LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮತ್ತೆ ಪಕ್ಷಕ್ಕೆ ಮರುಳಲು ಈಶ್ವರಪ್ಪ, ರಘುಪತಿ ಭಟ್ ಸಿದ್ಧತೆ?

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಬಿಜೆಪಿ ಮುಖಂಡರಾದ ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಮರಳಿ ಪಕ್ಷಕ್ಕೆ ಸೇರ್ಪಡೆಯಾಗಲು ವೇದಿಕೆ ಸಜ್ಜುಗೊಳ್ಳುತ್ತಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಸ್ಫರ್ಧೆ ಮಾಡಿದ್ದರೆ, ಇತ್ತ ವಿಧಾನಪರಿಷತ್ ಚುನಾವಣೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಸ್ಫರ್ಧಿಸಿದ್ದರು.ಈ ಇಬ್ಬರ ರಾಜಕೀಯ ಭವಿಷ್ಯ ಏನು? ಎಂಬ ಬಗ್ಗೆ ಚರ್ಚೆ ಆರಂಭಗೊಂಡಿದೆ. ಈ ಇಬ್ಬರನ್ನು ಬಿಜೆಪಿಯಿಂದ ಅಮಾನತು ಮಾಡಿಪಕ್ಷದ ಶಿಸ್ತು ಸಮಿತಿ ಆದೇಶ ಹೊರಡಿಸಿತ್ತು.

ಈ ಇಬ್ಬರು ನಾಯಕರು ಮತ್ತೆ ಬಿಜೆಪಿ ಸೇರ್ಪಡೆ ಆಗುತ್ತಾರೆ ಎಂಬ ಚರ್ಚೆಯೂ ತೆರೆಮರೆಯಲ್ಲಿ ಆರಂಭಗೊಂಡಿದೆ. ಆದರೆ, ಹೇಗೆ ಅವರು ಬಿಜೆಪಿ ಸೇರುತ್ತಾರೆ ಎಂಬ ಪ್ರಶ್ನೆಯೂ ಎದುರಾಗಿದೆ.ಯಾವಾಗ ಅವರನ್ನು ಬಿಜೆಪಿ ಕರೆತರಲಾಗುತ್ತೆ? ಎಂಬ ಕುತೂಹಲ ಒಂದೆಡೆಯಾದರೆ ಇವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲು ಯಾರು ಈ ನಿರ್ಧಾರ ಮಾಡುತ್ತಾರೆ? ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.

ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರಿಸಬೇಕಾಗಿರುವುದು ಬೇರೆ ಯಾರು ಅಲ್ಲ. ಹೈಕಮಾಂಡ್ ನಾಯಕರು.ಹೈಕಮಾಂಡ್ ನಾಯಕರ ಗ್ರೀನ್‍ಸಿಗ್ನಲ್ ಸಿಕ್ಕರೇ ಮಾತ್ರ ಈ ಇಬ್ಬರು ನಾಯಕರು ಪಕ್ಷ ಸೇರ್ಪಡೆಯಾಗಬಹುದು. ಹಾಗಾದ್ರೆ, ಈ ಇಬ್ಬರು ನಾಯಕರಿಗೂ ಹೈಕಮಾಂಡ್ ನಾಯಕರು ಓಕೆ ಅಂತಾರಾ? ಇಲ್ವಾ? ಎಂಬುದು ಸಹ ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಇಬ್ಬರು ನಾಯಕರು ತೆರೆಮರೆಯಲ್ಲಿ ಮಾಡುತ್ತಿರುವುದಾದ್ರೂ ಏನು? ಎಂಬುದರ ಬಗ್ಗೆ ಮೂಲಗ ಪ್ರಕಾರಇಬ್ಬರು ನಾಯಕರು ಕೂಡ ತೆರೆಮರೆಯಲ್ಲಿ ಪಕ್ಷ ಸೇರ್ಪಡೆಗೆ ಕಸರತ್ತು ಆರಂಭಿಸಿದ್ದಾರೆ ಎನ್ನಲಾಗಿದೆ.ರಾಜ್ಯ ನಾಯಕರ ಸಂಪರ್ಕಕ್ಕೆ ಬಾರದೇ ನೇರವಾಗಿ ಹೈಕಮಾಂಡ್ ನಾಯಕರ ಮಟ್ಟದಲ್ಲೇ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಎಲ್ಲವೂ ಅಂದುಕೊಂಡಂತೆ ಆದರೆ, ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಬೇಕಾಗಿರುವ ಉಪ-ಚುನಾವಣೆಗೂ ಮುನ್ನಾ ಪಕ್ಷ ಸೇರ್ಪಡೆ ಎಂಬ ಮಾತುಗಳು ಆರಂಭವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು