LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಆದಿಪರ್ವ"ದ ಮೂಲಕ ಖ್ಯಾತ ನಟ ಮೋಹನ್ ಬಾಬು ಪುತ್ರಿ ಮಂಚು ಲಕ್ಷ್ಮೀ ಕನ್ನಡಕ್ಕೆ

ತೆಲುಗಿನ ಸೂಪರ್ ಸ್ಟಾರ್ ಮೋಹನ್ ಬಾಬು ಅವರ ಮಗಳು ಮಂಚು ಲಕ್ಷ್ಮೀ "ಆದಿಪರ್ವ" ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿರುವ "ಆದಿಪರ್ವ" ಚಿತ್ರವನ್ನು, ಸಂಜೀವ್ ಕುಮಾರ್ ಮೆಗೋಟಿ ನಿರ್ದೇಶಿಸಿದ್ದಾರೆ. ರವಿ ಕಿರಣ್ ನಿರ್ದೇಶನದ "ಬದುಕು" ಚಿತ್ರಕ್ಕೆ ಚಿತ್ರಕಥೆ - ಸಂಭಾಷಣೆ ಬರೆಯುವ ಮೂಲಕ ಕನ್ನಡಿಗರಿಗೆ ಪರಿಚಯರಾದ ಸಂಜೀವ್ ಕುಮಾರ್ ಮೆಗೋಟಿ, ಪೂಜಾ ಗಾಂಧಿ ಅಭಿನಯದ "ಆಪ್ತ", "ದಂಡು", "ಕ್ಯೂ", ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ಕಳೆದ 8 ವರ್ಷಗಳಲ್ಲಿ ತೆಲುಗು ಮತ್ತು ಕನ್ನಡ ಸೇರಿದಂತೆ ಅನೇಕ ಭಾಷೆಗಳ ಸುಮಾರು 50ಕ್ಕೂ ಹೆಚ್ಚು ಧಾರಾವಾಹಿಗಳಿಗೆ ಕಥೆ ಚಿತ್ರ ಕಥೆಯನ್ನು ನೀಡುವುದರ ಜೊತೆಗೆ, ತಮ್ಮದೇ ಬ್ಯಾನರ್ ಅಡಿಯಲಿ ಧಾರಾವಾಹಿಗಳನ್ನು ನಿರ್ಮಿಸುತ್ತಿದ್ದಾರೆ. ಬಹಳ ದಿನಗಳ ನಂತರ ಹಿರಿತೆರೆಗೆ ಮರಳಿದ್ದಾರೆ.

ಅನ್ವಿಕ ಆರ್ಟ್ಸ್ ಮತ್ತು ಅಮೇರಿಕಾ ಇಂಡಿಯಾ ಎಂಟರ್‍ಟೈನ್‍ಮೆಂಟ್ (ಎ.ಐ ಎಂಟರ್ ಟೈನ್‍ಮೆಂಟ್) ಬ್ಯಾನರ್ ಅಡಿಯಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ "ಆದಿಪರ್ವ" ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ.
ಮಂಚು ಲಕ್ಷಿ, ಎಸ್ತರ್, ಸತ್ಯಪ್ರಕಾಶ್ ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಮರಾಠಿ ಮತ್ತು ಹಿಂದಿ ಚಿತ್ರರಂಗದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಕನ್ನಡದವರಾದ ಹರೀಶ್ ಅವರ ಛಾಯಗ್ರಹಣವಿರುವ "ಆದಿಪರ್ವ" ಚಿತ್ರಕ್ಕೆ ರಾಮ್ ಸುಧಿ (ಸುಧೀಂದ್ರ) ಆದಿ ಪರ್ವ ಚಿತ್ರಕ್ಕೆ ಸಂಭಾಷಣೆ ಮತ್ತು ಸಾಹಿತ್ಯವನ್ನು ರಚಿಸಿದ್ದಾರೆ.ಬಹು ತಾರಾಗಣದಲ್ಲಿ ಸಿದ್ಧವಾಗಿರುವ "ಆದಿಪರ್ವ" ಸಿನಿಮಾ ಎರಡು ಭಾಗಗಳಲ್ಲಿ ಪ್ರೇಕ್ಷಕರನ್ನು ತಲುಪಲಿದೆ. ಮಾರ್ಚ್ 8 ಮಹಾ ಶಿವರಾತ್ರಿ ಹಬ್ಬದಂದು, ಚಿತ್ರದ ಟ್ರೇಲರ್ ಹಾಗೂ ಒಂದು ಹಾಡುನ್ನು ಬಿಡುಗಡೆ ಮಾಡುವ ಸಿದ್ಧತೆಯಲ್ಲಿ ಚಿತ್ರತಂಡವಿದೆ. ಏಪ್ರಿಲ್ ಎರಡನೇ ವಾರದಲ್ಲಿ 5 ಭಾಷೆಗಳಲ್ಲಿ ಈ ಪ್ಯಾನ್ ಇಂಡಿಯಾ ಚಿತ್ರ ತೆರೆಗೆ ಬರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು