LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಖ್ಯಾತ ಕಬಡ್ಡಿ ಆಟಗಾರ ಅರ್ಜುನ್ ಚಕ್ರವರ್ತಿ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್

ಅರ್ಜುನ್ ಚಕ್ರವರ್ತಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು, ಪದಕವನ್ನು ಹಿಡಿದುಕೊಂಡು ಮೈಕ್ ಮುಂದೆ ತಮ್ಮ ಗೆಲುವಿನ ಕ್ಷಣವನ್ನು ಅರ್ಜುನ್ ಚಕ್ರವರ್ತಿ ವಿವರಿಸಿದ್ದಾರೆ. ವಿಕ್ರಾಂತ್ ರುದ್ರ ನಿರ್ದೇಶನದ ವಿಜಯ ರಾಮರಾಜು ಅರ್ಜುನ್ ಚಕ್ರವರ್ತಿಯಾಗಿ ನಟಿಸಿದ್ದು, ಸಿಜಾ ರೋಸ್ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಅರ್ಜುನ್ ಚಕ್ರವರ್ತಿ, 1980ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ ಕಬಡ್ಡಿ ಆಟಗಾರ ನೈಜ ಕಥೆಯನ್ನು ಆಧರಿಸಿದೆ. ಒಬ್ಬ ಕ್ರೀಡಾಪಟುವಿನ ಜೀವನದ ಹೋರಾಟಗಳು ಮತ್ತು ಗೆಲುವಿನ ಸುತ್ತಾ ಸಿನಿಮಾ ಸಾಗುತ್ತದೆ. ಪೋಷಕ ಪಾತ್ರಗಳಲ್ಲಿ ಅಜಯ್, ದಯಾನಂದ ರೆಡ್ಡಿ, ಅಜಯ್ ಘೋಷ್ ಮತ್ತು ದುರ್ಗೇಶ್ ಇದ್ದಾರೆ.

ವಿಘ್ನೇಶ್ ಬಾಸ್ಕರನ್ ಸಂಗೀತ ಮತ್ತು ಜಗದೀಶ್ ಚೀಕಾಟಿ ಛಾಯಾಗ್ರಹಣವಿದೆ. ಗ್ಯಾನೆಟ್ ಸೆಲ್ಯುಲಾಯ್ಡ್ ಅಡಿಯಲ್ಲಿ ನಿರ್ಮಾಪಕ ಶ್ರೀನಿ ಗುಬ್ಬಾಳ ಚಿತ್ರಕ್ಕೆ ಹಣ ಹಾಕಿದ್ದಾರೆ. ಚಿತ್ರವನ್ನು ತೆಲುಗು ಮತ್ತು ತಮಿಳಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗುತ್ತಿದ್ದು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ಡಬ್ ಮಾಡಲಾಗುತ್ತದೆ. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ಶ್ರೀನಿ ಗುಬ್ಬಾಳ, ಅರ್ಜುನ್ ಚಕ್ರವರ್ತಿ: ಜರ್ನಿ ಆಫ್ ಅನ್ಸಂಗ್ ಚಾಂಪಿಯನ್" ಕೇವಲ ಸಿನಿಮಾವಲ್ಲ.

ಸವಾಲುಗಳನ್ನು ಮೀರಿ ಎದ್ದುನಿಲ್ಲುವ ಮತ್ತು ನಮಗೆಲ್ಲರಿಗೂ ಸ್ಫೂರ್ತಿ ನೀಡುವ ವ್ಯಕ್ತಿಗಳ ಅದಮ್ಯ ಮನೋಭಾವಕ್ಕೆ ಗೌರವವಾಗಿದೆ. ಅರ್ಜುನ್ ಚಕ್ರವರ್ತಿ ಸಿನಿಮಾ ಮೂಲಕ ನಾವು ಮಾನವ ಇಚ್ಛೆಯ ಶಕ್ತಿಯನ್ನು ಮತ್ತು ಮಾನವ ಆತ್ಮದ ವಿಜಯವನ್ನು ಪ್ರದರ್ಶಿಸಲು ಬಯಸುತ್ತೇವೆ ಎಂದು ತಿಳಿಸಿದ್ದಾರೆ..

ತೆರೆ ಮೇಲೆ ಸಾಧಕಿಯ ಯಶೋಗಾಥೆಇತ್ತೀಚೆಗೆ ಚಂದನವನದಲ್ಲಿ ಸತ್ಯಘಟನೆಗಳ ಸಿನಿಮಾಗಳು ಜನರ ಮನಸೆಳೆಯುತ್ತಿದೆ. ಅದೇ ರೀತಿ ಬದುಕಿನಲ್ಲಿ ಸಾಧನೆ ಮಾಡಿರುವವರ ಚಿತ್ರಗಳು ಇಂದಿನ ಯುವಜನತೆಗೆ ಪ್ರೇರಣೆಯಾಗುತ್ತಿದೆ. ಆ ಸಾಲಿಗೆ ರಾಮನಗರದ ವಿ.ಆಶಾ ಸೇರ್ಪಡೆಯಾಗುತ್ತಾರೆ. ಇವರು 2016ರಿಂದ ಅನಾಥ ಶವಗಳಿಗೆ ವಾರಸುದಾರರಾಗಿ ಅಂದಾಜು 5000 ಶವಗಳಿಗೆ ಅಂತಿಮಕ್ರಿಯೆಗಳನ್ನು ಮಾಡಿಸುವಲ್ಲಿ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ. ಆಂಬುಲೆನ್ಸ್ ಚಾಲಕರಾಗಿರುವ ಮಾವ ಪ್ರವೀಣ್ಕುಮಾರ್ ನೀಡಿದ ಧೈರ್ಯ, ಪೆÇ್ರೀತ್ಸಾಹವೇ ಇಂತಹ ಕೈಂಕರ್ಯ ಮಾಡಲು ಸಾಧ್ಯವಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು