LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೆಟ್ರೋ ಸಿಬ್ಬಂದಿಯಿಂದ ರೈತನಿಗೆ ಅವಮಾನ

ಬೆಂಗಳೂರು: ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಅವಮಾನಿಸಿದ್ದಾರೆ. ಅತಿರೇಕದ ವರ್ತನೆ ತೋರಿದ್ದಾರೆ. ದೇಶದ ಬೆನ್ನೆಲುಬು ರೈತನಿಗೆ ಬೆಂಗಳೂರು ಮೆಟ್ರೋದಲ್ಲಿ ಅವಮಾನ ಆಗಿದೆ. ಬಟ್ಟೆ ಕ್ಲೀನ್ ಇಲ್ಲ ಎಂಬ ಕಾರಣಕ್ಕೆ ರೈತನನ್ನ ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದಾರೆ.

ಬಡ ರೈತನ ಮೇಲೆ ಸಿಬ್ಬಂದಿಯ ವರ್ತನೆ ಪ್ರಯಾಣಿಕನ ಮೊಬೈಲ್‍ನಲ್ಲಿ ಸೆರೆಯಾಗಿದೆ. ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದಾರೆ. ಪ್ರಯಾಣಿಕರಿಗೆ ತೊಂದರೆ ಆಗುತ್ತೆ ಅಂತ ಒಳಗೆ ಬಿಡ್ತಿಲ್ಲ ಎಂದು ಪ್ರಯಾಣಿಕರಿಗೆ ಆಕ್ರೋಶ ಹೊರ ಹಾಕಿದ್ದಾರೆ. ಕೊನೆಗೆ ಸಿಬ್ಬಂದಿಗೆ ಕ್ಯಾರೇ ಮಾಡದೇ ಸಹ ಪ್ರಯಾಣಿಕರೇ ರೈತರನ್ನು ಕರೆದುಕೊಂಡು ಹೋಗಿದ್ದಾರೆ. ಸಿಬ್ಬಂದಿ ಅತಿರೇಕದ ವರ್ತನೆಯ ವಿಡಿಯೋ ಎಕ್ಸ್(ಟ್ವಿಟರ್)ನಲ್ಲಿ ಪೋಸ್ಟ್ ಮಾಡಲಾಗಿದೆ.

ಬಿಎಂಆರ್‍ಸಿಎಲ್‍ಗೆ ಟ್ಯಾಗ್ ಮಾಡಿ ವಿಐಪಿಗಳಿಗೆ ಮಾತ್ರನಾ ಮೆಟ್ರೋ ಅಂತ ಕಿಡಿಕಾರಿದ್ದಾರೆ. ರೈತ ಬೆಳೆ ಬೆಳೆದಿಲ್ಲ ಅಂದ್ರೆ ನೀವು ಏನು ತಿಂತೀರಾ ಅಂತ ಜನರು ಪ್ರಶ್ನೆ ಮಾಡಿದ್ದಾರೆ. ಮೆಟ್ರೋ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಟ್ವಿಟರ್ ಬಳಕೆದಾರರು ಆಗ್ರಹಿಸಿದ್ದಾರೆ. ಸಿಬ್ಬಂದಿಯ ಈ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಟ್ವಿಟ್‍ನಿಂದ ಜಾಗೃತಗೊಂಡ ಮೆಟ್ರೋ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಭದ್ರತಾ ಸಿಬ್ಬಂದಿಯ ಮೇಲ್ವಿಚಾರಕನನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು