LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕಿಸ್ಥಾನದ ಆಲ್‍ರೌಂಡರ್ ಇಮಾದ್ ವಿದಾಯ

ಲಾಹೋರ್: ಪಾಕಿಸ್ಥಾನದ ಆಲ್‍ರೌಂಡರ್ ಇಮಾದ್ ವಾಸಿಮ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಘೋಷಿಸಿದ್ದಾರೆ. ತಮ್ಮ ನಿರ್ಧಾರವನ್ನು ಅವರು ಎಕ್ಸ್‍ನಲ್ಲಿ ಪ್ರಕಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಸಾಕಷ್ಟು ಯೋಚನೆ ಮಾಡಿ ಅಂತಿಮವಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ.

ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಗೆ ಇದೇ ಸರಿಯಾದ ಸಮಯ. ಕಳೆದ ಅನೇಕ ವರ್ಷಗಳಿಂದ ನನಗೆ ಪ್ರೋತ್ಸಾಹ ನೀಡುತ್ತಲೇ ಬಂದ ಪಿಸಿಬಿಗೆ, ಪಾಕಿಸ್ಥಾನದ ಕ್ರಿಕೆಟ್ ಅಭಿ ಮಾನಿಗಳಿಗೆ ಕೃತಜ್ಞತೆಗಳು. ನನ್ನ ಕುಟುಂಬದವರಿಗೆ, ಸ್ನೇಹಿತರಿಗೆ ಧನ್ಯವಾದಗಳು. ಪಾಕಿಸ್ಥಾನವನ್ನು ಪ್ರತಿನಿಧಿಸಿದ್ದು ನನ್ನ ಪಾಲಿನ ಹೆಮ್ಮೆ. ಅಂತಾರಾಷ್ಟ್ರೀಯ ಕ್ರಿಕೆಟ್‍ನಿಂದಾ ಚೆಯ ವೃತ್ತಿ ಬದುಕನ್ನು ನಾನಿನ್ನು ಅರಸಿಕೊಳ್ಳಬೇಕಿದೆ ಎಂಬುದಾಗಿ ಇಮಾದ್ ವಾಸಿಮ್ ಹೇಳಿದರು.

ಎಡಗೈ ಬ್ಯಾಟರ್ ಹಾಗೂ ಸ್ಪಿನ್ ಬೌಲರ್ ಆಗಿದ್ದ ಇಮಾದ್ ವಾಸಿಮ್ ಪಾಕಿಸ್ಥಾನ ಪರ 55 ಏಕದಿನ ಹಾಗೂ 66 ಟಿ20 ಪಂದ್ಯಗಳನ್ನು ಆಡಿದ್ದಾರೆ. ಕ್ರಮವಾಗಿ 986 ಮತ್ತು 486 ರನ್ ಮಾಡಿದ್ದಾರೆ. ಉರುಳಿಸಿದ ವಿಕೆಟ್‍ಗಳ ಸಂಖ್ಯೆ 109 (44 ಮತ್ತು 65). ಈ ವರ್ಷದ ಆರಂಭದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ರಾವಲ್ಪಿಂಡಿಯಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ಇಮಾದ್ 2017ರ ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡದ ಸದಸ್ಯನಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು