LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದೆಹಲಿಗೆ ಈಶ್ವರಪ್ಪ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಇಂದು ದಿಢೀರ್ ಎಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಕೆ.ಎಸ್.ಈಶ್ವರಪ್ಪ ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದಿಂದ ದೆಹಲಿಗೆ ತೆರಳಿರುವ ಈಶ್ವರಪ್ಪ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈಶ್ವರಪ್ಪ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್‍ಗೆ ಸ್ಪರ್ಧೆಗೆ ಪಕ್ಷದ ಟಿಕೆಟ್ ಕೊಡಿಸಲು ಈಶ್ವರಪ್ಪ ಕಸರತ್ತು ನಡೆಸಿದ್ದಾರೆ.ಈಗಾಗಲೇ ಹಲವು ಮುಖಂಡರು ಹಾವೇರಿ ಕ್ಷೇತ್ರದಿಂದ ಸ್ಪರ್ಧಾಕಣಕ್ಕಿಳಿಯಲು ಪ್ರಯತ್ನ ನಡೆಸಿದ್ದರೂ ಸಹ ಈಶ್ವರಪ್ಪ ತಮ್ಮ ಪುತ್ರನಿಗೆ ಅವಕಾಶ ಮಾಡಿಕೊಡಬೇಕು ಎಂದುವರಿಷ್ಠರ ಮೇಲೆ ಪ್ರಭಾವ ಬೀರಲು ಮುಂದಾಗಿದ್ದಾರೆ.

ಮಾಜಿ ಸಚಿವ ಬಿ.ಸಿ. ಪಾಟೀಲ್ ವಕೀಲ್ ಸಂದೀಪ್ ಪಾಟೀಲ್ ಎಂಬುವರು ಸಹ ಹಾವೇರಿ ಕ್ಷೇತ್ರದಿಂದ ಅಭ್ಯರ್ಥಿಯಾಗಲು ಯತ್ನ ನಡೆಸುತ್ತಿದ್ದು ತಮ್ಮ ಪುತ್ರನಿಗೆ ಟಿಕೆಟ್ ಬೇಕು ಎಂದು ವರಿಷ್ಠರ ಮುಂದೆ ಈಶ್ವರಪ್ಪ ಪಟ್ಟು ಹಿಡಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು