LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಡಾ.ರಾಜ್ ಸ್ಫೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಇಂಧನ ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಕನ್ನಡ ನಮ್ಮ ಉಸಿರು, ನಮ್ಮ ಜೀವ' ಕರ್ನಾಟಕದ ಜನತೆಯ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಮಾರುತಿ ಸೇವಾ ನಗರದ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಶುಕ್ರವಾರ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಹಾಗೂಕೆ.ಜೆ.ಜಾರ್ಜ್ ಮಾತನಾಡಿದರು.
"ಅಖಿಲ ಕರ್ನಾಟಕ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಬಸ್ ತಂಗುದಾಣ ನಿರ್ಮಾಣವಾಗಿದೆ. ನಾನು ಡಾ.ರಾಜಕುಮಾರ್ ಅಭಿಮಾನಿ, ಅವರ ಹೆಸರಿನ ಬಸ್ ನಿಲ್ದಾಣವನ್ನು ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ. ನಮ್ಮ ಕನ್ನಡದ ಧ್ವಜ ಜಾಗತಿಕ ಮಟ್ಟದಲ್ಲಿ ಹಾರಾತ್ತಿದೆ. ಕನ್ನಡವೇ ನನ್ನ ಉಸಿರು, ರಾಜ್ಯದ ಜನರ ಅಭಿವೃದ್ದಿಯೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದಮುಖ್ಯ ಗುರಿ" ಎಂದರು.
``ಸAಘದವರು ಪ್ರಯಾಣಿಕರಿಗೆ ನೆರಳು, ಮಳೆಯಿಂದ ರಕ್ಷಣೆ ಮತ್ತು ಕುಡಿಯುವ ನೀರಿನ ಸೌಕರ್ಯ ಒದಗಿಸಿಕೊಟ್ಟಿದ್ದಾರೆ. ಇದು ಎಲ್ಲರೂ ಹೆಮ್ಮೆ ಪಡುವ ಕಾರ್ಯಕ್ರಮವಾಗಿದೆ. ಜನ ನೆನಯುವುದು ಒಳ್ಳೆಯ ಕೆಲಸಗಳಿಂದ ಮಾತ್ರ.ಸರ್ವಜ್ಞ ನಗರದ ಪ್ರತಿನಿಧಿಯಾಗಿರುವುದು ನನ್ನ ಭಾಗ್ಯ. ನಮ್ಮ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ," ಎಂದು ಕೆ.ಜೆ.ಜಾರ್ಜ್ ತಿಳಿಸಿದರು.
``ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ
ನಾಗರಿಕರಿಗೆ ಸೌಕರ್ಯ ಒದಗಿಸಲು ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೊಂದು ವರ್ಷದಲ್ಲಿ ನಮ್ಮ ಕ್ಷೇತ್ರದಲ್ಲಿ ಎಲ್ಲರೂ ನೆನಪಿಟ್ಟುಕೊಳ್ಳುವಂಥ ಯೋಜನೆ
ಗಳು ಅನುಷ್ಠಾನಗೊಳ್ಳಲಿದೆ.ಕಾಚರಕನಹಳ್ಳಿ ಯಲ್ಲಿ ಕೆರೆಯನ್ನು ಅಭಿವೃದ್ದಿಪಡಿಸುತ್ತಿದ್ದೇವೆ. ಕ್ರೀಡಾಂಗಣ, ಆಸ್ಪತ್ರೆ ಮಾಡುತ್ತಿದ್ದೇವೆ. ಜತೆಗೆ ಬೃಹತ್ ಸರ್ವಜ್ಞ ಪ್ರತಿಮೆಯನ್ನು ನಿರ್ಮಿಸಲಿದ್ದೇವೆ. ಅಭಿವೃದ್ದಿ ವಿಚಾರದಲ್ಲಿ ನಾವು ಎಂದಿಗೂ ರಾಜಕೀಯ ಮಾಡಿಲ್ಲ, ಅದು ಚುನಾವಣೆಗಷ್ಟೇ ಸೀಮಿತ," ಎಂದರು.
ಸಾರಾ ಗೋವಿಂದ್ ನನ್ನ ಆತ್ಮೀಯರು, ನಾನು ಕೊಡಗಿನಲ್ಲಿ ಇದ್ದ ಸಮಯದಿಂದಲೂ ಸಾರಾ ಗೋವಿಂದು ಅವರ ಪರಿಚಯವಿದೆ.ನಟ ಅಂಬರೀಶ್ ಅವರನ್ನು ನನಗೆ ಪರಿಚಯಿಸಿ ಕೊಟ್ಟಿದ್ದರು. ನಾನು ರಾಜಕಾರಣಕ್ಕೆ ಬಂದ ಮೇಲೂ ಬಹಳ ಆತ್ಮೀಯವಾಗಿಯೇ ಇದ್ದಾರೆ.ಡಾ.ರಾಜ್ ಹಾಗೂ ಪುನೀತ್ ಅವರ ಅಭಿಮಾನಿಗಳ ಸಂಘವನ್ನು ಅಚ್ಚುಕಟ್ಟಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ಜಾರ್ಜ್ ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ರಾಜ್‌ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ಸಾರಾ ಗೋವಿಂದು ಮಾತನಾಡಿ, "ಸರ್ವಜ್ಞ ನಗರ ಕ್ಷೇತ್ರದಲ್ಲಿ ಕೆ.ಜೆ.ಜಾರ್ಜ್ ಅವರು ಸಾಕಷ್ಟು ಅಭಿವೃದ್ದಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಮಹನೀಯರ ನೆನಪನ್ನು ಶಾಶ್ವತಗೊಳಿಸುವ ಕೆಲಸವೂ ಅವರಿಂದ ನಡೆದಿದೆ," ಎಂದು ಶ್ಲಾಘಿಸಿದರು.
ಅಭಿಮಾನಿ ಸಂಘದ ಡಿ.ಕೆ.ರಾಜು, ವೆಂಕಟೇಶ್, ಅಮರ್, ಮುರಳಿ ಹಾಗೂ ಕಾಂಗ್ರೆಸ್ ಮುಖಂಡರಾದ ರಘುದೇವರಾಜ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು