LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬರಗೂರು ನಿರ್ದೇಶನದ ಸ್ವಪ್ನಮಂಟಪ ಚಿತ್ರೀಕರಣ ಮುಕ್ತಾಯ

ಮೈಸೂರಿನ ಬಾಬುನಾಯ್ಕ್ ಸ್ವಪ್ನಮಂಟಪ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ.ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ ಬರಗೂರು.

ಸ್ವಪ್ನಮಂಟಪ ಚಿತ್ರ ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.ಸ್ವಪ್ನಮಂಟಪ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ.

ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು