LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಇಂಧನ ದಕ್ಷತೆ ಕ್ರಿಯಾ ಯೋಜನೆ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಇಂಧನ ದಕ್ಷತೆ ಸುಧಾರಣೆಗೆ ಮಾರ್ಗಸೂಚಿಯನ್ನು ಒದಗಿಸಲು ಮುಂದಾಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸಹಯೋಗದಲ್ಲಿ 'ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ' (ಕೆ-ಸೀಪ್)ಯನ್ನು ಬಿಡುಗಡೆ ಮಾಡಿದೆ.

ನಗರದ ಖಾಸಗಿ ಹೋಟೆಲ್‍ನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆಯ ವರದಿ ಬಿಡುಗಡೆ ಮಾಡಿದ ಬಳಿಕ ಮಾತನಾಡಿದರು.
"ಹಸಿರುಮನೆ ಅನಿಲ ಹೊರಸೂಸುವಿಕೆ ಮತ್ತು ವಾಯುಮಾಲಿನ್ಯದಿಂದ ಹೆಚ್ಚಿರುವ ಜಾಗತಿಕ ತಾಪಮಾನ ತಗ್ಗಿಸುವಲ್ಲಿ ಇಂಧನ ದಕ್ಷತೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಸಂಪನ್ಮೂಲ ಸಂರಕ್ಷಣೆ, ಆರ್ಥಿಕ ಪ್ರಯೋಜನ, ಪರಿಸರ ಸಂರಕ್ಷಣೆ, ತಾಪಮಾನ ತಗ್ಗಿಸುವಿಕೆ, ಉದ್ಯೋಗ ಸೃಷ್ಟಿ ಮತ್ತು ಇಂಧನ ಭದ್ರತೆಯಂತಹ ಹಲವಾರು ಪ್ರಯೋಜನಗಳಿರುವುದರಿಂದ ರಾಜ್ಯಕ್ಕೆ ಇಂಧನ ದಕ್ಷತೆಯ ಕ್ರಿಯಾ ಯೋಜನೆ ಅತ್ಯಗತ್ಯ," ಎಂದು ಗೌರವ್ ಗುಪ್ತ ತಿಳಿಸಿದರು.

"ನವೀಕರಿಸಬಹುದಾದ ಇಂಧನ ಮೂಲಗಳಿಗೆ ಪರಿವರ್ತನೆ, ಇಂಧನ ದಕ್ಷತೆಯನ್ನು ಸುಧಾರಿಸುವುದು ಮತ್ತು ಕೈಗಾರಿಕೆಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅನುಷ್ಠಾನಗೊಳಿಸುವುದರಿಂದ ಇಂಗಾಲದ ಹೊರಸೂಸುವಿಕೆಯನ್ನು ಗಮನಾರ್ಹವಾಗಿ ನಿಗ್ರಹಿಸಬಹುದು. ಅಲ್ಲದೇ, ಅಂತಾರಾಷ್ಟ್ರೀಯ ಸಹಯೋಗ, ಸರ್ಕಾರ, ಉದ್ದಿಮೆಗಳು ಮತ್ತು ಜನರು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ತಾಪಮಾನ ತಗ್ಗಿಸಲು ನವೀನ ತಂತ್ರಜ್ಞಾನಗಳಲ್ಲಿ ಹೂಡಿಕೆ ಮಾಡುವುದು ಬಹಳ ಮುಖ್ಯವಾಗುತ್ತದೆ," ಎಂದು ಗೌರವ್ ಗುಪ್ತ ಹೇಳಿದರು.

`ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ (ಕೆ-ಸೀಪ್) ವರದಿಯು ಸುಸ್ಥಿರ ಇಂಧನ ಅಭ್ಯಾಸಗಳ ಕಡೆಗೆ ನಾವು ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ. ಈ ಉಪಕ್ರಮವು ನವೀಕರಿಸಬಹುದಾದ ಇಂಧನ ಮತ್ತು ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಹೆಚ್ಚಿಸುವ ಸಮಗ್ರ ಮಾರ್ಗಸೂಚಿಯನ್ನು ಒದಗಿಸುತ್ತದೆ," ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹೇಳಿದರು.

"ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ" ವರದಿಯು ಇಂಧನ ದಕ್ಷತೆಯ ಗುರಿಗಳನ್ನು ಸಾಧಿಸಲು ಮಾರ್ಗಸೂಚಿಯನ್ನು ಒದಗಿಸುತ್ತದೆ. ಕೈಗಾರಿಕೆ, ಕಟ್ಟಡ, ಸಾರಿಗೆ ಮತ್ತು ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಇಂಧನ ಉಳಿತಾಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿತದ ಅವಕಾಶಗಳ ಬಗ್ಗೆ ವರದಿ ಬೆಳಕು ಚೆಲ್ಲುತ್ತದೆ" ಎಂದು ರುದ್ರಪ್ಪಯ್ಯ ವಿವರಿಸಿದರು.

ಕಾರ್ಯಪಡೆ ರಚನೆ: ಪ್ರಸ್ತಾವಿತ ಕಾರ್ಯ ತಂತ್ರಗಳು, ಎನ್‍ಡಿಸಿಗಳಿಗೆ ಅನುಗುಣವಾಗಿ ಗುರಿ ಸಾಧಿಸಲು ಸಂಪನ್ಮೂಲಗಳ ನಿಯೋಜನೆಗೆ ನೆರವಾಗಲಿದೆ. ಅದೇ ರೀತಿ ಕ್ರಿಯಾ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು ಸರ್ಕಾರ, ಉದ್ಯಮ, ಎನ್‍ಜಿಒಗಳು, ಇಂಧನ ತಜ್ಞರು ಮತ್ತು ವಿಷಯಕ್ಕೆ ಸಂಬಂಧಿಸಿದ ಪ್ರತಿನಿಧಿಗಳನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸುವುದು ಅತ್ಯಗತ್ಯ.

ಈ ಕಾರ್ಯಪಡೆಯು ಆದ್ಯತೆ ಮೇರೆಗೆ ಕಾರ್ಯ ಪ್ರಗತಿಯ ಮೇಲ್ವಿಚಾರಣೆಯನ್ನೂ ಮಾಡಬೇಕಿದೆ. ಅನುದಾನ, ಸಾಲ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ಒಳ ಗೊಂಡಂತೆ ಯೋಜನೆಗೆ ಆರ್ಥಿಕ ಬೆಂಬಲ ಅಗತ್ಯವಿದೆ. ಹಾಗಾಗಿ, ಇಂಧನ ದಕ್ಷತೆಯ ಬಾಂಡ್‍ಗಳಂತಹ ನವೀನ ಹಣಕಾಸು ಕಾರ್ಯ ವಿಧಾನಗಳು ಇಂಧನ ದಕ್ಷತೆ ಯೋಜನೆಯಲ್ಲಿ ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ನೆರವಾಗಬಲ್ಲದು ಎಂದು ವರದಿ ತಿಳಿಸಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ಕೇಂದ್ರ ಇಂಧನ ಸಚಿವಾಲಯದ ಪ್ರತಿಷ್ಠಿತ 'ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2023'ಕ್ಕೆ ಪಾತ್ರವಾಗಿದೆ. ಕರ್ನಾಟಕವು ಸತತ ಮೂರು ವರ್ಷಗಳಿಂದ, ಅಂದರೆ ಎಸ್.ಇ.ಇ.ಐ 2020 ಮತ್ತು ಎಸ್.ಇ.ಇ.ಐ 2021-2022, 2023ರ ಅವಧಿ ಯಲ್ಲಿ "ಫ್ರಂಟ್ ರನ್ನರ್" ಎಂಬ ಮನ್ನಣೆಗೆ ಪಾತ್ರವಾಗಿರುವ ಅಂಶವನ್ನು ಸ್ಮರಿಸಬಹುದು.

ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ, ಸಿಐಐನ ಪ್ರಧಾನ ಸಲಹೆಗಾರರಾದ ನಿಶಾ ಜಯರಾಮ್ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು