LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಹೋರಾಟ ನಡೆಸಲಿ: ತಾಯೂರು ಪ್ರಕಾಶ್ ಒತ್ತಾಯ

ಮಾಜಿ ಸಂಸದ ಉಗ್ರಪ್ಪ ಅವರ ಆಗ್ರಹಕ್ಕೆ ಬೆಂಬಲ; ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ, ಉದ್ಯೋಗದಲ್ಲೂ ಮೀಸಲಾತಿ ಜಾರಿಗೊಳಿಸಲು ಒತ್ತಾಯ


ತಿ. ನರಸೀಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಹೆಚ್ಚಳ ಜಾರಿಗೊಳಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಈ ವಿಚಾರದಲ್ಲಿ ಮಾಜಿ ಸಂಸದ ಉಗ್ರಪ್ಪ ಅವರು ವ್ಯಕ್ತಪಡಿಸಿರುವ ಆಗ್ರಹಕ್ಕೆ ನಮ್ಮ ಸಂಪೂರ್ಣ ಬೆಂಬಲವಿದ್ದು, ಮೀಸಲಾತಿ ಹಕ್ಕು ಪಡೆಯಲು ಸರ್ಕಾರ ಸುಪ್ರೀಂ ಕೋರ್ಟ್ವರೆಗೂ ಕಾನೂನು ಹೋರಾಟ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಮೈಸೂರು ಜಿಲ್ಲಾಧ್ಯಕ್ಷ ತಾಯೂರು ಪ್ರಕಾಶ್ ಒತ್ತಾಯಿಸಿದರು.ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಸಿ ಸಮುದಾಯಕ್ಕೆ ಶೇ.17 ಹಾಗೂ ಎಸ್‌ಟಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದರೂ, ನ್ಯಾಯಾಲಯದ ತಡೆಯಿಂದಾಗಿ ಸಮುದಾಯಗಳಿಗೆ ನಿರೀಕ್ಷಿತ ಪ್ರಯೋಜನ ದೊರೆಯುತ್ತಿಲ್ಲ. ಇದರಿಂದ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಅವಕಾಶಗಳು ಕಡಿಮೆಯಾಗುತ್ತಿವೆ ಎಂದು ಹೇಳಿದರು.ಮೀಸಲಾತಿ ಎನ್ನುವುದು ಯಾವುದೇ ಸಮುದಾಯಕ್ಕೆ ನೀಡುವ ಕೊಡುಗೆಯಲ್ಲ, ಅದು ಸಂವಿಧಾನಬದ್ಧ ಹಕ್ಕಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಕ್ಷೇತ್ರದಲ್ಲಿ ಪ್ರಾತಿನಿಧ್ಯ ಹಾಗೂ ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳಡಿ ಅನುದಾನ ಹಂಚಿಕೆ ಮಾಡುವಾಗ ಅನುಸರಿಸುವ ಮಾನದಂಡವನ್ನು ಶಿಕ್ಷಣ ಮತ್ತು ಉದ್ಯೋಗದಲ್ಲಿಯೂ ಅನುಸರಿಸಬೇಕು ಎಂದರು.ಮೀಸಲಾತಿ ಹೆಚ್ಚಳ ಕಾಯ್ದೆಗೆ ಸಂವಿಧಾನದ ಒಂಬತ್ತನೇ ಅನುಸೂಚಿಯ ರಕ್ಷಣೆ ಒದಗಿಸಲು ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು. ಸರ್ವಪಕ್ಷ ನಿಯೋಗದ ಮೂಲಕ ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿ ನ್ಯಾಯ ಪಡೆಯಬೇಕು ಎಂದು ಆಗ್ರಹಿಸಿದರು.ವಾಲ್ಮೀಕಿ ಸಮುದಾಯ ಸೇರಿದಂತೆ ಮೀಸಲಾತಿ ಹಕ್ಕಿನಿಂದ ವಂಚಿತರಾಗಿರುವ ಎಲ್ಲ ಅರ್ಹ ಸಮುದಾಯಗಳಿಗೆ ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸಲಾಗುವುದು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾಗೃತಿ ಮೂಡಿಸುವ ಕಾರ್ಯಕ್ಕೆ ಸಂಘಟನೆಗಳು ಕೈಜೋಡಿಸಲಿವೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸಮಾನ  ಮನಸ್ಕರ   ವೇದಿಕೆಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಉಗ್ರಪ್ಪ, ಕಾರ್ಯಾಧ್ಯಕ್ಷ  ಎಂ ನರಸಿಂಹಯ್ಯ, ಉದ್ಯಮಿ ಸಂಘಟನೆಯ ಖಜಾಂಚಿ ಈ.ರಾಜಪ್ಪ, ನಿವೃತ್ತ ಅಭಿಯಂತರ ಹನುಮಂತರಾಯಪ್ಪ, ದಾವಣಗೆರೆ ನಗರ ಪಾಲಿಕೆ ಮಾಜಿ ಸದಸ್ಯ ಗಣೇಶ್ ಉಲ್ಮನಿ, ಕೆ. ಎಮ್ ಮಧುಸೂಧನ್     ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST