LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News | National News

ಸಕ್ಕರೆ ಬೆಲೆ ಏರಿಕೆಗೂ ಎಥೆನಾಲ್ ಬಳಕೆಗೂ ಸಂಬಂಧವಿಲ್ಲ: ಕೇಂದ್ರ ಸ್ಪಷ್ಟನೆ


ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹೆಚ್ಚಳವು ಸಕ್ಕರೆಯನ್ನ ಎಥೆನಾಲ್ ಬಳಕೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದ್ದು, ಈ ಆರೋಪಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.ಸಕ್ಕರೆ ಬೆಲೆ ಏರಿಕೆಗೂ ಎಥೆನಾಲ್ ಬಳಕೆಗೂ ಸಂಬಂಧ ಇಲ್ಲ. ದೇಶೀಯ ಉತ್ಪಾದನೆಯಲ್ಲಿನ ಇಳಿಕೆ, ಹಬ್ಬದ ಋತುವಿನಲ್ಲಿ ಹೆಚ್ಚಿದ ಬೇಡಿಕೆ ಹಾಗೂ ಜಾಗತಿಕ ಪೂರೈಕೆಯಲ್ಲಿನ ಬಿಗಿ ಕ್ರಮ ಮತ್ತು ಸಂಗ್ರಹಣೆಯೇ ಇದಕ್ಕೆ ಕಾರಣ ಎಂದು ಕೇಂದ್ರ ಸ್ಪಷ್ಟಪಡಿಸಿದೆ.ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಲಭ್ಯತೆಯನ್ನು ಸುಧಾರಿಸಲು ಮತ್ತು ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರ ಹಲವಾರು ಕ್ರಮಗಳನ್ನ ತೆಗೆದುಕೊಂಡಿದೆ. ಇದರಲ್ಲಿ ವ್ಯಾಪಾರಿಗಳ ಮೇಲೆ ಸ್ಟಾಕ್ ಮಿತಿಗಳನ್ನು ವಿಧಿಸುವುದು ಮತ್ತು ಕಚ್ಚಾ ಸಕ್ಕರೆಯ ಸುಂಕ-ಮುಕ್ತ ಆಮದನ್ನ ಅನುಮೋದಿಸುವುದು ಸೇರಿವೆ. ಆದ್ರೆ ಎಥೆನಾಲ್ ಉತ್ಪಾದನೆಗೆ ಸಕ್ಕರೆಯನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ ಎಂದು ಹೇಳುತ್ತಿರುವುದು ತಪ್ಪು ಎಂದು ಹೇಳಿದೆ.ಎಥೆನಾಲ್ ಬಳಕೆಗೆ ಸಂಬಂಧ ಇಲ್ಲ:ಎಥೆನಾಲ್ ಮಿಶ್ರಣ ಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವಾಲಯ, ಇತ್ತೀಚಿನ ವರ್ಷಗಳಲ್ಲಿ ಎಥೆನಾಲ್ ಉತ್ಪಾದನೆಗೆ ತಿರುಗಿಸಲಾದ ಸಕ್ಕರೆಯ ಪ್ರಮಾಣವು ವಾಸ್ತವವಾಗಿ ಕಡಿಮೆಯಾಗಿದೆ. ಸರ್ಕಾರ ಹೇಳುವಂತೆ, ಎಥೆನಾಲ್ ಉತ್ಪಾದನೆಗೆ ಬಳಸುವ ಸಕ್ಕರೆಯ ಪ್ರಮಾಣವು 2022-23 ರಲ್ಲಿ ಸುಮಾರು 12% ರಿಂದ 2025-26 ಋತುವಿನಲ್ಲಿ ಸುಮಾರು 9% ಕ್ಕೆ ಇಳಿದಿದೆ. ಭಾರತದ ಎಥೆನಾಲ್ ಉತ್ಪಾದನೆಯ ಸುಮಾರು 4ನೇ ಒಂದು ಭಾಗವು ಧಾನ್ಯಗಳಿಂದ, ವಿಶೇಷವಾಗಿ ಮೆಕ್ಕೆಜೋಳದಿಂದ ಬರುತ್ತದೆ. ಆದ್ದರಿಂದ ಸರ್ಕಾರವು ಸಕ್ಕರೆ ಬೆಲೆಯಲ್ಲಿನ ಪ್ರಸ್ತುತ ಏರಿಕೆಯನ್ನ ಎಥೆನಾಲ್ ಉತ್ಪಾದನೆಗೆ ಜೋಡಿಸುವುದು ಸರಿಯಲ್ಲ ಎಂದು ಹೇಳಿದೆ.
ಸಕ್ಕರೆ ಉತ್ಪಾದನೆ ಏಕೆ ಕುಸಿದಿದೆ? ಈ ಋತುವಿನಲ್ಲಿ ದೇಶೀಯ ಸಕ್ಕರೆ ಉತ್ಪಾದನೆಯು ಪ್ರಮಾಣ 34.3 ದಶಲಕ್ಷ ಟನ್‌ಗಳಷ್ಟು ಆಗುತ್ತದೆ ಎಂದು ಸರ್ಕಾರ ನಿರೀಕ್ಷೆ ಮಾಡಿತ್ತು. ಆದ್ರೆ ಸುಮಾರು 30.6 ದಶಲಕ್ಷ ಟನ್‌ಗಳಷ್ಟು ಮಾತ್ರವೇ ಉತ್ಪಾದನೆ ಆಗಿದೆ.ಬೆಳೆ ರೋಗ, ಕೀಟ ಬಾಧೆ ಸಮಸ್ಯೆಗಳಿಂದ ಕೆಲವು ಪ್ರದೇಶಗಳಲ್ಲಿ ಕಬ್ಬಿನ ಬೆಳೆಯ ಮೇಲೆ ಪರಿಣಾಮ ಬೀರಿದೆ. ಇದರಿಂದ ಕಬ್ಬಿನ ಬೆಳೆಯಲ್ಲಿ ಕೊರತೆಯಾಗಿದೆ. ಇದರೊಂದಿಗೆ ಕೆಲ ಪ್ರದೇಶಗಳಲ್ಲಿ ವಿಪರೀತ ಮಳೆ, ನೀರು ನಿಲ್ಲುವಿಕೆಯಿಂದ ಬೆಳೆ ಹಾನಿಯಾಗಿದೆ. ಇದರಿಂದ ಸಕ್ಕರೆ ಉತ್ಪಾದನೆ ಕುಸಿದಿದೆ. ಆದಾಗ್ಯೂ ಸದ್ಯಕ್ಕೆ ದೇಶಿಯ ಅವಶ್ಯಕಥೆಗಳನ್ನ ಪೂರೈಸಲು ಸದ್ಯಕ್ಕೆ ಇರುವ ಸಕ್ಕರೆ ದಾಸ್ತಾನು ಸಾಕಾಗುತ್ತದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ AI  ಯುಗಕ್ಕೆ ಸಜ್ಜಾಗುತ್ತಿರುವ CA ವೃತ್ತಿ: ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಂದ SAMVAADA 2026 ಉದ್ಘಾಟನೆಅತ್ಯುತ್ತಮ ತನಿಖಾ ಪತ್ರಕರ್ತ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಬಿನೀಶ್ ಥಾಮಸ್ ಆಯ್ಕೆಸಕ್ಕರೆ ಬೆಲೆ ಏರಿಕೆಗೂ ಎಥೆನಾಲ್ ಬಳಕೆಗೂ ಸಂಬಂಧವಿಲ್ಲ: ಕೇಂದ್ರ ಸ್ಪಷ್ಟನೆಕೋಲಾರದಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಚಾಲನೆವಿಶ್ವ ಬ್ಯಾಡ್ಮಿಂಟನ್‌ನಲ್ಲಿ ಸಿಂಧು, ಆಯುಷ್ ಸವಾಲು ಅಂತ್ಯಸೋತರೂ ಟೀಮ್ ಇಂಡಿಯಾದ ಸೆಮಿಫೈನಲ್ ಆಸೆ ಜೀವಂತ!`ಪ್ರೇಮದ ಊರಲಿ’ ಚಿತ್ರದ ಸುಂದರ ಗೀತೆ ರಿಲೀಸ್: ಕಣ್ಮನ ಸೆಳೆದ ತಪಸ್ವಿನಿ ಪೂಣಚ್ಚ-ಶ್ರೀರಾಮ್ ಜೋಡಿಮಹಿಪತಿದಾಸರು ಚಿತ್ರ ವೀಕ್ಷಿಸಿದ ಗಣ್ಯರು 20 ವರ್ಷಗಳ ನಂತರ ರಂಗಭೂಮಿ ಅಖಾಡಕ್ಕಿಳಿದ ರಾಜೇಶ್ ನಟರಂಗ!