LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕೋಲಾರ ಜಿಲ್ಲಾದ್ಯಂತ ನಡೆದ ಸಾಕ್ಷರತಾ ಯೋಜನೆಯ ಮೌಲ್ಯಮಾಪನ

ಕೋಲಾರ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಉಲ್ಲಾಸ್ ನವಭಾರತ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾದ್ಯಂತ ಒಟ್ಟು 32 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ 189 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಸಾಕ್ಷರತಾ ಮೌಲ್ಯ ಮಾಪನ ನಡೆಯಿತು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಉಮಾ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಪಿ.ಬಾಗೇವಾಡಿ ಅವರ ಮಾರ್ಗದರ್ಶನದಲ್ಲಿ ಭಾನುವಾರ ಜಿಲ್ಲಾಧ್ಯಂತ ಪರೀಕ್ಷೆ ನಡೆದಿದ್ದು, 2025-26 ನೇ ಸಾಲಿನಲ್ಲಿ ಜಿಲ್ಲೆಯ ಅತ್ಯಂತ ಕಡಿಮೆ ಸಾಕ್ಷರತೆ ಹೊಂದಿರುವ 32 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿ
ಕೊಂಡು ಲಿಂಕ್ ಡಾಕ್ಯುಮೆಂಟ್ ಅನುದಾನದಡಿಯಲ್ಲಿ 6000 ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಗುರಿಯೊಂದಿಗೆ ಮೂಲ ಸಾಕ್ಷರತಾ ಕಾರ್ಯಕ್ರಮ ಅನುಷ್ಟಾನಗೊಳಿಸಲಾಗಿದೆ. ಭಾನುವಾರದ ಮೌಲ್ಯಮಾಪನ ಪರೀಕ್ಷೆಯಲ್ಲಿ 6000 ಕಲಿಕಾರ್ಥಿಗಳು ನವ ಸಾಕ್ಷರಾಗುತ್ತಾರೆ. ಎಂದ ಅವರು, 2025-26ನೇ ಸಾಲಿನ ಜಿಲ್ಲೆಯ ಲಿಂಕ್ ಡಾಕ್ಯೂಮೆಂಟ್ ಅನುದಾನದಡಿಯಲ್ಲಿ ಸಾಕ್ಷರತಾ ಕಾರ್ಯಕ್ರಮಕ್ಕೆ ಜಿಲ್ಲೆಯ 6 ತಾಲ್ಲೂಕುಗಳ ಆಯ್ದ 32 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 6000 ಅನಕ್ಷರಸ್ಥರಿಗೆ 189 ಪರೀಕ್ಷಾ ಕೇಂದ್ರಗಳುಲ್ಲಿ ಪರೀಕ್ಷೆ ಇಂದು ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳು ಪರೀಕ್ಷೆ ಕೇಂದ್ರದ ಉಸ್ತುವಾರಿ ವಹಿಸಿದ್ದು, 03 ಅವಧಿಗಳಲ್ಲಿ ಪರೀಕ್ಷೆ ನಡೆಯಿತು ಎಂದು ತಿಳಿಸಿದರು.
ಬಂಗಾರಪೇಟೆ ತಾಲ್ಲೂಕಿನ 4 ಗ್ರಾ.ಪಂಗಳ 26 ಪರೀಕ್ಷಾ ಕೇಂದ್ರಗಳಲ್ಲಿ 1 ಸಾವಿರ ಕಲಿಕಾರ್ಥಿಗಳು,ಕೆಜಿಎಫ್ ತಾಲ್ಲೂಕಿನಲ್ಲಿ 3 ಗ್ರಾ.ಪಂಗಳ 5 ಪರೀಕ್ಷಾ ಕೇಂದ್ರಗಳಲ್ಲಿ 250 ಕಲಿಕಾರ್ಥಿಗಳು, ಕೋಲಾರ ತಾಲ್ಲೂಕಿನ 13 ಗ್ರಾ.ಪಂಗಳಲ್ಲಿ 74 ಪರೀಕ್ಷಾ ಕೇಂದ್ರಗಳಲ್ಲಿ 1750 ಕಲಿಕಾರ್ಥಿಗಳು, ಮಾಲೂರು ತಾಲ್ಲೂಕಿನ 4 ಗ್ರಾ.ಪಂಗಳಿAದ 35 ಕೇಂದ್ರಗಳಲ್ಲಿ 1ಸಾವಿರ ಮಂದಿ, ಮುಳಬಾಗಿಲು ತಾಲ್ಲೂಕಿನ 6 ಗ್ರಾ.ಪಂಗಳಲ್ಲಿ 46 ಪರೀಕ್ಷಾ ಕೇಂದ್ರಗಳಲ್ಲಿ 1750 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 2 ಗ್ರಾ.ಪಂಗಳಿAದ 3 ಪರೀಕ್ಷಾ ಕೇಂದ್ರಗಳಲ್ಲಿ 250 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು