LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಚಿತ್ರನಟ, ನಿರ್ದೇಶಕ ದ್ವಾರಕೀಶ್ ಹೆಸರಿನಲ್ಲಿ ಕೆಯುಡಬ್ಲೂಜೆಯಲ್ಲಿ ದತ್ತಿನಿಧಿ: ಅಭಿನಂದನೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಮಾಡಲು ಹುಣಸೂರು ಶಾಸಕ ಜಿ.ಡಿ. ಹರೀಶ್‍ಗೌಡ ಅವರು ಮುಂದೆ ಬಂದಿರುವುದಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸ್ವಾಗತಿಸಿದ್ದಾರೆ.

ಮೈಸೂರು ಜಿಲ್ಲೆಯ ಹುಣಸೂರಿನ ಶಾಮರಾವ್ ಮತ್ತು ಜಯಮ್ಮ ಅವರ ಪುತ್ರರಾದ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಸೇವೆ ಸಲ್ಲಿಸುವ ಮೂಲಕ ಕಲಾ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಅಪಾರ ಗೌರವ ಪಡೆದಿರುವುದಲ್ಲದೆ, ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದವರು.

ಜೀವನ ಸಾಗಿಸಲು ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದವರು 1963ರಲ್ಲಿ ಸಿನಿಮಾ ಕಡೆ ಮುಖ ಮಾಡಿದವರು ಮತ್ತೆ ಹಿಂತಿರುಗಿ ನೋಡಲಿಲ್ಲ. ಚಲನ ಚಿತ್ರ ನಾಯಕರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಸೇವೆ ಸಲ್ಲಿಸಿ ಹುಣಸೂರಿನ ಸುಪುತ್ರ ಎನ್ನುವುದರಲ್ಲಿಯೂ ಸೈ ಎನ್ನಿಸಿಕೊಂಡವರು.

ಹಿರಿಯ ನಟ ದ್ವಾರಕೀಶ್ ಅವರು ಚಲನಚಿತ್ರ ಕಲಾ ಕ್ಷೇತ್ರದಲ್ಲಿ ಅಪಾರವಾದ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿ ಅವರ ಹೆಸರಿನಲ್ಲಿ ಹುಣಸೂರಿನ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ(ಕೆ ಯು ಡ ಬ್ಲೂ ಜೆ)ಪ್ರಶಸ್ತಿ ಸ್ಥಾಪನೆ ಮಾಡಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ದತ್ತಿನಿಧಿಗೆ ಉದಾರವಾಗಿ ದೇಣಿಗೆ ನೀಡಿರುವ ಶಾಸಕ ಹರೀಶ್‍ಗೌಡ ಅವರನ್ನು ತಗಡೂರು ಅಭಿನಂದಿಸಿದ್ದಾರೆ.
ಸಿನಿಮಾ ರಂಗದ ಬಗ್ಗೆ ವರದಿ ಮಾಡುವ ಕ್ರೀಯಾಶೀಲ ವರದಿಗಾರರೊಬ್ಬರಿಗೆ ಪ್ರತಿ ವರ್ಷ ನಡೆಯುವ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು