LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

`ದೇಶದ್ರೋಹಿ ಅನಂತ್‍ಕುಮಾರ್ ಹೆಗಡೆ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿ'

ಬೆಂಗಳೂರು: ಭಾರತದ ಪ್ರಜಾಪ್ರಭುತ್ವವನ್ನು ಕಾಪಿಟ್ಟುಕೊಂಡು ಬಂದಿರುವ ಸಂವಿಧಾನವನ್ನು ಬದಲಿಸುತ್ತೇವೆ ಎನ್ನುವುದು ದೇಶದ್ರೋಹದ ಹೇಳಿಕೆಯಾಗಿದೆ. ಪದೇಪದೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎನ್ನುತ್ತಿರುವ ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ರಾಜ್ಯ ಸರ್ಕಾರ ಸ್ವಯಂ ಪ್ರೇರಿತ ದೂರು (ಸುಮೊಟೊ) ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲ್ಲೂಕಿನ ಹಲಗೇರಿ ಗ್ರಾಮದಲ್ಲಿ ಕಾರ್ಯಕರ್ತರ ಸಭೆ ಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸೀಟು ಗೆಲ್ಲಬೇಕು. ರಾಜ್ಯಸಭೆಯಲ್ಲೂ ನಮಗೆ ಬಹುಮತ ಸಿಕ್ಕಿದರೆ ಸಂವಿಧಾನ ತಿದ್ದುಪಡಿ ಮಾಡಲಾಗುತ್ತೆ. ಆಗ ಇದೆ ನೋಡಿ ನಿಜವಾದ ಮಾರಿ ಹಬ್ಬ ಎಂದು ಅನಂತ್ ಕುಮಾರ್ ಹೇಳಿಕೆ ನೀಡಿರುವ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜನತೆ ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ದಬ್ಬಿದ್ದಾರೆ. ಇದೀಗ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸುವ ಜವಾಬ್ದಾರಿ ಹೊತ್ತಿರುವ ರಾಜ್ಯ ಸರ್ಕಾರ ಅನಂತ ಕು ಮಾರ್ ಅವರಂತಹ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಗಟ್ಟಿಗುಂಡಿಗೆಯ ನಿರ್ಧಾರಗಳನ್ನು ಕೈಗೊಳ್ಳಬೇಕು. ಎಲ್ಲ ವಿಚಾರಕ್ಕೂ ಹೆದರಿಕೊ ಂಡು ಕುಳಿತುಕೊಳ್ಳುವುದು ತಮ್ಮ ಹುದ್ದೆಗೆ ಶೋಭೆಯಲ್ಲ ಎಂದರು.

ಅನಂತ್ ಕುಮಾರ್ ಅವರ ಸಂವಿಧಾನ ತಿದ್ದುಪಡಿಯ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ಅದು ಕೇವಲ ಹೆಗಡೆ ಅವರ ವೈಯಕ್ತಿಕ ಹೇಳಿಕೆ ಅಲ್ಲ. ಬಿಜೆಪಿ ಮತ್ತು ಆರ್‍ಎಸ್‍ಎಸ್‍ನ ಮೂಲ ಉದ್ದೇಶವೇ ಸಂವಿಧಾನ ಬದಲಿಸುವುದಾಗಿದೆ. ಪ್ರಜಾಪ್ರಭುತ್ವವನ್ನು ಹದ್ದುಬಸ್ತಿನಲ್ಲಿಟ್ಟು ಸರ್ವಾಧಿಕಾರವನ್ನು ಹೇರುವುದಾಗಿದೆ.

ಉಳ್ಳವರು ಬಡವರನ್ನು ಗುಲಾಮಗಿರಿ ತಳ್ಳುವ ವ್ಯವಸ್ಥಿತ ಕುತಂತ್ರವಾಗಿದೆ. ನಮ್ಮ ದೇಶದಲ್ಲಿ ಉತ್ತರ ಕೋರಿಯಾ, ರಷ್ಯಾ, ಚೀನಾದಂತಹ ಆಡಳಿತ ಹೇರುವ ಪ್ರಯತ್ನ ನಡೆದಿದೆ. ಪ್ರಜೆಗಳು ಎಚ್ಚೆತ್ತುಕೊಳ್ಳದಿದ್ದರೆ ಮತದಾನದ ಹಕ್ಕನ್ನೇ ಕಳೆದುಕೊಳ್ಳಲಿದ್ದಾರೆ. ಒಬಿಸಿ, ಎಸ್‍ಸಿ, ಎಸ್‍ಟಿ, ದಲಿತರು, ಬುಡಕಟ್ಟು ಜನಾಂಗದವರು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡು ಆರ್‍ಎಸ್‍ಎಸ್‍ನವರ ಕಾಲಾಳುಗಳಾಗುತ್ತಾರೆ ಎಂದು ಎಚ್ಚರಿಸಿದರು.

ಒಬ್ಬ ಪ್ರಜೆಗೆ ಮತದಾನ ಮಾಡುವ ಹಕ್ಕು ಇಲ್ಲ ಎಂದಾದರೆ ಆತ ಗುಲಾಮಗಿರಿಗೆ ತಳ್ಳಲ್ಪಟ್ಟಿದ್ದಾನೆ ಎಂದರ್ಥ. ಈ ಬಾರಿಗೆ ಬಿಜೆಪಿಗೆ ಮತ ಹಾಕಿದರೆ ಶಾಶ್ವತವಾಗಿ ಮತ ಹಾಕುವ ಹಕ್ಕನ್ನು ಕಳೆದುಕೊಳ್ಳುತ್ತೀರಿ. ಈ ದೇಶದಲ್ಲಿ ಮುಂದೆ ಚುನಾವಣೆಯೇ ನಡೆಯುವುದಿಲ್ಲ. ನರೇಂದ್ರ ಮೋದಿ ಸಾಯುವವರೆಗೆ ಭಾರತವನ್ನು ಆಳಿಕೊಂಡಿರುತ್ತಾರೆ. ಜನಾಂಗೀಯ ದ್ವೇಷ ಕೆನ್ನಾಲಿಗೆಯಂತೆ ಚಾಚಿಕೊಂಡು ಹಿಂದೆಂದೂ ಕಂಡಿರದ ರಕ್ತಾಪಾತವೇ ನಡೆಯುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ಕಳವಳ ವ್ಯಕ್ತಪಡಿಸಿದರು.

ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ತಳ್ಳಿ ಹಾಕುತ್ತಿರುವುದು ನ್ಯಾಯವಾದ ನಡೆಯಲ್ಲ. ಬಿಜೆಪಿಗೆ ಸಂವಿಧಾನದ ಮೇಲೆ ನಿಜಕ್ಕೂ ಗೌರವ ಇದ್ದರೆ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಬಾರದು. ಆತನನ್ನು ಪಕ್ಷದಿಂದ ಶಾಶ್ವತವಾಗಿ ಉಚ್ಛಾಟನೆ ಮಾಡಬೇಕು. ಇಲ್ಲದಿದ್ದರೆ ಅನಂತ್ ಕುಮಾರ್ ಹೇಳಿಕೆಯು ಪಕ್ಷದ ಅಧಿಕೃತ ಹೇಳಿಕೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಕಿಡಿಕಾರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು