LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದಿನಿಂದ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಸಾತ್ವಿಕ್-ಚಿರಾಗ್ ಮೇಲೆ ನಿರೀಕ್ಷೆ

ಪ್ಯಾರಿಸ್: ವಿಶ್ವದ ಅಗ್ರಗಣ್ಯ ಡಬಲ್ಸ್ ಆಟಗಾರರಾದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಲ್ಲಿ ಮಂಗಳವಾರ ಆರಂಭವಾಗುವ ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

ಭಾರತದ ಜೋಡಿಯು ಕಳೆದ ನವೆಂಬರ್‍ನಲ್ಲಿ ಚೀನಾ ಮಾಸ್ಟರ್ಸ್, ಮಲೇಷ್ಯಾ ಓಪನ್ ಮತ್ತು ಜನವರಿಯಲ್ಲಿ ಇಂಡಿಯಾ ಓಪನ್ ಟೂರ್ನಿಗಳಲ್ಲಿ ರನ್ನರ್ ಅಪ್ ಸ್ಥಾನ ಪಡೆದಿತ್ತು.2022ರಲ್ಲಿ ಇಲ್ಲಿ ಚಾಂಪಿಯನ್ ಆಗಿದ್ದ ಸಾತ್ವಿಕ್ - ಚಿರಾಗ್ ಈ ಬಾರಿಯೂ ಗೆಲುವಿನ ಅಭಿಯಾನ ಮುಂದುವರಿಸುವ ತವಕದಲ್ಲಿದ್ದಾರೆ.

ಭಾರತದ ಆಟಗಾರರು 32ರ ಘಟ್ಟದ ಪಂದ್ಯದಲ್ಲಿ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೋ ಈ ಯಿ ಅವರನ್ನು ಎದುರಿಸಲಿದ್ದಾರೆ.
ಗಾಯದ ಕಾರಣಕ್ಕಾಗಿ ನಾಲ್ಕು ತಿಂಗಳು ವಿಶ್ರಾಂತಿ ಪಡೆದು, ಈಚೆಗಷ್ಟೇ ಕಣಕ್ಕಿಳಿದು ಏಷ್ಯಾ ಟೀಂ ಚಾಂಪಿಯನ್‍ಷಿಪ್‍ನಲ್ಲಿ ಐತಿಹಾಸಿಕ ಪ್ರಶಸ್ತಿ ಗೆದ್ದ ಭಾರತ ತಂಡವನ್ನು ಮುನ್ನಡೆಸಿದ್ದ ಪಿ.ವಿ. ಸಿಂಧು ಮತ್ತೆ ಲಯಕ್ಕೆ ಮರಳಿದ್ದಾರೆ. ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಸಿಂಧು ಅವರು ಕೆನಡಾದ ಮಿಚೆಲ್ ಲೀ ವಿರುದ್ಧ ಅಭಿಯಾನ ಆರಂಭಿಸುವರು.

ಪುರುಷರ ಸಿಂಗಲ್ಸ್‍ನಲ್ಲಿ ವಿಶ್ವದ 7ನೇ ಕ್ರಮಾಂಕದ ಎಚ್.ಎಸ್. ಪ್ರಣಯ್, 19ನೇ ರ್ಯಾಂಕ್‍ನ ಲಕ್ಷ್ಯ ಸೇನ್, 24ನೇ ರ್ಯಾಂಕ್‍ನ ಕಿದಂಬಿ ಶ್ರೀಕಾಂತ್ ಅವರು ಇಲ್ಲಿ ಸ್ಪರ್ಧಾಕಣದಲ್ಲಿದ್ದಾರೆ. ಅವರು ಕ್ರಮವಾಗಿ ಚೀನಾದ ಲು ಗುವಾಂಗ್ ಜು, ಜಪಾನ್‍ನ ಕಾಂತಾ ತ್ಸುನೇಯಮಾ ಮತ್ತು ಚೀನಾ ತೈಪೆಯ ಚೌ ಟಿಯೆನ್ ಚೆನ್ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸುವರು.

ಮಹಿಳಾ ಸಿಂಗಲ್ಸ್‍ನ ಆರಂಭಿಕ ಸುತ್ತಿನಲ್ಲಿ ಭಾರತದ ಟ್ರೀಸಾ ಜೋಳಿ ಮತ್ತು ಗಾಯತ್ರಿ ಗೋಪಿಚಂದ್ ಅವರು ಮೊದಲ ಸುತ್ತಿನಲ್ಲಿ ಸ್ವದೇಶದ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಅವರನ್ನು ಎದುರಿಸುವರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು