LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hubballi

ಹೀಟ್ ಸ್ಟ್ರೋಕ್‌ಗೆ ಅಗತ್ಯ ಚಿಕಿತ್ಸೆ

ಹುಬ್ಬಳ್ಳಿ: ಹೀಟ್ ಸ್ಟ್ರೋಕ್‌ಗೆ ಅಗತ್ಯ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿರುವ ಅವರು, ಹೀಟ್ ಸ್ಟ್ರೋಕ್‌ನಿಂದ ಬಳಲುವವರಿಗೆ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆ ನೀಡಲು ಕ್ರಮ ಜರುಗಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕಾಗಿ ಪ್ರತ್ಯೇಕವಾರ್ಡ್ಗಳನ್ನು ಕಾಯ್ದಿರಿಸಲಾಗಿದೆ. ಇದುವರೆಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ 225 ವೈದ್ಯರ ನೇಮಕಾತಿಗೆ ಅನುಮೋದನೆ ದೊರಕಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರಿ ಮಾತ್ರೆಗಳನ್ನು ಇಡಲಾಗುವುದು. ಜನರಿಕ್ ಔಷಧಿಗಳಿಗೆ ಅವಕಾಶವಿಲ್ಲ ಎಂದಿರುವ ಅವರು, ಈ ಸಂಬಂಧ ಕೆಲವರು ಕೋರ್ಟ್ಗೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಕೊರೊನಾ ಸಂದರ್ಭದಲ್ಲಿ ನಡೆದ ದುರ್ಬಳಕೆ ಸಂಬಂಧ ನ್ಯಾಯಮೂರ್ತಿ ಮೈಕೆಲ್ ಕುನ್ನಾ ಅವರು ನೀಡಿರುವ ವರದಿ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಪತ್ರಕರ್ತರು ಕೇಳಿದ ರಾಜಕೀಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿಯಾವುದೇ ಸಮಸ್ಯೆಯಿಲ್ಲ, ಗೊಂದಲವಿಲ್ಲ, ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಎಂದಿದ್ದಾರೆ. ಅತೀ ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಬಹುದು. ಕೆಲವರು ಹಿರಿಯರನ್ನು ಬಿಟ್ಟು ಸಂಪುಟ ವಿಸ್ತರಣೆಯಾಗಬಹುದು, ಅದಕ್ಕಾಗಿ ಕೆಲವರು ಒತ್ತಾಯಿಸಿದ್ದಾರೆ. ಎಲ್ಲರಿಗೂ ಅವಕಾಶ ದೊರೆಯಬೇಕೆಂಬ ದೊಡ್ಡಗುಣ ಇರಬೇಕಲ್ವಾ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು