LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ಮಾಜಿ ಸಚಿವರ ಚಾಲನೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕುರುಬರ ಹಳ್ಳಿಯ ನಾಡಪ್ರಭು ಕೆಂಪೇಗೌಡ ಕ್ರೀಡಾಂಗಣದಲ್ಲಿ ಇಂದು ಆಶಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಾರ್ಷಿಕ ಕ್ರೀಡಾಕೂಟ ಹಾಗೂ 2 km ಮ್ಯಾರಥಾನ್ ನಡಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ಕ್ರೀಡಾಕೂಟ ಉದ್ಘಾಟನೆ ಮಾಡಿ ಮ್ಯಾರಥಾನ್ ನಡಿಗೆ ಜಾಥಾಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಕೆ ಗೋಪಾಲಯ್ಯ ರವರು,ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಪ್ರತಿಭೆ ಹಾಗೂ ಬುದ್ಧಿವಂತಿಕೆ ಇರಲಿದ್ದು, ಯಾರು ಕೂಡ ಪೋಷಕರು ಎದೆಗುಂದಬಾರದು, ಏಷ್ಟೋ ಜನಕ್ಕೆ ಮಕ್ಕಳೇ ಇಲ್ಲ,ದೇವರ ಮೊರೆ ಹೋಗಿ ಮಕ್ಕಳನ್ನು ಕರುಣಿಸು ಎಂದು ಹೀಗಾಗಿ ಇವರು ದೇವರು ಸಮಾನ, ಇವರ ಇಟ್ಟು ಕೊಂಡು ಇದರ ಸದುಪಯೋಗ ಪಡೆದುಕೊಂಡು ಸಾಧನೆಗೈಯ್ಯುವ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ತೋರಿಸಬೇಕೆಂದು ಹೇಳಿದ ಅವರು ಯಾವುದೇ ನೂನ್ಯತೆ ಇಲ್ಲದೇ ಎಲ್ಲಾ ರೀತಿಯಲ್ಲೂ ಚೆನ್ನಾಗಿರುವ ಮಕ್ಕಳಿಗೆ ಚಂಚಲತೆ ಇರುತ್ತದೆ.

ಆದರೆ, ವಿಶೇಷ ಚೇತನ ಮಕ್ಕಳಿಗೆ ಯಾವುದೇ ರೀತಿಯ ಚಂಚಲತೆ ಇಲ್ಲದ ಕಾರಣ ವಿಶೇಷ ಪ್ರತಿಭೆ ಹಾಗೂ ಜಾಣ ತಲೆ ಇರುತ್ತದೆ. ಆದ್ದರಿಂದ ಇದರ ಸದುಪಯೋಗ ಪಡೆದುಕೊಂಡು ಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದರು. ನಮ್ಮ ಕ್ಷೇತ್ರದಲ್ಲಿ ಕೂಡ ವಿಕಲಚೇತನರಿಗೆ ಎಲ್ಲ ರೀತಿಯ ತ್ರಿಚಕ್ರ ವಾಹನ, ಆರೋಗ್ಯ ಶಿಬಿರ ಏರ್ಪಡಿಸಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಔಷಧಿ ವಾಕಿಂಗ್ ಸ್ಟಿಕ್, ಕೃತಕ ಕಾಲು ಜೋಡಣೆ ಸೇರಿದಂತೆ ಹಲವು ರೀತಿಯ ಅವರಿಗೆ ಅವಶ್ಯಕ ವಸ್ತುಗಳನ್ನು ನೀಡುವ ಮೂಲಕ ಅವರು ಕೂಡ ಸಮಾಜದಲ್ಲಿ ಎಲ್ಲರಂತೆ ಬದುಕು ಕಟ್ಟಿಕೊಳ್ಳಲು ನೆರವು ನೀಡಿದ್ದೇನೆ.

ಮತ್ತು ಮಕ್ಕಳ ಮಾನಸಿಕ ಹಾಗೂ ದೈಹಿಕ ಸಮತೋಲನದ ಬೆಳವಣಿಗೆಗೆ ಈ ರೀತಿ ಕ್ರೀಡೆಗಳು ಅಗತ್ಯ, ನಾನು ಪ್ರತಿ ವರ್ಷ ವಿಶೇಷ ಮಕ್ಕಳ ಶೈಕ್ಷಣಿಕ ಬೆಳವಣಿಗೆಗಾಗಿ ವಯಕ್ತಿಕವಾಗಿ 1 ಲಕ್ಷ ರೂಪಾಯಿ ನೀಡುತ್ತೇನೆ ಎಂದು ಹೇಳಿದ ಗೋಪಾಲಯ್ಯ ರವರು ಇವತ್ತು ಇದನ್ನು ಸಂಘಟಿಸಿದ ಆಶಾ ಚಾರಿಟೇಬಲ್ ಟ್ರಸ್ಟ್ ನವರಿಗೆ ಅಭಿನಂದನೆಗಳು ಎಂದು ಹೇಳಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರುಗಳಾದ ಶ್ರೀನಿವಾಸ್ ಬಿಡಿ, ಬಿಎಂ, ಆರ್ ಮಂಜುನಾಥ್, ಶ್ರೀನಿವಾಸ್ ಬಿಡಿ ಚಿಕ್ಕಸ್ವಾಮಿ ಹಿರಿಯ ಪೊಲೀಸ್ ಅಧಿಕಾರಿಗಳು ಬಸವೇಶ್ವರ ನಗರ...,ದುರ್ಗಾ ಕೆ ಪಿ ಎಸ್, ಸಂಚಾರಿ ಇನ್ಸಪೆಕ್ಟರ್ ಬೆಂಗಳೂರು ನಗರ, ಸುಚಿತ್ರ ಸೋಮಶೇಖರ್,ಸಂಸ್ಥಾಪಕರು ಸೃಷ್ಠಿ ಅಕಾಡಮಿ, ಆಶಾ ಚಾರಿಟೇಬಲ್ ಟ್ರಸ್ಟ್ ನ ನಿರ್ದೇಶಕರಾದ ಜಯಶ್ರೀ ರಮೇಶ್ ಸೇರಿದಂತೆ ವಿಶೇಷ ಚೇತನ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು