟಕ ಇಂಟರ್ ನ್ಯಾಷನಲ್ ಆರ್ಟಿಸ್ಟ್ ವಿಲೇಜ್ ಚಾರಿಟಬಲ್ ಟ್ರಸ್ಟ್ ಸಹಾಯ ಹಸ್ತ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಸಭಾಂಗಣದಲ್ಲಿ ಕರ್ನಾಟಕ ಇಂಟರ್ ನ್ಯಾಷವಲ್ ಆರ್ಟಿಸ್ಟ್ ವಿಲೇಜ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ ಮತ್ತು ವೆಬ್ ಸೈಟ್ ಬಿಡುಗಡೆ ಹಾಗೂ ಜೀವಮಾನ ಶೇಷ್ಠ ಕಲಾ ಸಾಧಕರ ಪ್ರಶಸ್ತಿ ಹಾಗೂ ಹಿರಿಯ, ಕಿರಿಯ ಕಲಾವಿದರ ಚಿತ್ರ ಪ್ರದರ್ಶನ ಕಾರ್ಯಕ್ರಮ.
ಸಚಿವರಾದ ಹೆಚ್.ಕೆ.ಪಾಟೀಲ್ ರವರು, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಅಧ್ಯಕ್ಷರಾದ ಪ್ರ.ಸ.ಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್ ರವರು, ಚಲನಚಿತ್ರ ನಿರ್ದೇಶಕ ರಾಮ್ ನಾರಾಯಣ, ಸಂಗೀತ ನಿರ್ದೇಶಕ ರಮೇಶ್ ಕೃಷ್ಣ, ಖ್ಯಾತ ನಟಿ ಕುಮಾರಿ ಸಂಜನಾ ತ್ರಿವೇದಿ, ಅಧ್ಯಕ್ಷರಾದ ಬಿ.ಜಿ.ಅವಟಿರವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ನಂತರ ಟ್ರಸ್ಟ್ ಹಾಗೂ ವೆಬ್ ಸೈಟ್ ಉದ್ಘಾಟನೆ ಮಾಡಿ ಸಾಧಕರಿಗೆ ಸನ್ಮಾನಿಸಿದರು.
ಸಚಿವರಾದ ಹೆಚ್.ಕೆ.ಪಾಟೀಲ್ ರವರು ಮಾತನಾಡಿ. ಕರ್ನಾಟಕ ಇಂಟರ್ ನ್ಯಾಷನಲ್ ಆರ್ಟಿಸ್ಟ್ ವಿಲೇಜ್ ಟ್ರಸ್ಟ್ ರಾಜ್ಯದ ವಿವಿಧ ಕ್ಷೇತ್ರದ ಕಲಾವಿದರಿಗೆ ಪ್ರೋತ್ಸಾಹ, ಸಹಕಾರ ನೀಡುವ ಸಂಸ್ಥೆಯಾಗಿದೆ. ಟ್ರಸ್ಟ್ ಸಹಕಾರ ನೀಡಲು ಸರ್ಕಾರ ಬದ್ದವಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಸಾಧನೆ ಮಾಡಲು ಸಾಧ್ಯ.
ಕಲೆ ಮತ್ತು ಕಲಾವಿದರು ಉಳಿದರೆ ನಾಡಿನ ಇತಿಹಾಸ ತಿಳಿಯಬಹುದು, ಕಲಾವಿದ ಇಲ್ಲವೆಂದರೆ ಇತಿಹಾಸ ತಿಳಿಯಲು ಆಸಾಧ್ಯ. ವಿವಿಧ ರಂಗದ ಕಲಾವಿದರಿಗೆ ಸರ್ಕಾರದ ಜೊತೆಯಲ್ಲಿ ಸಂಘ, ಸಂಸ್ಥೆಗಳು ಆಸರೆಯಾದರೆ ಕಲಾವಿದರ ಬದುಕು ಹಸನಾಗುತ್ತದೆ ಎಂದು ಹೇಳಿದರು.
ಡಾ||ಬಿ.ಜಿ.ಅವಟಿರವರು ಮಾತನಾಡಿ ಚಿತ್ರಕಲಾವಿದರು, ಸಂಗೀತ, ನೃತ್ಯ ಶಿಲ್ಪಕಲೆ ನಾಟಕ, ರಂಗಭೂಮಿ ಉಳಿಯಬೇಕು ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡಲು ಟ್ರಸ್ಟ್ ಸ್ಥಾಪಿಸಲಾಗಿದೆ. ರಾಜ್ಯದ ಎಲ್ಲ ಮೂಲೆಯಲ್ಲಿ ಕಲಾವಿದರಿಗೆ ಅವರಿಗೆ ಬೆಂಗಳೂರಿನ ಸುತ್ತಮುತ್ತಲ ಜಾಗದಲ್ಲಿ ಅವರಿಗೆ ನಿವೇಶನ ನೀಡಿ ಅವರು ಅಲ್ಲಿ ಪ್ರದರ್ಶನ ಮತ್ತು ತಯಾರಿಕೆ ಮತ್ತು ವಾಸ ಮಾಡಲು ಅನುಕೂಲವಾಗಲಿ ಎಂದು ನಮ್ಮ ಟ್ರಸ್ಟ್ ಯೋಜನೆ ರೂಪಿಸಿದೆ.
ಕಲಾವಿದರಿಗೆ ಒಂದು ಗ್ರಾಮ ನಿರ್ಮಾಣ ಮಾಡಿ ಅಲ್ಲಿ ಅವಕಾಶ ನೀಡಿದರೆ ರಾಜ್ಯ, ದೇಶ ವಿದೇಶಗಳಿಂದ ಬರುವ ನಾಗರಿಕರಿಗೆ ಅಲ್ಲಿ ಕಲಾವಿದರು ತಯಾರಿಕೆ ವಸ್ತುಗಳನ್ನು ಖರೀದಿಸಬಹುದು, ಕಲೆಯ ಅರಿಯಬಹುದು ಇದರಿಂದ ಆರ್ಥಿಕವಾಗಿ ಕಲಾವಿದರು ಸಬಲರಾಗುತ್ತಾರೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು