LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕಿರುತೆರೆ ರಿಯಾಲಿಟಿ ಶೋ: ರಮೇಶ್ ಅರವಿಂದ್, ಅನುಶ್ರೀ, ಪ್ರೇಮಾ ವಿರುದ್ಧ ದೂರು ದಾಖಲು

ಕನ್ನಡ ಕಿರುತೆರೆ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ವಿವಾದಕ್ಕೆ ಕಾರಣವಾಗಿದೆ. ಇತ್ತೀಚೆಗೆ ಆ ಶೋನಲ್ಲಿ ಬಳಸಿದ ಡೈಲಾಗ್ ಶ್ರಮಿಕ ವರ್ಗದವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಶೋ ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರ ವಿರುದ್ಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಿಯಾಲಿಟಿ ಶೋನಲ್ಲಿ ಸ್ಪರ್ಧಿ ಗಗನಾ ಸ್ಕಿಟ್ ವೇಳೆ ಹೇಳಿದ್ದ ಡೈಲಾಗ್ ಬಗ್ಗೆ ಫ್ರೆಂಡ್ಸ್ ದ್ವಿಚಕ್ರ ವಾಹನ ವರ್ಕ್‍ಶಾಪ್ ಮಾಲೀಕರು ಹಾಗೂ ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೆಕಾನಿಕ್ ಕೆಲಸ ಮಾಡುವ ಶ್ರಮಿಕ ವರ್ಗದವನ್ನು ಶೋನಲ್ಲಿ ಕೀಳಾಗಿ ನಿಂದಿಸಿದ್ದಾರೆ, ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

ಶೋನಲ್ಲಿ ತೀರ್ಪುಗಾರದಾದ ರಮೇಶ್ ಅರವಿಂದ್ ಸ್ಪರ್ಧಿಗಳಿಗೆ ಒಂದೊಂದು ಕಾನ್ಸೆಪ್ಟ್ ಕೊಟ್ಟು ಕೂಡಲೇ ನಟನೆ ಮಾಡಿ ತೋರಿಸುವಂತೆ ಹೇಳುತ್ತಾರೆ. ಕೂಡಲೇ ಡೈಲಾಗ್ ಸಿದ್ಧಪಡಿಸಿಕೊಂಡು ನಟಿಸಬೇಕು. ಸ್ಪರ್ಧಿ ಗಗನಾಗೆ ಮೆಕ್ಯಾನಿಕ್ ಲೈಫ್ ಬಗ್ಗೆ ಕಾನ್ಸೆಪ್ಟ್ ಕೊಟ್ಟಿದ್ದರು. ನಿಮ್ಮ ತಂಗಿ ಮೆಕ್ಯಾನಿಕ್‍ನ ಲವ್ ಮಾಡುತ್ತಿದ್ದರೆ ಏನು ಮಾಡುತ್ತೀಯಾ? ಎಂದಾಗ ಡೈಲಾಗ್ ಹೇಳುವ ಭರದಲ್ಲಿ "ಗ್ರೀಸ್ ತಿಂದು ಬದುಕಬೇಕಾಗುತ್ತದೆ" ಎಂದು ಗಗನಾ ಹೇಳಿದ್ದರು. ಆ ಡೈಲಾಗ್‍ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಇದೇ ಡೈಲಾಗ್ ಬಗ್ಗೆ ಈಗ KTWOTA ಸಹಯೋಗದೊಂದಿಗೆ ಫ್ರೆಂಡ್ಸ್ ದ್ವಿಚಕ್ರ ವಾಹನ ವರ್ಕ್‍ಶಾಪ್ ಮಾಲೀಕರು ಹಾಗೂ ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದವರು ದೂರು ದಾಖಲಿಸಿ ಕ್ಷಮೆ ಕೇಳುವಂತೆ ಹೇಳುತ್ತಿದ್ದಾರೆ.ಶ್ರಮಿಕ ವರ್ಗದ ಶ್ರಮದ ಬಗ್ಗೆ ಆ ವೃತ್ತಿಯ ಬಗ್ಗೆ ವ್ಯಂಗ್ಯ, ಕುಹಕ ಮಾತನಾಡಿರುವ ಗಗನಾ, ಆಕೆಗೆ ಉತ್ತೇಜನ ನೀಡುವಂತೆ ಮಾತನಾಡಿದ ನಟ ರಮೇಶ್ ಅರವಿಂದ್, ತೀರ್ಪುಗಾರರಾದ ಪ್ರೇಮಾ, ನಿರೂಪಕಿ ಅನುಶ್ರೀ, ನಿರ್ಮಾಪಕ ರಾಘವೇಂದ್ರ ಹುಣಸೂರು ಹಾಗೂ ನಿರ್ದೇಶಕರ ವಿರುದ್ದ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಮೆಕ್ಯಾನಿಕ್ ಸಂಘದವರು ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಮುದಾಯಗಳ ನಡುವೆ ದ್ವೇಷ ಭಾವನೆ ಬಿತ್ತುವ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ, ಶ್ರಮಿಕರನ್ನು ಅವಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ದಸಂದ ತಾಲ್ಲೂಕು ಸಂಚಾಲಕ ಸಿ. ಎಲ್ ಲಿಂಗದೇವರು, ಸಂಘದ ಅಧ್ಯಕ್ಷ ನಿಸಾರ್ ಅಹಮದ್, ಕಾರ್ಯದರ್ಶಿ ಮೋಮಿನ್, ನಿರ್ದೇಶಕ ಚಂದ್ರು, ಯೋಗೀಶ್ ಸೇರಿದಂತೆ ಹಲವರು ಈ ವೇಳೆ ಸ್ಥಳದಲ್ಲಿ ಹಾಜರಿದ್ದರು. ವಾಹಿನಿಯವರು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು