LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

Fengal ಸೈಕ್ಲೋನ್ ಎಫೆಕ್ಟ್: ಶ್ರೀಲಂಕಾದಲ್ಲಿ 15 ಮಂದಿ ಸಾವು

ಕೊಲಂಬೊ: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಪ್ರತಿಕೂಲ ಹವಾಮಾನದಿಂದ ತೀವ್ರ ಮಳೆಯಿಂದ ಉಂಟಾದ ಪ್ರಕೃತಿ ವಿಕೋಪದಿಂದ ಶ್ರೀಲಂಕಾದಲ್ಲಿ ಹದಿನೈದು ಜನರನ್ನು ಬಲಿ ತೆಗೆದುಕೊಂಡಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (DMC) ತಿಳಿಸಿದೆ.

450,000 ಕ್ಕೂ ಹೆಚ್ಚು ಜನರು ಪ್ರವಾಹ, ತೀವ್ರ ಗಾಳಿ ಮತ್ತು ಭೂಕುಸಿತದಂತಹ ದುರ್ಘಟನೆಗಳಿಗೆ ಸಿಲುಕಿದ್ದಾರೆ. ಇದುವರೆಗೆ ಹದಿನೈದು ಜನರು ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು 10 ಮಂದಿ ಮೃತಪಟ್ಟಿದ್ದಾರೆ.

ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಆಳವಾದ ವಾಯುಭಾರ ಕುಸಿತದಿಂದ ಈ ರೀತಿ ಆಗಿದ್ದು, ಇಂದು ತಮಿಳು ನಾಡು ತೀರಕ್ಕೆ ಚಂಡಮಾರುತ ಅಪ್ಪಳಿಸಿದೆ.

ಶ್ರೀಲಂಕಾದ ಉತ್ತರ ಮಧ್ಯ ಮತ್ತು ಪೂರ್ವ ಟ್ರಿಂಕೋಮಲಿ ಜಿಲ್ಲೆಗಳಲ್ಲಿ 100 ಮಿ.ಮೀ ಗಿಂತ ಹೆಚ್ಚಿನ ಮಳೆ ಬೀಳುವ, ಗಂಟೆಗೆ 60 ಕಿಮೀ ವೇಗದಲ್ಲಿ ಭಾರೀ ಗಾಳಿ ಬೀಸುವ ನಿರೀಕ್ಷೆಯಿದೆ.

ಪೂರ್ವ ಪಟ್ಟಣವಾದ ಸಮ್ಮಂತುರೈನಲ್ಲಿ ಪ್ರವಾಹ ನೀರಿನಿಂದ ಆರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಬಂಧಿಸಲಾಗಿದೆ. ಬಸ್‌ಗಳ ಕೊರತೆಯಿಂದಾಗಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸಲು ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ತಿಳಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು