LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ದಸರಾ ರಜಾ ಅವಧಿ ವಿಸ್ತರಿಸಿ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ ೧೨ರ ವರೆಗೆ ವಿಸ್ತರಿಸಲಾಗಿದ್ದು, ಇದರ ಬೆನ್ನಲ್ಲೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಇದೀಗ ಶಿಕ್ಷಕರು ಮನವಿ ಮಾಡಿಕೊಂಡಿದ್ದಾರೆ. ಸಮೀಕ್ಷೆಗಳು ವಿಸ್ತರಣೆ ಬೆನ್ನಲ್ಲೇ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿAದ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ.

ಕಳೆದ ಸೆಪ್ಟೆಂಬರ್ ೨೦ ರಿಂದ ಅಕ್ಟೋಬರ್ ೭ರ ತನಕ ದಸರಾ ರಜೆ ಇತ್ತು. ಶಿಕ್ಷಕರು ಸೆಪ್ಟೆಂಬರ್ ೨೨ ರಿಂದ ಜಾತಿಗಣತಿ ಮಾಡುತ್ತಿದ್ದಾರೆ ಬೆಂಗಳೂರಿನಲ್ಲಿ ಸರ್ವೇ ಇನ್ನೂ ಗೊಂದಲದಲ್ಲಿ ನಡೆಯುತ್ತಿದೆ. ಹೀಗಾಗಿ ಶಿಕ್ಷಕರು ದೈಹಿಕ ಹಾಗೂಬೌದ್ಧಿಕವಾಗಿ ಒತ್ತಡದಲ್ಲಿ ಇದ್ದಾರೆ. ಅವರಿಗೆ ದೈಹಿಕ ಹಾಗು ಮಾನಸಿಕ ವಿರಾಮದ ಅವಶ್ಯಕತೆ ಇದೆ ಹಾಗಾಗಿ ಅಕ್ಟೋಬರ್ ೧೭ರವರೆಗೆ ದಸರಾ ರಜಾ ಅವಧಿ ವಿಸ್ತರಣೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

ಮೇಲ್ಕಂಡ ವಿಷಯಕ್ಕೆ ಸಂಬAಧಿಸಿದAತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ: ೨೦-೦೯-೨೦೨೫ ರಿಂದ ೦೭-೧೦-೨೦೨೫ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆಯಾಗಿರುತ್ತದೆ. ದಿನಾಂಕ: ೦೮-೧೦-೨೦೨೫ರೊಳಗೆ ಗಣತಿ ಕಾರ್ಯ ಪೂರ್ಣಗೊಳ್ಳದೇ ಇರುವುದರಿಂದ ಹಾಗೂ ಶಾಲಾ ರಜಾ ಅವಧಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರುಗಳು ದೈಹಿಕ ಹಾಗೂ ಭೌದ್ಧಿಕವಾಗಿ ಒತ್ತಡದಲ್ಲಿ ಗಣತಿ ಕಾರ್ಯದ ಕರ್ತವ್ಯ ನಿರ್ವಹಿಸಿರುವುದರಿಂದ ಅವರುಗಳ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ÷್ಯಕ್ಕಾಗಿ ರಜೆಯ ಅವಶ್ಯಕತೆ ಇರುವುದರಿಂದ, ದಿನಾಂಕ: ೧೭-೧೦- ೨೦೨೫ರ ವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ ಅವಧಿಯನ್ನು ವಿಸ್ತರಿಸುವಂತೆ ನಿರ್ದೇಶನ ನೀಡಲು
ಕೋರಿದೆ ಎಂದು ಹೇಳಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು