LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಫಾದರ್ಸ್ ಡೇ' ಚಿತ್ರದ ಟ್ರೇಲರ್ ಬಿಡುಗಡೆ

ELEVEN ELEMENTS ಸಂಸ್ಥೆ ಲಾಂಛನದಲ್ಲಿ ರಾಜಾರಾಮ್ ರಾಜೇಂದ್ರನ್ ನಿರ್ಮಾಣ ನಿರ್ದೇಶನ ಮಾಡಿರುವ ಚಿತ್ರ "ಫಾದರ್ಸ್ ಡೇ".
ತಂದೆ - ಮಗನ ಬಾಂಧವ್ಯ ಸಾರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಇದು ಕನ್ನಡದ ಮೊದಲ ಬೈಕರ್ ಚಿತ್ರ...
ಹರ್ಷಿಲ್ ಕೌಶಿಕ್ ಹಾಗೂ ಅಜಿತ್ ಹಂದೆ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಹೆಸರಾಂತ ಗಾಯಕ ALL OK, ಸಾಮ್ರಾಗ್ನಿ ರಾಜನ್, ಕ್ಷೇಮ ಶೆಟ್ಟಿ, ಬಾಸ್ಕಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಈ ಚಿತ್ರದ ಕಥೆ ಇಬ್ಬರು ಬೈಕರ್ ಗಳ ಸುತ್ತ ಸಾಗುತ್ತದೆ. ಇಬ್ಬರು ಸಹ ಪಯಣಿಗರ ನಡುವಿನ ಕಥೆಯೂ ಎಲ್ಲರ ಗಮನ ಸೆಳೆಯುತ್ತದೆ. ಕೊನೆಗೆ ಯಾರು ನಿರೀಕ್ಷಿಸದ ಕ್ಲೈಮ್ಯಾಕ್ಸ್ ಸಹ "ಫಾದರ್ಸ್ ಡೇ" ಚಿತ್ರದಲ್ಲಿದೆ. ಕನ್ನಡದಲ್ಲಿ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ನಿರ್ದೇಶಕ ರಾಜಾರಾಮ್ ರಾಜೇಂದ್ರನ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಚಿತ್ರ ತೆರೆಗೆ ಬರಲು ಅಣಿಯಾಗುತ್ತಿದೆ. ಬಿಡುಗಡೆಗೂ ಪೂರ್ವಭಾವಿಯಾಗಿ ಟ್ರೇಲರ್ ಸಹ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಜ್ಯೋಲ್ಸಾ÷್ನ ಪ್ಯಾನಿಕರ್ ಸಂಕಲನ ಹಾಗೂ ಜೋ ಪ್ಯಾನಿಕರ್ ಸಂಗೀತ ನಿರ್ದೇಶನ "ಫಾದರ್ಸ್ ಡೇ" ಚಿತ್ರದ ಕ್ರಿಯೇಟಿವ್ ನಿರ್ಮಾಪಕರಾಗಿ ನಿಧಿ ಜೋಶಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಅವಿನಾಶ್ ಡ್ಯಾನಿಯಲ್ ಕಾರ್ಯ ನಿರ್ವಹಿಸಿದ್ದಾರೆ.
ಚಿತ್ರದಲ್ಲಿ "ಬ್ಲೂಸ್" ಶೈಲಿಯಿಂದ ಪ್ರೇರಿತವಾದ ಸಂಗೀತವಿದೆ. ಈ ಶೈಲಿಯ ಸಂಗೀತ ಸಂಯೋಜನೆ ಕನ್ನಡದಲ್ಲಿ ಇದೇ ಮೊದಲ ಬಾರಿ ಎಂದು ತಿಳಿಸಿರುವ ನಿರ್ಮಾಪಕ ಹಾಗೂ ನಿರ್ದೇಶಕ ರಾಜಾರಾಮ್ ರಾಜೇಂದ್ರನ್, ಪಿ.ವಿ.ಆರ್ - ಐನಾಕ್ಸ್ ಪಿಕ್ಚರ್ಸ್ ಮೂಲಕ "ಫಾದರ್ಸ್ ಡೇ" ಚಿತ್ರ ಬಿಡುಗಡೆಯಾಗುತ್ತಿದೆ ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು