LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

"ವಿದ್ಯುತ್‌ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವು, ರೈತನ ಬಂಧನ"

ಬೆಳಗಾವಿ: ಬೆಳಗಾವಿ ಜಿಲ್ಲೆಯಖಾನಾಪುರತಾಲೂಕಿನ ಸುಳೆಗಾಳಿ ಗ್ರಾಮದಲ್ಲಿ ವಿದ್ಯುತ್‌ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದದಾರುಣಘಟನೆ ನಡೆದಿದೆ. ರೈತರಜಮೀನಿನ ಬಳಿ ತಂತಿ ಬೇಲಿಗೆ ವಿದ್ಯುತ್‌ಕನೆಕ್ಷನ್ ನೀಡಿದ್ದಕಾರಣ ಈ ದುರ್ಘಟನೆ ಸಂಭವಿಸಿದೆ. ಒಂದುಗAಡು ಮತ್ತು ಮತ್ತೊಂದು ಹೆಣ್ಣು ಆನೆ ಮೃತಪಟ್ಟಿದ್ದು, ಭಾನುವಾರ ಮಧ್ಯಾಹ್ನಘಟನೆ ನಡೆದಿದೆ.ಜಮೀನಿನ ಬೇಲಿಗೆ ಅಕ್ರಮವಾಗಿ ಮನೆಯಿಂದ ವಿದ್ಯುತ್ ಸಂಪರ್ಕ ನೀಡಿದ್ದಆರೋಪದಲ್ಲಿರೈತಗಣಪತಿ ಸಾತೇರಿಗುರವ್‌ಅವರನ್ನುಅರಣ್ಯ ಇಲಾಖೆ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆಒಪ್ಪಿಸಲಾಗಿದೆ. ಇದೇ ಪ್ರಕರಣದಲ್ಲಿಗಣಪತಿಯ ಮಗ ಶಿವಾಜಿ ಗುರವ್ ಪರಾರಿಯಾಗಿದ್ದಾನೆಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಕುರಿತುಅರಣ್ಯ ಸಚಿವಈಶ್ವರ್‌ಖಂಡ್ರೆತೀವ್ರಆಕ್ರೋಶ ವ್ಯಕ್ತಪಡಿಸಿದ್ದು ತನಿಖೆಗೆ ಆದೇಶಿಸಿದ್ದಾರೆ.ಜತೆಗೆ, ಐದು ದಿನಗಳ ಒಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಆರ್‌ಎಫ್‌ಓ ಶಿವಾನಂದ ಅವರ ನೇತೃತ್ವದತಂಡ ಸ್ಥಳದಲ್ಲಿ ಮಾಹಿತಿ ಕಲೆ ಹಾಕಿದ್ದು, ತನಿಖೆ ನಡೆಸುತ್ತಿದೆ. ಆನೆಗಳ ಮರಣೋತ್ತರ ಪರೀಕ್ಷೆಇಂದು ಬೆಳಿಗ್ಗೆ ನೆರವೇರಿಸಲಾಯಿತು.ಬಳಿಕ ಅರಣ್ಯಇಲಾಖೆಯ ವತಿಯಿಂದಅAತ್ಯಕ್ರಿಯೆ ನೆರವೇರಿಸಲಾಯಿತು. ವಿದ್ಯುತ್ ಸಂಪರ್ಕ ವಿಚಾರವಾಗಿ, ಅಧಿಕಾರಿಗಳ ನಿರ್ಲಕ್ಷ÷್ಯ ಹಿನ್ನೆಲೆಯಲ್ಲಿಅವರಿಗೂಅರಣ್ಯ ಇಲಾಖೆ ನೋಟಿಸ್ ನೀಡಿದೆ. ಈ ಘಟನೆಕರ್ನಾಟಕದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷದ ಬಗ್ಗೆ ಮತ್ತೆಚರ್ಚೆಹುಟ್ಟುಹಾಕಿದೆ.ವನ್ಯಜೀವಿ ಸುರಕ್ಷತೆ ಹಾಗೂ ಜನರರಕ್ಷಣೆ ಬಗ್ಗೆಯೂ ಚರ್ಚೆಗಳು ನಡೆಯುತ್ತಿದ್ದು, ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು