LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮರಾಠ ಮೀಸಲಾತಿಗೆ `ಮಹಾ' ಸರ್ಕಾರ ಅಸ್ತು ಮನೋಜ್ ಜಾರಂಗೆ ಪಾಟೀಲ್ ಪ್ರತಿಭಟನೆ ಅಂತ್ಯ

ಮುಂಬೈ: ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಮರಾಠ ಸಮುದಾಯಗಳಿಗೆ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ಮುಕ್ತಾಯಗೊಂಡಿದೆ.

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮರಾಠ ಸಮಯದಾಯದ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಬಳಿಕ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.
ಹಿಂದುಳಿದ ವರ್ಗಗಳ ಅಡಿಯಲ್ಲಿ ಮರಾಠ ಸಮಯದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಂಬೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

ಶನಿವಾರ ಮಹಾರಾಷ್ಟ್ರ ಸರ್ಕಾರವು ನಮ್ಮ ಮನವಿಯನ್ನು ಸ್ವೀಕರಿಸಿದೆ ಎಂದು ಹೇಳಿ ಪಾಟೀಲ್ ಪ್ರತಿಭಟನೆಯನ್ನು ಅಂತ್ಯಗೊಳಿಸಿದರು. ಮುಖ್ಯಮಂತ್ರಿಗಳ ಕೈಯಿಂದ ತಂಪು ಪಾನೀಯ ಕುಡಿಯುವ ಮೂಲಕ ಉಪವಾಸ ಅಂತ್ಯಗೊಳಿಸಿದರು.ಈ ವೇಳೆ ಮಾತನಾಡಿ, ಸಿಎಂ ಏಕನಾಥ್ ಶಿಂಧೆ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ನಮ್ಮ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ನಮ್ಮ ಪ್ರತಿಭಟನೆ ಮುಗಿದಿದೆ ಎಂದು ತಿಳಿಸಿದ್ದಾರೆ.

ಜನವರಿ 20 ರಂದು ಜಾಲ್ನಾದಿಂದ ಆರಂಭವಾದ ಮೀಸಲಾತಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆ ಶನಿವಾರ ಮುಂಬೈ ನಗರ ಪ್ರವೇಶಿಸಲು ಸಜ್ಜಾಗಿತ್ತು. ಅಷ್ಟರಲ್ಲಿ ಮಹಾರಾಷ್ಟ್ರ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದು,ಪ್ರತಿಭಟನೆ ಸುಖಾಂತ್ಯ ಕಂಡಿದೆ. ನಂತರ ಮಹಾರಾಷ್ಟ್ರ ಸರ್ಕಾರವು ಜಾತಿ ಮೀಸಲಾತಿ ಕುರಿತು ಸರ್ಕಾರಿ ನಿರ್ಣಯ (GR) ಹೊರಡಿಸಿದ್ದು, ಸಚಿವರಾದ ದೀಪಕ್ ಕೇಸರ್ಕರ್ ಮತ್ತು ಮಂಗಲ್ ಪ್ರಭಾತ್ ಲೋಧಾ ಅವರು ಮನೋಜ್ ಜಾರಂಗೆ ಪಾಟೀಲ್ ಅವರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಪತ್ರ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಸಚಿವರು, ಮರಾಠ ಮೀಸಲಾತಿಗಾಗಿ ಮನೋಜ್ ಜಾರಂಗೆ ನೇತೃತ್ವದಲ್ಲಿ ನಡೆಯುತ್ತಿದ್ದ ಚಳವಳಿಗೆ ಇಂದು ಪರಿಹಾರ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಿದ್ದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ. ಪರಿಹಾರ ಸಿಕ್ಕಿರುವುದರಿಂದ ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು