LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಾಂಸ ಇಲ್ಲದ ಬಿರಿಯಾನಿ ನೀಡಿದ್ದಕ್ಕೆ ದಂಡ

ಬೆಂಗಳೂರು: ಕೋಳಿ ಮಾಂಸ ಇಲ್ಲದ ಬಿರಿಯಾನಿ ನೀಡಿದ ತಪ್ಪಿಗಾಗಿ 1000 ರೂ. ಪರಿಹಾರ ಮತ್ತು 150 ರೂ. ಬಿರಿಯಾನಿ ಹಣವನ್ನು ಗ್ರಾಹಕನಿಗೆ ನೀಡುವಂತೆ ಹೋಟೆಲ್ ಮಾಲಿಕನಿಗೆ ಗ್ರಾಹಕರ ನ್ಯಾಯಾಲಯ ಆದೇಶ ನೀಡಿದೆ.ಕಳೆದ ಏಪ್ರಿಲ್ 2, 2023 ರಂದು ನಾಗರಭಾವಿ ನಿವಾಸಿ ಕೃಷ್ಣಪ್ಪ ಎಂಬುವರ ಮನೆಯಲ್ಲಿ ಅಡುಗೆ ಅನಿಲ ಖಾಲಿಯಾಯಿತು.

ಹೀಗಾಗಿ ದಂಪತಿಗಳು ಐಟಿಐ ಲೇಔಟ್‍ನಲ್ಲಿರುವ ಹೋಟೆಲ್ ಪ್ರಶಾಂತ್‍ಗೆ ತೆರಳಿದರು. ಹೋಟೆಲ್‍ನಲ್ಲಿ 150 ರೂಪಾಯಿ ಕೊಟ್ಟು ಚಿಕನ್ ಬಿರಿಯಾನಿ ಖರೀದಿಸಿದರು. ದಂಪತಿ ಮನೆಗೆ ಬಂದು ಪಾರ್ಸೆಲ್ ತೆರೆದು ನೋಡಿದಾಗ ಬಿರಿಯಾನಿಯಲ್ಲಿ ಒಂದು ಚೂರು ಮಾಂಸ ಇರಲಿಲ್ಲ.

ಕೂಡಲೇ ಕೃಷ್ಣಪ್ಪ ಅಂಗಡಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಚಿಕನ್ ಬಿರಿಯಾನಿಗೆ ಹಣ ಕೊಟ್ಟರೂ ಸಾದಾ ಬಿರಿಯಾನಿ ಕೊಡಲಾಗಿದೆ ಎಂದು ತಿಳಿಸಿದರು. ಆಗ ಹೊಟೇಲ್ ಮಾಲೀಕ, ಚಿಕನ್ ಬಿರಿಯಾನಿಯ ಪಾರ್ಸೆಲ್ ಸಿದ್ಧವಾಗಿದೆ 30 ನಿಮಿಷಗಳಲ್ಲಿ ನಿಮ್ಮ ನಿವಾಸದ ವಿಳಾಸಕ್ಕೆ ಕಳುಹಿಸಲಾಗುವುದು ಎಂದು ಹೇಳಿದನು. ಎರಡು ಗಂಟೆಗಳ ಕಾಯ್ದರೂ, ಚಿಕನ್ ಬಿರಿಯಾನಿ ಬರಲಿಲ್ಲ. ದಂಪತಿಗಳು ವಿಧಿ ಇಲ್ಲದೆ ರಾತ್ರಿ ಸಾದಾ ಬಿರಿಯಾನಿಯನ್ನೇ ತಿಂದು ಮಲಗಿದರು.

ಬಳಿಕ ಕೃಷ್ಣಪ್ಪ ಅವರು ಏಪ್ರಿಲ್ 28, 2023 ರಂದು ಹೋಟೆಲ್ ಮಾಲಿಕನಿಗೆ ತಾನು (ಕೃಷ್ಣಪ್ಪ) ಕಾನೂನು ಮೊರೆ ಹೋಗುವುದಾಗಿ ಸೂಚನೆ ನೀಡಿದರು. ಇದಕ್ಕೆ ಹೋಟೆಲ್ ಮಾಲಿಕ ಅದು ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಂತರ ಕೃಷ್ಣಪ್ಪ ಅವರು ಮೇ ತಿಂಗಳಿನಲ್ಲಿ ಶಾಂತಿನಗರದಲ್ಲಿರುವ ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಹೋಟೆಲ್ ಮಾಲಿಕರ ವಿರುದ್ಧ ದೂರು ದಾಖಲಿಸಿದರು. 30,000 ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಈ ಪ್ರಕರಣವನ್ನು ಕೃಷ್ಣಪ್ಪ ಅವರು ತಾವೇ ನ್ಯಾಯಾಲಯದಲ್ಲಿ ವಾದಿಸಿದರು. ಆದರೆ ಹೋಟೆಲ್ ಮಾಲಿಕರು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ನ್ಯಾಯಾಲಯವು ಕೃಷ್ಣಪ್ಪ ವಾದವನ್ನು ಆಲಿಸಿ ಮತ್ತು ನೀಡಿದ ಸಾಕ್ಷಾಧಾರವನ್ನು ಪರಿಶೀಲಿಸಿ ಅಕ್ಟೋಬರ್ 5, 2023 ರಂದು ತೀರ್ಪು ನೀಡಿತು.

ಹೋಟೆಲ್ ತಿಳಿದೋ ತಿಳಿಯದೆಯೋ ತಪ್ಪು ಮಾಡಿರುವುದು ಸ್ಪಷ್ಟವಾಗಿದೆ. ಹೋಟೆಲ್ ಗ್ರಾಹಕರಿಂದ ಚಿಕನ್ ಬಿರಿಯಾನಿಗೆ 150 ರೂ. ಪಡೆದು ತಪ್ಪಾದ ಪಾರ್ಸೆಲ್ ಅನ್ನು ನೀಡಿದೆ. ಇದು ಅನ್ಯಾಯ. ಅಲ್ಲದೆ ತಮ್ಮ ತಪ್ಪಿನ ಬಗ್ಗೆ ಹೋಟೆಲ್‍ಗೆ ಎಚ್ಚರಿಕೆ ನೀಡಿದರೂ ಬದಲಿ ಪಾರ್ಸಲ್ ಅನ್ನು ನೀಡದೆ ಗ್ರಾಹಕರಿಗೆ ಸೇವೆ ಸಲ್ಲಿಸುವಲ್ಲಿ ಹೋಟೆಲ್ ವಿಫಲವಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು